ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನ ವೃದ್ಧಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ: ಮಧು ಜಿ.ಮಾದೇಗೌಡ

KannadaprabhaNewsNetwork |  
Published : Nov 18, 2026, 01:45 AM IST
17ಕೆಎಂಎನ್ ಡಿ32 | Kannada Prabha

ಸಾರಾಂಶ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ ಅತ್ಯಗತ್ಯ. ಪ್ರಯೋಗಾಲಯದಲ್ಲಿರುವ ಕಂಪ್ಯೂಟರ್‌ಗಳನ್ನು ವರ್ಷದಲ್ಲಿ ಕೆಲವೇ ಗಂಟೆಗಳ ಕಾಲ ಬಳಸುವ ಅವಕಾಶ ಸಿಗುವುದರಿಂದ ನಿರೀಕ್ಷಿತ ಮಟ್ಟದ ತಾಂತ್ರಿಕ ಪರಿಣತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳು ನಿರಂತರವಾಗಿ ಕಂಪ್ಯೂಟರ್ ಬಳಕೆ ಮಾಡುವಂತಾಗಬೇಕು.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಗ್ರಾಮೀಣ ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನ ವೃದ್ಧಿಗೆ ಜಿ. ಮಾದೇಗೌಡ ತಾಂತ್ರಿಕ ಮಹಾವಿದ್ಯಾಲಯ ಉಚಿತ ಲ್ಯಾಪ್‌ ಟಾಪ್ ವಿತರಿಸುವ ಮೂಲಕ ವಿನೂತನ ಹೆಜ್ಜೆ ಇಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ, ಭಾರತೀ ವಿದ್ಯಾ ಸಂಸ್ಥೆ ಅಧ್ಯಕ್ಷ ಮಧು ಜಿ.ಮಾದೇಗೌಡ ತಿಳಿಸಿದರು

ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಜಿ.ಮಾದೇಗೌಡ ತಾಂತ್ರಿಕ ಮಹಾವಿದ್ಯಾಲಯ ವತಿಯಿಂದ ಉಚಿತ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಅರಿವು ಮೂಡಿಸಲು ಉಚಿತ ಲ್ಯಾಪ್‌ಟಾಪ್ ನೀಡಲಾಗುತ್ತಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ ಅತ್ಯಗತ್ಯ. ಪ್ರಯೋಗಾಲಯದಲ್ಲಿರುವ ಕಂಪ್ಯೂಟರ್‌ಗಳನ್ನು ವರ್ಷದಲ್ಲಿ ಕೆಲವೇ ಗಂಟೆಗಳ ಕಾಲ ಬಳಸುವ ಅವಕಾಶ ಸಿಗುವುದರಿಂದ ನಿರೀಕ್ಷಿತ ಮಟ್ಟದ ತಾಂತ್ರಿಕ ಪರಿಣತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿದ್ಯಾರ್ಥಿಗಳು ನಿರಂತರವಾಗಿ ಕಂಪ್ಯೂಟರ್ ಬಳಕೆ ಮಾಡುವಂತಾಗಬೇಕು. ಪ್ರತಿಯೊಬ್ಬರ ಬಳಿಯೂ ಸ್ವಂತ ಲ್ಯಾಪ್‌ಟಾಪ್‌ ಇರಬೇಕು ಎಂಬ ಆಶಯದಿಂದ ಈ ಯೋಜನೆ ಆರಂಭಿಸಲಾಗಿದೆ ಎಂದು ತಿಳಿಸಿದರು.

ಕಳೆದ ವರ್ಷ ವಿದ್ಯಾರ್ಥಿಗಳು ಹಾಗೂ ಪೋಷಕರೊಂದಿಗೆ ಚರ್ಚೆ ನಡೆಸಲಾಗಿತ್ತು. ಅನೇಕ ಪೋಷಕರು ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನೇ ಭರಿಸುವುದು ಕಷ್ಟವಾಗುವ ಬಗ್ಗೆ ಅಳಲು ತೋಡಿಕೊಂಡಿದ್ದರು. ಇದನ್ನು ಮನಗಂಡ ಸಂಸ್ಥೆಯು ಗ್ರಾಮೀಣ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಉಚಿತ ಲ್ಯಾಪ್ ಟಾಪ್ ನೀಡುತ್ತಿದೆ ಎಂದರು.

ಸಂಸ್ಥೆಯು ವಿದ್ಯಾರ್ಥಿಗಳಿಂದ ಮ್ಯಾನೇಜ್‌ಮೆಂಟ್ ಶುಲ್ಕವನ್ನು ಪಡೆಯದೆ, ಕೇವಲ ಸಿಇಟಿ ಶುಲ್ಕವನ್ನು ಮಾತ್ರ ಪಡೆಯುತ್ತಿದೆ. ಸಂಸ್ಥೆಗೆ ಆರ್ಥಿಕ ನಷ್ಟವಾದರೂ ಪರವಾಗಿಲ್ಲ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು ಎಂಬ ಸದುದ್ದೇಶದಿಂದ ಪ್ರಾಯೋಗಿಕವಾಗಿ ಈ ವರ್ಷದಿಂದ ಈಗಾಗಲೇ 40 ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಆರ್.ಚಂದನ್ ಮಾತನಾಡಿ, ರಾಜ್ಯದ 224 ಇಂಜಿನಿಯರಿಂಗ್ ಕಾಲೇಜುಗಳ ಪೈಕಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಮೂಲಕ ತಾಂತ್ರಿಕ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುತ್ತಿರುವ ಪ್ರಮುಖ ಸಂಸ್ಥೆಗಳಲ್ಲಿ ಜಿ. ಮಾದೇಗೌಡ ತಾಂತ್ರಿಕ ಮಹಾವಿದ್ಯಾಲಯವೂ ಒಂದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಕಂಪ್ಯೂಟರ್‌ ತಂತ್ರಜ್ಞಾನದ ಬಗ್ಗೆ ಆಳವಾದ ಜ್ಞಾನ ಪಡೆದುಕೊಳ್ಳಬೇಕು. ಮುಂದಿನ ಭವಿಷ್ಯ ಉಜ್ವಲವಾಗಬೇಕು. ಲ್ಯಾಪ್‌ಟಾಪ್‌ಗಳ ಮೂಲಕ ಗೂಗಲ್ ಸೇರಿದಂತೆ ವಿವಿಧ ಡಿಜಿಟಲ್ ವೇದಿಕೆಗಳಲ್ಲಿ ಅಗತ್ಯ ಮಾಹಿತಿ ಪಡೆದು ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ವೃದ್ಧಿಸಿಕೊಂಡು ತಂತ್ರಜ್ಞಾನ ಆಧಾರಿತ ಜಗತ್ತಿನಲ್ಲಿ ಅತ್ಯಂತ ಉಪಯುಕ್ತ ಮಾಹಿತಿ ಪಡೆಯುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಭಾರತಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಬಿ.ಎಂ.ನಂಜೇಗೌಡ, ವಿವಿಧ ವಿಭಾಗದ ಮುಖ್ಯಸ್ಥರಾದ ಡಾ.ಸಿ.ಸುಮಿತಾ, ಡಾ. ನೂತನ್, ಪ್ರೊ.ಪ್ರಶಾಂತ್, ಡಾ.ವಿದ್ಯಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಪ್ರತಿಭೆ ಅನಾವರಣಕ್ಕೆ ಕಲಾಶ್ರೀ ಉತ್ತಮ ವೇದಿಕೆ: ಜಿಪಂ ಸಿಇಒ
ತೋಂಟದ ಸಿದ್ಧಲಿಂಗ ಶ್ರೀಗೆ ಮಕ್ಕಳ ಬಗ್ಗೆ ಅಪಾರ ಕಾಳಜಿ ಇತ್ತು: ಈಶಣ್ಣ ಬೆಟಗೇರಿ