ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಪುಸ್ತಕ, ಲೇಖನ ಸಾಮಗ್ರಿ ವಿತರಣೆ

KannadaprabhaNewsNetwork |  
Published : Jun 18, 2026, 02:30 AM IST
ಪುಸ್ತಕ ವಿತರಣೆ | Kannada Prabha

ಸಾರಾಂಶ

ಗುಂಡುಗುಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಕುಶಾಲನಗರದ ನಿವೃತ್ತ ಯೋಧ ಲವ ಮತ್ತು ಅವರ ಪತ್ನಿ ನಿರುಪಮ ಉಚಿತ ನೋಟ್ ಪುಸ್ತಕ, ಲೇಖನ ಸಾಮಗ್ರಿಗಳನ್ನು ವಿತರಿಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಗುಂಡುಗುಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಕುಶಾಲನಗರದ ನಿವೃತ್ತ ಯೋಧ ಲವ ಮತ್ತು ಅವರ ಪತ್ನಿ ನಿರುಪಮ ಉಚಿತ ನೋಟ್ ಪುಸ್ತಕ, ಲೇಖನ ಸಾಮಗ್ರಿಗಳನ್ನು ವಿತರಿಸಿದರು. ಪುಸ್ತಕ ವಿತರಿಸಿ ಮಾತನಾಡಿದ ಲವ ಅವರು, ಮಕ್ಕಳಿಗೆ ಸರ್ಕಾರಿ ಶಾಲೆಯನ್ನು ಉಳಿಸುವ, ದಾಖಲಾತಿಯನ್ನು ಹೆಚ್ಚಿಸುವ ಬಗ್ಗೆ ಹಾಗೂ ಸರ್ಕಾರಿ ಶಾಲೆಯಲ್ಲಿ ಸಿಗುವ ಸವಲತ್ತುಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಹೇಳಿದರು. 7ನೇ ತರಗತಿಯ ವಿದ್ಯಾರ್ಥಿ ಮಂಜುನಾಥ್ ಎಂಬಾತನ ವಿದ್ಯಾಭ್ಯಾಸದ ಖರ್ಚನ್ನು ತಾನೇ ಬರಿಸುವುದಾಗಿ ಹೇಳಿದರು.

ಕ್ರೀಡೆಯಲ್ಲಿ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಸಹಾಯ ಹಸ್ತ ನೀಡುವುದಾಗಿ ಭರವಸೆ ನೀಡಿದರು.

ಗುಂಡುಗುಟ್ಟಿಯ ನಿವೃತ್ತ ಯೋಧ ಎ.ಸಿ. ಪೊನ್ನಪ್ಪ ಅವರು ಮಾತನಾಡಿ, ಮಕ್ಕಳಿಗೆ ಸಿಗುವ ಅವಕಾಶಗಳನ್ನು ಉಪಯೋಗಿಸಿಕೊಂಡು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದು ಹೇಳಿದರು. ಮುಖ್ಯ ಶಿಕ್ಷಕಿ ಎಸ್.ಎಲ್. ಗೌರಮಣಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಟೇಶ್ವರ: ‘ಸೇವಾ ಸಂಕಲ್ಪ’ ಶಿಕ್ಷಣಕ್ಕೆ 93.64 ಲಕ್ಷ ರು. ನೆರವು ವಿತರಣೆ
ಸೋಣಂದೂರು ಪೂಮ್ಮಾಜೆ ‘ವ್ಯಾಪ್ತಿ ಪ್ರದೇಶದ ಹೊರಗೆ’!