ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿ ವಿತರಣೆ

KannadaprabhaNewsNetwork |  
Published : Mar 17, 2026, 01:15 AM IST
16ಕೆಆರ್ ಎಂಎನ್ 2.ಜೆಪಿಜಿಬಿಡದಿ ಪಟ್ಟಣದ ಬಸವೇಶ್ವರ ಪ್ರೌಢಶಾಲೆ ಆವರಣದಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ ರವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿ ವಿತರಿಸಿದರು. | Kannada Prabha

ಸಾರಾಂಶ

ರಾಮನಗರ: ಬಿಡದಿ ಹೋಬಳಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ ಸೋಮವಾರ ಪರೀಕ್ಷಾ ಸಾಮಗ್ರಿಗಳನ್ನು ವಿತರಿಸಿ ಆತ್ಮಸ್ಥೈರ್ಯ ತುಂಬಿದರು

ರಾಮನಗರ: ಬಿಡದಿ ಹೋಬಳಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ ಸೋಮವಾರ ಪರೀಕ್ಷಾ ಸಾಮಗ್ರಿಗಳನ್ನು ವಿತರಿಸಿ ಆತ್ಮಸ್ಥೈರ್ಯ ತುಂಬಿದರು.

ಬಿಡದಿ ಪಟ್ಟಣದ ಬಸವೇಶ್ವರ ಪ್ರೌಢಶಾಲೆ ಆವರಣದಲ್ಲಿ ಬಸವೇಶ್ವರ ಶಾಲೆ ಸೇರಿದಂತೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿಗಳನ್ನು ನೀಡಿದ ಗಾಣಕಲ್ ನಟರಾಜ್ ರವರು ಮಕ್ಕಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಭಯ ಅಲ್ಲ, ಅದು ಯುಗಾದಿ ಹಬ್ಬ..., ಮೊಬೈಲ್ ಬಿಡಿ, ಪುಸ್ತಕ ಹಿಡಿ... ಎಂದು ಘೋಷಣೆಗಳನ್ನು ಕೂಗಿದರು.

ಈ ವೇಳೆ ಮಾತನಾಡಿದ ಗಾಣಕಲ್ ನಟರಾಜ್, ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಪರೀಕ್ಷಾ ಸಾಮಗ್ರಿಗಳನ್ನು ವಿತರಣೆ ಮಾಡಲಾಗಿದೆ. ಪರೀಕ್ಷೆಯನ್ನು ಯುಗಾದಿ ಹಬ್ಬದಂತೆ ಪರಿಗಣಿಸಬೇಕೆಂದು ಮಕ್ಕಳಲ್ಲಿ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇವೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಲಿಂಗಯ್ಯ ಮಾತನಾಡಿ, ಬಿಡದಿ ಹೋಬಳಿಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಅವರಲ್ಲಿ ಆತ್ಮಸ್ಥೈರ್ಯ ತುಂಬಿ ಶುಭಾಶಯ ಕೋರುವ ನಿಟ್ಟಿನಲ್ಲಿ ಗಾಣಕಲ್ ನಟರಾಜ್ ರವರು ಪರೀಕ್ಷಾ ಸಾಮಗ್ರಿಗಳನ್ನು ವಿತರಿಸಿದ್ದಾರೆ. ಅವರಿಗೆ ಶಿಕ್ಷಣ ಇಲಾಖೆ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕ ಗಿರೀಶ್ , ಸಿಆರ್ ಪಿ ಚಿಕ್ಕ ವೀರಯ್ಯ ಮತ್ತಿತರರು ಹಾಜರಿದ್ದರು.

16ಕೆಆರ್ ಎಂಎನ್ 2.ಜೆಪಿಜಿ

ಬಿಡದಿ ಪಟ್ಟಣದ ಬಸವೇಶ್ವರ ಪ್ರೌಢಶಾಲೆ ಆವರಣದಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ ರವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಾಮಗ್ರಿ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡೂವರೆ ವರ್ಷದ ಬಾಲಕನ ಅಪರೂಪದ ಸಾಧನೆ!
ಬಿಎಲ್ಡಿಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ