ಹಸಿರು ಮೇವಿನ ಬೀಜಗಳ ಉಚಿತ ಮಿನಿ ಕಿಟ್ ವಿತರಣೆ: ಶಿಮುಲ್ ಎಂಡಿ ಎಸ್.ಜಿ.ಶೇಖರ್

KannadaprabhaNewsNetwork |  
Published : May 21, 2024, 12:31 AM IST
ಪೊಟೊ: 20ಎಸ್‌ಎಂಜಿಕೆಪಿ07 | Kannada Prabha

ಸಾರಾಂಶ

ಕಳೆದ ಸಾಲಿನಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದ ಹಿನ್ನೆಲೆ ಮೇವಿನ ಲಭ್ಯತೆ ಕಡಿಮೆಯಾದ್ದರಿಂದ ದುಬಾರಿ ಬೆಲೆ ತೆತ್ತು ಮೇವು ಖರೀದಿಸಿ ನಷ್ಟ ಅನುಭವಿಸಿದ ರೈತರಿಗೆ ನೆರವಾಗುವ ಉದ್ದೇಶದಿಂದ ಮುಂಗಾರು ಹಂಗಾಮು ಆರಂಭ ಮುನ್ನ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ವತಿಯಿಂದ ವಿವಿಧ ಮೇವಿನ ತಳಿಗಳ 3/5 ಕೆ.ಜಿ ಕಿರು ಪೊಟ್ಟಣಗಳನ್ನು (ಮಿನಿ ಕಿಟ್) ರೈತರಿಗೆ ಉಚಿತವಾಗಿ ಪೂರೈಸಲು ನಿರ್ಧರಿಸಲಾಗಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಹೈನು ರಾಸುಗಳ ಆರೋಗ್ಯ ಸುಧಾರಣೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ ಹಾಗೂ ಕಡಿಮೆ ವೆಚ್ಚದಲ್ಲಿ ಹೆಚ್ಚು ಹಾಲು ಉತ್ಪಾದನೆ ಮಾಡುವ ಮೂಲಕ ಹೈನುಗಾರಿಕೆಯಲ್ಲಿ ಹೆಚ್ಚಿನ ಲಾಭ ಪಡೆಯಲು ಹಾಲು ಉತ್ಪಾದಕರು ಹಸಿರು ಮೇವು ಬೆಳೆಸಿ ಬಳಸಲು ಹೈನು ಉತ್ಪಾದಕರ ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಎನ್.ಎಲ್.ಎಂ (ನ್ಯಾಷನಲ್‌ ಲೈವ್‌ಸ್ಟಾಕ್‌ ಮಿಷನ್‌ ) ಯೋಜನೆಯ ಅನುದಾನದಡಿ ಎನ್ ಡಿಡಿಬಿ ಹಾಗೂ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ವತಿಯಿಂದ ಶಿಮುಲ್‍ಗೆ ₹1.20 ಕೋಟಿ ಮೊತ್ತದ ಹಸಿರು ಮೇವಿನ ಬಿತ್ತನೆ ಬೀಜಗಳ ಮಿನಿ ಕಿಟ್‍ಗಳ ಉಚಿತವಾಗಿ ಹಂಚಿಕೆ ಮಾಡಲಾಗಿದೆ ಎಂದು ಶಿಮುಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಜಿ.ಶೇಖರ್ ತಿಳಿಸಿದ್ದಾರೆ.

ಕಳೆದ ಸಾಲಿನಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದ ಹಿನ್ನೆಲೆ ಮೇವಿನ ಲಭ್ಯತೆ ಕಡಿಮೆಯಾದ್ದರಿಂದ ದುಬಾರಿ ಬೆಲೆ ತೆತ್ತು ಮೇವು ಖರೀದಿಸಿ ನಷ್ಟ ಅನುಭವಿಸಿದ ರೈತರಿಗೆ ನೆರವಾಗುವ ಉದ್ದೇಶದಿಂದ ಮುಂಗಾರು ಹಂಗಾಮು ಆರಂಭ ಮುನ್ನ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ವತಿಯಿಂದ ವಿವಿಧ ಮೇವಿನ ತಳಿಗಳ 3/5 ಕೆ.ಜಿ ಕಿರು ಪೊಟ್ಟಣಗಳನ್ನು (ಮಿನಿ ಕಿಟ್) ರೈತರಿಗೆ ಉಚಿತವಾಗಿ ಪೂರೈಸಲು ನಿರ್ಧರಿಸಲಾಗಿದೆ.

ಪ್ರತಿಯೊಬ್ಬ ಹಾಲು ಉತ್ಪಾದಕರಿಗೂ ಮೇವಿನ ಬೀಜದ ಕಿರು ಪೊಟ್ಟಣಗಳನ್ನು ವಿತರಿಸಿ ಹೆಚ್ಚು ಹಸಿರು ಮೇವು ಉತ್ಪಾದಿಸುವ ಮೂಲಕ ಉತ್ಪಾದನಾ ವೆಚ್ಚ ತಗ್ಗಿಸಿ ಹೈನುಗಾರಿಕೆ ಲಾಭದಾಯಕ ಉದ್ಯಮವಾಗಿ ಮಾರ್ಪಡಿಸಲು ಯೋಜಿಸಲಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳ ಹಾಲು ಶೇಖರಣೆ ಆಧಾರದ ಮೇಲೆ ಮಳೆ ಆಶ್ರಿತ ರೈತರು, ನೀರಾವರಿ ಹೊಂದಿರುವ ರೈತರನ್ನು ಗುರುತಿಸಿ ಯೋಜನೆಯ ನಿಯಮದಂತೆ ಮೇವಿನ ಬೀಜದ ಮಿನಿ ಕಿಟ್‍ಗಳನ್ನು ಹಂಚಿಕೆ ಮಾಡುವಂತೆ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಈಗಾಗಲೇ ಮಾರ್ಗಸೂಚಿ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ 2024-25 ನೇ ಸಾಲಿಗೆ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ 120 ಮೆಟ್ರಿಕ್ ಟನ್ ಬಹು ಕಟಾವು ಜೋಳ CSH-24MF=20MT, CSH-43MF=90MT, ಮೆಕ್ಕೆಜೋಳ J177-10MT ಮೇವಿನ ಬಿತ್ತನೆ ಬೀಜ ಹಂಚಿಕೆಯಾಗಿದೆ.

ಕೇಂದ್ರ ಸರ್ಕಾರದ ಎನ್.ಎಲ್.ಎಂ ಯೋಜನೆಯಡಿ ಒಕ್ಕೂಟಕ್ಕೆ ಹಂಚಿಕೆ ಮಾಡಲಾಗಿರುವ ಹಸಿರು ಮೇವಿನ ಬಿತ್ತನೆ ಬೀಜದ ಮಿನಿಕಿಟ್‍ಗಳನ್ನು ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ಹಾಲು ಉತ್ಪಾದಕರಿಗೆ ಯೋಜನೆಯ ನಿಬಂಧನೆ ಅನುಸಾರ (ಸಾಮಾನ್ಯ ಶೇ.70, ಪರಿಶಿಷ್ಟ ಜಾತಿ ಶೇ.20, ಪರಿಶಿಷ್ಟ ಪಂಗಡ ಶೇ.10) ಹಾಲು ಶೇಖರಣೆಯ ಆಧಾರದ ಮೇಲೆ ವಿತರಿಸಲು ಯೋಜಿಸಲಾಗಿದೆ.

ಹಾಲು ಉತ್ಪಾದಕರು ಯೋಜನೆಯಡಿ ಲಭ್ಯವಿರುವ ಮೇವಿನ ಬಿತ್ತನೆ ಬೀಜಗಳ ಮಿನಿ ಕಿಟ್‍ಗಳನ್ನು ಉಚಿತವಾಗಿ ಪಡೆದು ಹಸಿರು ಮೇವು ಉತ್ಪಾದನೆ ಮಾಡಬೇಕು ಎಂದು ಕೋರಿದ್ದಾರೆ.

PREV

Recommended Stories

ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಮುಷ್ಕರಕ್ಕೆ ನೌಕರರಿಂದ ಮಿಶ್ರ ಪ್ರತಿಕ್ರಿಯೆ