ಯಲ್ಲಾಪುರ: ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರ ಗೆಲುವಿಗಾಗಿ ಶತಾಯಗತಾಯ ಶ್ರಮ ಪಡುತ್ತಿದ್ದಾರೆ. ತಾಲೂಕಿನ ಇಡಗುಂದಿ ಗ್ರಾಪಂ ವ್ಯಾಪ್ತಿಯ ಗುಳ್ಳಾಪುರದಲ್ಲಿ ಏ. ೨೭ರಂದು ಚುನಾವಣೆಯ ಪ್ರಯುಕ್ತ ಪ್ರಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸಿ, ಮತಯಾಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ನೇತ್ರೇಕರ, ಸೇವಾದಳದ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಆಯೆಷಾ ಗೊಜನೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಕ್ಷಯ ರೇವಣಕರ, ರೂಪಾ ಪಾಟಣಕರ, ಅಸಂಘಟಿತ ಕಾರ್ಮಿಕ ವಿಭಾಗದ ತಾಲೂಕಾಧ್ಯಕ್ಷ ರೇವಣಸಿದ್ದ ಉಣಕಲ್, ಮತ್ತಿತರ ಹಿರಿಕಿರಿಯ ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು.ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆ ಸಭೆ
ಯಲ್ಲಾಪುರ: ಪಟ್ಟಣದ ಚರ್ಚ್ ರಸ್ತೆಯಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಯ ಸಭೆಯನ್ನು ಏ. ೨೭ರಂದು ಹಮ್ಮಿಕೊಳ್ಳಲಾಗಿತ್ತು. ಗ್ಯಾರಂಟಿ ಸಮಿತಿಯ ತಾಲೂಕಾಧ್ಯಕ್ಷ ಉಲ್ಲಾಸ ಶಾನಭಾಗ, ಸಮಿತಿ ಜಿಲ್ಲಾ ಉಪಾಧ್ಯಕ್ಷ ಡಿ.ಎನ್. ಗಾಂವ್ಕರ, ಸದಸ್ಯರಾದ ನುಶ್ರತ್ ಶೇಕ್, ಬಿಸಿಸಿ ಕಾರ್ಯದರ್ಶಿ ಅನಿಲ ಮರಾಠೆ, ಜಿಲ್ಲಾ ಮಹಿಳಾ ಸಂಘಟನಾ ಕಾರ್ಯದರ್ಶಿ ಸರಸ್ವತಿ ಗುನಗಾ, ಮಹಿಳಾ ಮೋರ್ಚಾ ತಾಲೂಕಾಧ್ಯಕ್ಷೆ ಪೂಜಾ ನೇತ್ರೇಕರ, ಬೂತ್ ಅಧ್ಯಕ್ಷ ಜಾನಿ ಅಲ್ಫಾಂಸೋ, ಪಪಂ ಮಾಜಿ ಅಧ್ಯಕ್ಷ ಎಂ.ಜಿ. ಮುಲ್ಲಾ, ಸಿದ್ದು ಉಣಕಲ್, ಅಕ್ಷಯ ರೇವಣಕರ, ಬಾಬಾ ಶೇಕ್, ಶಕೀರ್ ಶೇಕ್ ಮತ್ತಿತರರು ಉಪಸ್ಥಿತರಿದ್ದರು.