ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಪಟ್ಟಣದ ಮುಖ್ಯ ಬಜಾರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ತಾಲೂಕು ಕ್ಷೇತ್ರ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆಯ ಸಂಯಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಅಗತ್ಯವುಳ್ಳ ವಿಕಲಚೇತನ ಮಕ್ಕಳಿಗಾಗಿ ಸರ್ವಶಿಕ್ಷಣ ಅಭಿಯಾನ ವತಿಯಿಂದ ವಿತರಿಸಿದ ಸಾಧನೆ ಸಲಕರಣೆಗಳ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪೋಷಕರು ತಮ್ಮ ಮಕ್ಕಳಿಗೆ ಮತ್ತಷ್ಟು ಉತ್ತೇಜನ ನೀಡಿ ಈ ಮಕ್ಕಳು ಮುಖ್ಯವಾಹಿನಿಗೆ ಬರುವಂತೆ ಮಾಡಬೇಕು. ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕು.. ದಿವ್ಯಾಂಗರು ದೇವರ ಮಕ್ಕಳಾಗಿದ್ದು, ಇವರನ್ನು ನಾವು ವಿಶೇಷವಾಗಿ ಗೌರವ ನೀಡಿ ನೋಡಿಕೊಳ್ಳಬೇಕು. ವಿಶೇಷ ಚೇತನ ಮಕ್ಕಳ ಮನಸ್ಸಿನ ಕೊರತೆ ಆಗಬಾರದು. ಅಂಗ ವೈಕಲ್ಯವಾಗಿದ್ದರೆ ಬೇರೆ ಚಟುವಟಿಕೆಯಲ್ಲಿ ಹೆಚ್ಚಿನ ಶಕ್ತಿ ಹೊಂದಿರುತ್ತಾರೆ. ವಿಕಲಚೇತನರಿಗೆ ಸೌಲಭ್ಯ ಕಲ್ಪಿಸಲು ಮಿತಿ ಇಲ್ಲ. ಅಗತ್ಯ ಸಲಕರಣೆಗಳನ್ನು ವಿತರಿಸಬಹುದು ಎಂದರು.ರಾಜ್ಯದಲ್ಲಿ ನಮ್ಮದೆ ಸರ್ಕಾರವಿದ್ದು, ಮುಖ್ಯಮಂತ್ರಿ ಸಿದ್ರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ವಿಶೇಷ ಮಕ್ಕಳ ಶೈಕ್ಷಣಿಕ ಹಾಗೂ ಆರ್ಥಿಕತೆಯ ಅಭಿವೃದ್ಧಿಗಾಗಿ ಈಗಾಗಲೇ ಸಾಕಷ್ಟು ಯೋಜನೆಗಳನ್ನು ರೂಪಿಸುವ ಮೂಲಕ ಉತ್ತಮ ಜನಪರ ಕೆಲಸ ಮಾಡುತ್ತಿದೆ ಎಂದರು.