ಕನ್ನಡಪ್ರಭವಾರ್ತೆ ಸೋಮವಾರಪೇಟೆ
ನಂತರ ಅವರು ಮಾತನಾಡಿ, ಶ್ರೀ ಕ್ಷೇತ್ರದಿಂದ ಸಮಾಜಮುಖಿಯಾಗಿ ಕೈಗೊಂಡ ಕಾರ್ಯಕ್ರಮಗಳಾದ ಶಿಕ್ಷಣ ಕ್ಷೇತ್ರದಲ್ಲಿ ಶಾಲೆಗಳಿಗೆ ಪೀಠೋಪಕರಣ, ಜ್ಞಾನದೀಪ ಶಿಕ್ಷಕರ ನೇಮಕ ಮಾಡುವುದು, ಉನ್ನತ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ನೀಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ನೆರವಾಗುತ್ತಿದ್ದಾರೆ ಎಂದರು.
ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ದಿ, ಗ್ರಾಮೀಣ ರೈತರಿಗೆ ಅನುಕೂಲವಾಗುವಂತೆ ಹಾಲು ಉತ್ಪಾದಕರ ಸಂಘಗಳಿಗೆ ಅನುದಾನ, ನಿರ್ಗತಿಕರಿಗೆ ಮಾಶಾಸನ, ವಿಶೇಷಚೇತನರಿಗೆ ಪರಿಕರಗಳ ವಿತರಣೆ ಸೇರಿದಂತೆ ಶ್ರೀ ಕ್ಷೇತ್ರದ ಕಾರ್ಯಕ್ರಮಗಳ ಮಾಹಿತಿ ನೀಡಿದರು.ಈ ಸಂದರ್ಭ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಚೇತನ್, ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಇದ್ದರು.