ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‌ಗಳ ವಿತರಣೆ

KannadaprabhaNewsNetwork |  
Published : Feb 27, 2026, 01:30 AM IST
೨೬ಕೆಎಂಎನ್‌ಡಿ-೪ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಚ ಎಂ.ವಿನಯ್‌ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಪರಿಸರ ಗ್ರಾಮೀಣ ನಗರಾಭಿವೃದ್ಧಿ ಸಂಸ್ಥೆ ವತಿಯಿಂದ ಮಂಡ್ಯದ ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್‌ಗಳನ್ನು ವಿತರಿಸಲಾಯಿತು. | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಅತಿಯಾಗಿ ಪ್ಲಾಸ್ಟಿಕ್ ಬಳಕೆಯಾಗುತ್ತಿದೆ. ಇದರಿಂದ ಜನ ಸಾಮಾನ್ಯರು ಮತ್ತು ಪ್ರಾಣಿಗಳ ಮೇಲೆ ಅನೇಕ ಅಡ್ಡ ಪರಿಣಾಮಗಳು ಉಂಟಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅಂಗಡಿಗಳು, ಹೋಟೆಲ್‌ಗಳು, ಕೈಗಾಡಿಗಳಲ್ಲಿ ತಿಂಡಿ, ಆಹಾರ, ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವಾಗ ಹೆಚ್ಚಾಗಿ ಪ್ಲಾಸ್ಟಿಕ್ ಬಳಕೆಯಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಧ್ಯೇಯ ವಾಕ್ಯದೊಂದಿಗೆ ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ಎಂ.ವಿನಯ್‌ಕುಮಾರ್ ಜನ್ಮದಿನ ನಿಮಿತ್ತ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್‌ಗಳನ್ನು ಎಪಿಎಂಸಿ ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲಾಯಿತು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಂ.ವಿ.ಕೃಷ್ಣ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅತಿಯಾಗಿ ಪ್ಲಾಸ್ಟಿಕ್ ಬಳಕೆಯಾಗುತ್ತಿದೆ. ಇದರಿಂದ ಜನ ಸಾಮಾನ್ಯರು ಮತ್ತು ಪ್ರಾಣಿಗಳ ಮೇಲೆ ಅನೇಕ ಅಡ್ಡ ಪರಿಣಾಮಗಳು ಉಂಟಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಅಂಗಡಿಗಳು, ಹೋಟೆಲ್‌ಗಳು, ಕೈಗಾಡಿಗಳಲ್ಲಿ ತಿಂಡಿ, ಆಹಾರ, ಆಹಾರ ಪದಾರ್ಥಗಳನ್ನು ಪಾರ್ಸೆಲ್ ಮಾಡುವಾಗ ಹೆಚ್ಚಾಗಿ ಪ್ಲಾಸ್ಟಿಕ್ ಬಳಕೆಯಾಗುತ್ತಿದೆ ಎಂದರು.

ಸರ್ಕಾರಗಳು ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದ್ದರೂ ಸಹ ಲೆಕ್ಕಿಸದೆ ಅತಿ ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಎಲ್ಲೆಂದರಲ್ಲಿ ರಸ್ತೆಗಳಲ್ಲಿ, ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ತುಂಬಿ ತುಳುಕುತ್ತಿದೆ. ಇದನ್ನು ತಿಂದ ಪ್ರಾಣಿಗಳು ಸಾಯುತ್ತಿವೆ. ಪ್ಲಾಸ್ಟಿಕ್ ಕಣಗಳಿಂದ ತುಂಬಿದ ಗಾಳಿಯಿಂದ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ಕ್ಯಾನ್ಸರ್ ಕೂಡ ಬರುತ್ತಿದೆ ಅಲ್ಲದೇ, ಇತ್ತೀಚಿನ ವರದಿಗಳ ಪ್ರಕಾರ ಮಗುವಿಗೆ ಹಾಲುಣಿಸುವ ತಾಯಿ ಎದೆ ಹಾಲಿನಲ್ಲೂ ಕೂಡ ಪ್ಲಾಸ್ಟಿಕ್ ಅಂಶ ಕಂಡುಬರುತ್ತಿದೆ ಎಂದು ಆತಂಕದಿಂದ ನುಡಿದರು.

ಪರಿವರ್ತನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸೆ ಪ್ಲಾಸ್ಟಿಕ್ ರಹಿತ ಸಮಾಜ ನಿರ್ಮಾಣ ಮಾಡಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಾ ಬರುತ್ತಿದೆ ಅದರಂತೆ ಈ ದಿನ ನಗರದ ಎಪಿಎಂಸಿ ಮಾರ್ಕೆಟ್‌ನಲ್ಲಿ ಜನರನ್ನು ಜಾಗೃತಿಗೊಳಿಸುವ ಉದ್ದೇಶದಿಂದ ಬಟ್ಟೆ ಬ್ಯಾಗ್‌ಗಳನ್ನು ಉಚಿತವಾಗಿ ವಿತರಿಸುವ ಮೂಲಕ ಜನ ಜಾಗೃತಿಯನ್ನು ಮೂಡಿಸಲಾಯಿತು ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ಎಂ.ವಿನಯ್‌ಕುಮಾರ್ ಅವರ ೩೬ನೇ ಹುಟ್ಟುಹಬ್ಬದ ಅಂಗವಾಗಿ ಜನ್ಮದಿನಾಚರಣೆ ನೆರವೇರಿಸಿ ಶುಭಾಶಯ ಕೋರಲಾಯಿತು. ಪರಿವರ್ತನ ಸಂಸ್ಥೆಯ ಅಧ್ಯಕ್ಷ ಡಾ.ಎಂ ವೆಂಕಟೇಶ. ಪರಿವರ್ತನ ಸಂಸ್ಥೆಯ ಕಾರ್ಯದರ್ಶಿ ಟಿ.ಡಿ.ನಾಗರಾಜು, ದೇವರಾಜು, ನವೀನ್‌ಕುಮಾರ್ ಇತರರಿದ್ದರು.

ಸಂವಿಧಾನ ವಿಚಾರ ಅರ್ಥೈಹಿಸಿಕೊಳ್ಳಿ: ವಿನಯ್‌ ಕುಮಾರ್‌

ಕನ್ನಡಪ್ರಭ ವಾರ್ತೆ ಮಂಡ್ಯಎಲ್ಲರೂ ಸಮಾನರು ಎಂಬ ಆಶಯವನ್ನು ಒಳಗೊಂಡಿರುವ ಸಂವಿಧಾನದ ವಿಚಾರಗಳನ್ನು ಅರ್ಥೈಸಿಕೊಂಡು ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೆಕು ಎಂದು ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್‌ ಅಧ್ಯಕ್ಷ ಎಂ.ವಿನಯ್‌ಕುಮಾರ್‌ ಹೇಳಿದರು.

ಇಲ್ಲಿನ ನೆಹರು ನಗರದ ತಮಿಳು ಕಾಲೋನಿಯ 24ನೇ ವಾರ್ಡ್‌ನಲ್ಲಿ ಜೈಭೀಮ್‌ ಸಂಘಟನೆಯಿಂದ ಎಲ್ಲರೊಳಗೊಂದಾಗು ವಿನಯ್‌ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ನಡೆದ ಪುಸ್ತಕ, ಸೀರೆ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಎಲ್ಲ ಮಕ್ಕಳ‌ಲ್ಲಿಯೂ ವಿದ್ಯೆ ಕಲಿಯುವ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಲು ಅವರ ಆಸಕ್ತಿಗೆ ತಕ್ಕಂತೆ ಅನುಗುಣವಾಗಿ ಶಿಕ್ಷಣ ಕೊಡಿಸಬೇಕು. ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಗುರುತಿಸುವಂತೆ ಮಾಡಬೇಕು. ಕೊಳಗೇರಿ ಮಕ್ಕಳು ನಾಳೆ ಐಎಎಸ್‌ ಮತ್ತು ಐಪಿಎಸ್‌ ನಂತಹ ಉತ್ತಮ ಹುದ್ದೆಗಳನ್ನು ಅಲಂಕರಿಸಲಿ ಎಂದು ಆಶಿಸಿದರು.

ನಮ್ಮ ಟ್ರಸ್ಟ್‌ನ ಮೂಲಕ ನಿರಂತರವಾಗಿ ಸಮಾಜಮುಖಿಯಾಗಿ ಚಟುವಟಿಕೆಗಳನ್ನು ಮಾಡಿಕೊಂಡು ಬಂದಿದೆ. ಎಲ್ಲರೂ ಸಮಾನರು ಎಂಬ ಉದ್ದೇಶವನ್ನಿಟ್ಟುಕೊಂಡು ಸಾಗುವುದು ಮುಖ್ಯವಾಗಬೇಕು ಎಂದರು.ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್‌.ಸಂದೇಶ್‌ ಅವರು ಮಾತನಾಡಿದರು. ಮಹಿಳೆಯರಿಗೆ ಸೀರೆ ವಿತರಿಸಲಾಯಿತು. ಶಾಲಾ ಮಕ್ಕಳಿಗೆ ಪಠ್ಯ ಸಾಮಗ್ರಿಗಳನ್ನು ನೀಡಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖಂಡರಾದ ಗುರು, ನವೀನ್‌ ಚಿಕ್ಕಮಂಡ್ಯ, ಕೊಂಗನಾಟರ್‌ ಬಿ.ಸುರೇಶ್‌, ಪೆರುಮಾಳ್‌, ಶ್ರೀಕಾಂತ್‌, ಏಳುಮಲೈ, ಓಂಪ್ರಕಾಶ್‌, ಹಲಗನ್‌, ಬಾಬು, ವೆಂಕಟೇಶ್‌ ಸೇರಿದಂತೆ ಹಲವು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲು ಉತ್ಪಾದಕರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಭೂಮಿಪೂಜೆ
ಜಿಲ್ಲೆಯ ರೈಲ್ವೆ, ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ವಿ,ಸೋಮಣ್ಣ