ನೂತನ ಕಂದಾಯ ಗ್ರಾಮದಲ್ಲಿ ಹಕ್ಕುಪತ್ರ ವಿತರಿಸಿ- ಶಿವರಾಜ ತಂಗಡಗಿ

KannadaprabhaNewsNetwork |  
Published : Oct 14, 2023, 01:00 AM IST
13ಕೆಪಿಎಲ್25 ಕೊಪ್ಪಳ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೂತನ ಕಂದಾಯ  ಗ್ರಾಮಗಳ ಕುರಿತು ಸಚಿವ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಸಭೆ. | Kannada Prabha

ಸಾರಾಂಶ

ಕೊಪ್ಪಳ ತಾಲೂಕಿನಲ್ಲಿ 8, ಗಂಗಾವತಿ-3, ಕುಷ್ಟಗಿ-6, ಯಲಬುರ್ಗಾ-7, ಕನಕಗಿರಿ-3, ಕಾರಟಗಿ-9 ಸೇರಿದಂತೆ ಒಟ್ಟು 36 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ. ಇವುಗಳಲ್ಲಿ 35 ಗ್ರಾಮಗಳಿಗೆ ಜಿಲ್ಲಾಧಿಕಾರಿಯಿಂದ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಅದರನ್ವಯ 35 ಪ್ರಸ್ತಾವನೆಗಳಿಗೆ ಪ್ರಾಥಮಿಕ ಅಧಿಸೂಚನೆ ಹಾಗೂ 27 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

ಕೊಪ್ಪಳ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಈಗಾಗಲೇ ಹೊಸದಾಗಿ ರಚನೆಯಾಗಿರುವ ಕಂದಾಯ ಗ್ರಾಮಗಳಲ್ಲಿನ ಫಲಾನುಭವಿಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಹೊಸದಾಗಿ ರಚಿಸಬೇಕಾಗಿರುವ ಕಂದಾಯ ಗ್ರಾಮಗಳ ಕುರಿತು ಹಾಗೂ ಈಗಾಗಲೇ ಹೊಸದಾಗಿ ರಚನೆಯಾಗಿರುವ ಕಂದಾಯ ಗ್ರಾಮಗಳಲ್ಲಿನ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯ ಕೊಪ್ಪಳ ತಾಲೂಕಿನಲ್ಲಿ 8, ಗಂಗಾವತಿ-3, ಕುಷ್ಟಗಿ-6, ಯಲಬುರ್ಗಾ-7, ಕನಕಗಿರಿ-3, ಕಾರಟಗಿ-9 ಸೇರಿದಂತೆ ಒಟ್ಟು 36 ಗ್ರಾಮಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಲಾಗಿದೆ. ಇವುಗಳಲ್ಲಿ 35 ಗ್ರಾಮಗಳಿಗೆ ಜಿಲ್ಲಾಧಿಕಾರಿಯಿಂದ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಅದರನ್ವಯ 35 ಪ್ರಸ್ತಾವನೆಗಳಿಗೆ ಪ್ರಾಥಮಿಕ ಅಧಿಸೂಚನೆ ಹಾಗೂ 27 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಹೊರಡಿಸಲು ಜಿಲ್ಲಾಧಿಕಾರಿಯಿಂದ ಎಂಟು ಪ್ರಸ್ತಾವನೆಗಳು ಬರುವುದು ಬಾಕಿ ಇದೆ. ಬಾಕಿ ಉಳಿದ ಪ್ರಕರಣಗಳಲ್ಲಿನ ಕಾನೂನಾತ್ಮಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆಹರಿಸಿ ಶೀಘ್ರದಲ್ಲಿ ಸಂಬಂಧಿಸಿದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ವಹಿಸಿ ಎಂದು ಅವರು ತಹಶೀಲ್ದಾರರು, ತಾಪಂ, ಪಪಂ ಅಧಿಕಾರಿಗಳಿಗೆ ಸೂಚನೆ ನೀಡಿದರು.ಕೆಲವು ಪ್ರಕರಣಗಳು ನ್ಯಾಯಾಲಯದ ಹಂತದಲ್ಲಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಇಂತಹ ಪ್ರಕರಣಗಳಲ್ಲಿ ಸೂಕ್ತ ದಾಖಲೆಗಳ ಸಹಿತ ನ್ಯಾಯಾಲಯಕ್ಕೆ ವಾಸ್ತವಾಂಶ ತಿಳಿಸಿ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ವಹಿಸಬೇಕು ಎಂದರು.ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರ ಹಂತದಲ್ಲಿರುವ ಪ್ರಕರಣಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಹೊಸದಾಗಿ ರಚಿಸಬೇಕಾಗಿರುವ ಕಂದಾಯ ಗ್ರಾಮಗಳಿಗೆ ಸರ್ಕಾರದ ಮಾರ್ಗಸೂಚಿ, ಮಾನದಂಡಗಳನ್ನು ಅನುಸರಿಸಿ ಅಗತ್ಯ ಕ್ರಮ ವಹಿಸಬೇಕು. ಇಂತಹ ವಿಷಯಗಳಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಕಾರ್ಯ ನಿರ್ವಹಿಸಬೇಕು. ನಿರ್ದಿಷ್ಟ ಕಾಲಮಿತಿ ಹಾಕಿಕೊಂಡು ಅದಕ್ಕೆ ತಕ್ಕಂತೆ ಕೆಲಸ ನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.ನಂತರ ಜಿಲ್ಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಇತರೆ ಅಭಿವೃದ್ಧಿ ಕುರಿತಾದ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಸಭೆಯಲ್ಲಿ ಜಿಲ್ಲಾಧಿಕಾರಿ ನಳಿನ್ ಅತುಲ್, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯತಿ, ಪಟ್ಟಣ ಪಂಚಾಯತಿ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜಕ್ಕೆ ಕೇಂದ್ರ ಬಜೆಟ್ಟಲ್ಲಿ ಚೊಂಬು : ಸಿಎಂ ಸಿಡಿಮಿಡಿ
ಇದು ಹೊಸ ತೆರಿಗೆ ಹಾಕದಜನಹಿತ ಬಜೆಟ್‌: ಅಶೋಕ್‌