ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಳ ಗ್ರಾಮದ ಪದ್ಮಶಾಲಿ ಶ್ರೀರಾಮ ಚಾರಿಟಬಲ್ ಟ್ರಸ್ಟ್‌ನ ರಾಮ ಮಂದಿರ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1 ಲಕ್ಷ ರು. ಸಹಾಯ ಧನ ವಿತರಿಸಲಾಯಿತು.
ಶ್ರೀರಂಗಪಟ್ಟಣ:
ತಾಲೂಕಿನ ಕೊಡಿಯಾಳ ಗ್ರಾಮದ ಪದ್ಮಶಾಲಿ ಶ್ರೀರಾಮ ಚಾರಿಟಬಲ್ ಟ್ರಸ್ಟ್‌ನ ರಾಮ ಮಂದಿರ ಸಮುದಾಯ ಭವನ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1 ಲಕ್ಷ ರು. ಸಹಾಯ ಧನ ವಿತರಿಸಲಾಯಿತು.
ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕ್ಷೇತ್ರ ಧರ್ಮಸ್ಥಳ ವತಿಯಿಂದ 1 ಲಕ್ಷ ರು. ಸಹಾಯಧನ ಮಂಜೂರು ಮಾಡಿದ್ದು, ತಾಲೂಕಿನ ಯೋಜನಾಧಿಕಾರಿ ಗಣೇಶ ನಾಯ್ಕ್ ಟ್ರಸ್ಟ್‌ನ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣಯ್ಯ, ಕಾರ್ಯದರ್ಶಿ ನರಸಿಂಹಮೂರ್ತಿ, ಖಜಾಂಚಿ ಗೋ ವರ್ಧನ್ ಅವರಿಗೆ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಿದರು.
ಈ ವೇಳೆ ಗ್ರಾಮದ ಮುಖಂಡರಾದ ಶ್ರೀನಿವಾಸ್, ಕಾಮರಾಜು, ಬುಡ್ಡೇಗೌಡ, ಜಗದೀಶ್, ಲೋಕೇಶ್, ಮಹದೇವ, ಸಂಸ್ಥೆಯ ವಲಯದ ಮೇಲ್ವಿಚಾರಕ ಯೋಗೇಶ, ಸೇವಾ ಪ್ರತಿನಿಧಿ ಪುಷ್ಪಾ ಸೇರಿದಂತೆ ಇತರರು ಉಪಸ್ಥಿತರಿದ್ದರು.ಇಂದು ಸರ್ಕಾರಿ ನೌಕರರ ದಿನಾಚರಣೆ
ಕನ್ನಡಪ್ರಭ ವಾರ್ತೆ ಮಂಡ್ಯಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮೇ ೧೩ರಂದು ನಗರದ ಅಂಬೇಡ್ಕರ್ ಭವನದಲ್ಲಿ ಸರ್ಕಾರಿ ನೌಕರರ ದಿನಾಚರಣೆ, ನಾಗರೀಕ ಸೇವಾ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ನಡೆಯಲಿದೆ.
ಅಂದು ಮಧ್ಯಾಹ್ನ ೨ ಗಂಟೆಗೆ ನಡೆಯುವ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಪಿ.ರವಿಕುಮಾರ್ ವಹಿಸುವರು. ಶಾಸಕರಾದ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಪಿ.ಎಂ.ನರೇಂದ್ರಸ್ವಾಮಿ, ರಾಜ್ಯ ಪ,ಜಾತಿ, ಪಂಗಡಗಳ ಅಧ್ಯಕ್ಷ ಡಾ.ಮೂರ್ತಿ ಅವರು ಸಮಾರಂಭದಲ್ಲಿ ಉಪಸ್ಥಿತರಿರುವರು.ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ, ಶಾಸಕರಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ ಮಂಜು, ಕೆ.ಎಂ. ಉದಯ, ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್. ಆತ್ಮಾನಂದ, ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್.ಕೃಷ್ಣ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ.ಪ್ರಕಾಶ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ನಾಗೇಂದ್ರಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.