ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಇಲ್ಲಿನ ಎಸ್.ಜೆ.ಎಂ. ಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷ ಸಾಮಗ್ರಿ ಮತ್ತು ಪ್ರವೇಶ ಪತ್ರ ವಿತರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಶಿಕ್ಷಕರು ಮಾಡುವ ಪಾಠವನ್ನು ಗಮನದಿಂದ ಕೇಳಿ ಕಲಿಕೆಯಲ್ಲಿ ಮುನ್ನಡೆಯಬೇಕು. ಸರ್ಕಾರಿ ಶಾಲೆಗಳು ಉತ್ತಮ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಸಂಸ್ಕಾರವನ್ನು ಕೂಡ ಕಲಿಸಿಕೊಡುತ್ತವೆ ಎಂದರು. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾದಿಂದ ದೂರವಿದ್ದು, ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕು. ಸಮಯ ಸಿಕ್ಕಾಗ ಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಂಡರೆ ಸಾಮಾನ್ಯ ಜ್ಞಾನವೂ ಹೆಚ್ಚುತ್ತದೆ ಎಂದು ಸಲಹೆ ನೀಡಿದರು. ಕ್ಷೇತ್ರ ಶಿಕ್ಷಣ ಅಧಿಕಾರಿ ಎಂ. ಕೃಷ್ಣಪ್ಪ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಧೈರ್ಯದಿಂದ ಪರೀಕ್ಷೆ ಎದುರಿಸಬೇಕು. ಪರೀಕ್ಷೆ ಜೀವನದ ಮಹತ್ವದ ಹಂತವಾಗಿದ್ದು, ಶ್ರಮಪಟ್ಟು ಓದಿ ಉತ್ತಮ ಫಲಿತಾಂಶ ಗಳಿಸಬೇಕು ಎಂದು ಸಲಹೆ ನೀಡಿದರು.ರಾಣಿ ರವೀಂದ್ರ ನಿರೂಪಿಸಿ, ಶಿವಕುಮಾರ್ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕ ಎಚ್. ಮಾರಪ್ಪ, ಧನ್ಯ ಸುನಿಲ್, ಪೃಥ್ವಿ, ಪ್ರಕಾಶ್, ನೇತ್ರಾವತಿ ಇದ್ದರು.