ಸಿದ್ದಕಟ್ಟೆ ಸಹಕಾರ ಸಂಘದಿಂದ 3,000 ಹಲಸಿನ ಗಿಡಗಳ ವಿತರಣೆ

KannadaprabhaNewsNetwork |  
Published : Sep 22, 2026, 03:00 AM IST
ಸಿದ್ದಕಟ್ಟೆ ಸಹಕಾರ ಸಂಘದಿಂದ 3,000 ಹಲಸಿನ ಗಿಡಗಳ ವಿತರಣೆ₹152.24 ಕೋಟಿ ಸಾಲ ವಿತರಣೆ, ₹2.19 ಕೋಟಿ ಲಾಭ – ಶೇ.12ರಷ್ಟು ಲಾಭಾಂಶ ಘೋಷಣೆ | Kannada Prabha

ಸಾರಾಂಶ

ಸಹಕಾರ ಸಂಘಗಳು ಕೇವಲ ಆರ್ಥಿಕ ವ್ಯವಹಾರಗಳಿಗೆ ಸೀಮಿತವಾಗದೆ, ಸಂಘದ ವ್ಯಾಪ್ತಿಯ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಿದಾಗ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.

ಬಂಟ್ವಾಳ : ಸಹಕಾರ ಸಂಘಗಳು ಕೇವಲ ಆರ್ಥಿಕ ವ್ಯವಹಾರಗಳಿಗೆ ಸೀಮಿತವಾಗದೆ, ಸಂಘದ ವ್ಯಾಪ್ತಿಯ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಿದಾಗ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.ಸಿದ್ದಕಟ್ಟೆಯ ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆದ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶಾದ್ಯಂತ ನಡೆಯುತ್ತಿರುವ ಪಂಚ ಪರಿವರ್ತನೆಗಳಿಗೆ ಈ ವರ್ಷ ಸಂಘವು ಆದ್ಯತೆ ನೀಡಿದ್ದು, ಪರಿಸರ ಸಂರಕ್ಷಣೆಗೆ ವಿಶೇಷ ಮಹತ್ವ ನೀಡಲಾಗಿದೆ. ಪ್ರತಿಯೊಬ್ಬರೂ ತಮ್ಮ ಹಿರಿಯರ ಹೆಸರಿನಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯಲ್ಲಿ ಪಾಲ್ಗೊಳ್ಳಬೇಕು. ಶುದ್ಧ ಗಾಳಿಯ ಸೇವನೆ ಮನುಷ್ಯನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದ್ದು, ಸ್ವಚ್ಛ ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ಈ ಹಿನ್ನೆಲೆಯಲ್ಲಿ ಸಂಘದ ಪ್ರತಿಯೊಬ್ಬ ಸದಸ್ಯರಿಗೂ ಒಂದೊಂದು ಹಲಸಿನ ಗಿಡವನ್ನು ಸಾಂಕೇತಿಕವಾಗಿ ನೀಡಲಾಗಿದ್ದು, ಸುಮಾರು 3,000 ಗಿಡಗಳನ್ನು ಸದಸ್ಯರಿಗೆ ವಿತರಿಸಲಾಯಿತು.ಉಚಿತ ಆರೋಗ್ಯ ತಪಾಸಣೆಪ್ರಧಾನಮಂತ್ರಿ ಜನ ಔಷಧಿ ಸಿದ್ದಕಟ್ಟೆ ಘಟಕದ ವತಿಯಿಂದ ಸಂಘದ ಆವರಣದಲ್ಲಿ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಸಕ್ಕರೆ ಮತ್ತು ರಕ್ತದೊತ್ತಡ ತಪಾಸಣೆ ಸೇರಿದಂತೆ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ವ್ಯವಸ್ಥೆಗೆ ಸದಸ್ಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.₹152.24 ಕೋಟಿ ಸಾಲ ವಿತರಣೆಸಂಘವು ಕಳೆದ ಸಾಲಿನಲ್ಲಿ ವಿವಿಧ ಉದ್ದೇಶಗಳಿಗೆ ಒಟ್ಟು ₹152.24 ಕೋಟಿ ಸಾಲವನ್ನು 2,788 ಸದಸ್ಯರಿಗೆ ವಿತರಿಸಿದೆ. ಸಂಘವು ₹720.47 ಕೋಟಿ ವ್ಯವಹಾರ ನಡೆಸಿ ₹2.19 ಕೋಟಿ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.12ರಷ್ಟು ಲಾಭಾಂಶ ನೀಡಲಾಗುವುದು ಎಂದು ಅಧ್ಯಕ್ಷ ಪ್ರಭಾಕರ ಪ್ರಭು ತಿಳಿಸಿದರು.

ಸಂಘವು ಸತತವಾಗಿ ‘ಎ’ ಗ್ರೇಡ್ ಲೆಕ್ಕಪರಿಶೋಧನಾ ಶ್ರೇಣಿ ಪಡೆದಿದ್ದು, ಶೇ.98ರಷ್ಟು ಸಾಲ ವಸೂಲಾತಿ ಸಾಧಿಸಿದೆ. ಪ್ರಸಕ್ತ ಸಾಲಿನಲ್ಲಿ ಶೇ.100ರಷ್ಟು ಸಾಲ ವಸೂಲಾತಿ ಸಾಧಿಸಲು ಸದಸ್ಯರು ಸಹಕಾರ ನೀಡಬೇಕು ಎಂದವರು ಮನವಿ ಮಾಡಿದರು.ಸಂಘವು ನಿರಂತರವಾಗಿ ಪ್ರಗತಿ ಸಾಧಿಸುತ್ತಿರುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಂಘವು ಸತತವಾಗಿ ಪ್ರಶಸ್ತಿ-ಪುರಸ್ಕಾರಗಳಿಗೆ ಪಾತ್ರವಾಗಿದೆ ಎಂದರು.ಆತ್ಮನಿರ್ಭರ ಭಾರತಕ್ಕೆ ಉತ್ತೇಜನ: ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದಡಿ ಸಂಘದ ವ್ಯಾಪ್ತಿಯ ಸಹಕಾರಿಗಳು ಹಾಗೂ ಗ್ರಾಹಕರು ದೇಶೀಯ ಉತ್ಪನ್ನಗಳ ಉತ್ಪಾದನೆ ಮತ್ತು ಬಳಕೆಗೆ ಉತ್ತೇಜನ ನೀಡಬೇಕು. ಮುಂದಿನ ದಿನಗಳಲ್ಲಿ ಸಂಘದ ಕೇಂದ್ರ ಕಚೇರಿ ಆವರಣದಲ್ಲಿ ಸಾಮಾನ್ಯ ಸೇವಾ ಕೇಂದ್ರ ತೆರೆಯುವ ಮೂಲಕ ಜನಸಾಮಾನ್ಯರಿಗೆ ಅಗತ್ಯವಿರುವ ವಿವಿಧ ಸೇವೆಗಳನ್ನು ಒದಗಿಸುವ ಉದ್ದೇಶವಿದೆ ಎಂದು ಅವರು ತಿಳಿಸಿದರು.

38 ಮೃತ ಸದಸ್ಯರಿಗೆ ನುಡಿನಮನ: ಸಂಘದ ಸದಸ್ಯರಾಗಿದ್ದು ನಿಧನರಾದ 38 ಸದಸ್ಯರಿಗೆ ಮಹಾಸಭೆಯಲ್ಲಿ ಮೌನ ಪ್ರಾರ್ಥನೆ ಸಲ್ಲಿಸುವ ಮೂಲಕ ನುಡಿನಮನ ಸಲ್ಲಿಸಲಾಯಿತು. ಸಂಘದ ಪ್ರಧಾನ ಕಚೇರಿ ಸೇರಿದಂತೆ ರಾಯಿ, ಆರಂಬೋಡಿ, ಮಾವಿನಕಟ್ಟೆ ಹಾಗೂ ಅರಳ ಶಾಖೆಗಳು ಉತ್ತಮ ಸೇವೆ ನೀಡುತ್ತಿದ್ದು, ಸದಸ್ಯರಿಂದಲೂ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮಹಾಸಭೆಯಲ್ಲಿ ಸಂಘದ ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ವಿಶ್ವನಾಥ್ ಶೆಟ್ಟಿಗಾರ್, ಶಿವ ಗೌಡ, ವೀರಪ್ಪ ಪರವ, ಜಾರಪ್ಪ ನಾಯ್ಕ, ಮಂದರಾತಿ ಎಸ್. ಶೆಟ್ಟಿ, ಪುಷ್ಪಲತಾ ಎಸ್.ಆರ್., ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ನವೀನ್ ಹೆಗ್ಡೆ ಉಪಸ್ಥಿತರಿದ್ದರು. ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಚ್ ಪ್ರಭಾಕರ, ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ರತ್ನಕುಮಾರ್ ಚೌಟ, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೇಖರ್ ಶೆಟ್ಟಿ,ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಂತೋಷ ಕುಮಾರ್ ಸಂಗಬೆಟ್ಟು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುರೇಶ ಕುಲಾಲ್, ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ, ಪ್ರಮುಖರಾದ ಸುದರ್ಶನ್ ಮಂಜಿಲ,ಡಾ. ಶ್ರೀಧರ್ ಶೆಟ್ಟಿ, ಲಕ್ಷ್ಮೀಧರ ಶೆಟ್ಟಿ, ಜಗದೀಶ್ ಆಳ್ವ, ರಂಜನ್ ಕುಮಾರ್ ಶೆಟ್ಟಿ, ಡೊಂಬಯ ಅರಳ,ಲಿಂಗಪ್ಪ ಪೂಜಾರಿ, ನಾರಯಣ ನಾಯಕ್,ಕೆ, ಸದಾಶಿವ ಕರ್ಪೆ,ಹರೀಶ್ ಆಚಾರ್ಯ, ಉಮೇಶ್ ಗೌಡ,ಅರುಣಾ ಶೆಟ್ಟಿ, ವಸಂತ ಗೌಡ, ಮಾದವ ಶೆಟ್ಟಿಗಾರ್,ಚಂದ್ರಶೇಖರ ಗೌಡ,ಗೋಪಾಲ ರೈ, ಜಯರಾಮ ಅಡಪ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ವಾರ್ಷಿಕ ವರದಿ ಪ್ರಸ್ತಾಪಿಸಿ,ಸಂಘದ ಉಪಾಧ್ಯಕ್ಷ ಸಂದೇಶ್ ಶೆಟ್ಟಿ ಪೊಡುಂಬ ಸ್ವಾಗತಿಸಿ, ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ದಿನೇಶ್ ಪೂಜಾರಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿಸಿಸಿ ಬ್ಯಾಂಕ್‌ 134 ಹುದ್ದೆಗಳ ನೇಮಕಾತಿಗೆ ಶೀಘ್ರ
ತಾಳಿಕೋಟೆ ಬಂದ್; ರೈತರ ಬೃಹತ್‌ ಪ್ರತಿಭಟನೆ