ಕನ್ನಡಪ್ರಭ ವಾರ್ತೆ ಹಾಸನ
ಈ ಸಂದರ್ಭದಲ್ಲಿ ಸ್ಥಳದಲ್ಲಿಯೇ ಹಣ್ಣುಗಳನ್ನು ಕತ್ತರಿಸಿ ಸಾರ್ವಜನಿಕರಿಗೆ ವಿತರಿಸಲಾಯಿತು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಘದ ಪರ್ವೀಜ್, ಪ್ರವಾದಿ ಮಹಮ್ಮದ್ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ. ಈದ್ ಮಿಲಾದ್ ಅಂಗವಾಗಿ ಕಳೆದ ಹಲವು ವರ್ಷಗಳಿಂದ ಹಳೆ ಮಟನ್ ಮಾರ್ಕೆಟ್ ಸುತ್ತಮುತ್ತಲಿನ ಸಣ್ಣ ವ್ಯಾಪಾರಸ್ಥರು ಹಾಗೂ ಆಟೋ ಚಾಲಕರು ಒಗ್ಗೂಡಿ ಸಾರ್ವಜನಿಕರಿಗೆ ವಿವಿಧ ಬಗೆಯ ಹಣ್ಣುಗಳನ್ನು ವಿತರಿಸುತ್ತಿದ್ದಾರೆ ಎಂದರು. ಹಳೆ ಮಟನ್ ಮಾರ್ಕೆಟ್ ವೃತ್ತದಲ್ಲಿ ಹಿಂದೂ-ಮುಸ್ಲಿಂ ಎಂಬ ಭೇದವಿಲ್ಲದೆ ಎಲ್ಲರೂ ಅಣ್ಣತಮ್ಮಂದಿರಂತೆ ಒಗ್ಗಟ್ಟಿನಿಂದ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಇದು ಯಾವುದೇ ಒಂದು ವರ್ಗಕ್ಕೆ ಸೀಮಿತವಾದ ಆಚರಣೆಯಲ್ಲ, ಎಲ್ಲ ವರ್ಗದ ಜನರ ಸಹಭಾಗಿತ್ವದೊಂದಿಗೆ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಹಲವು ವರ್ಷಗಳಿಂದಲೂ ಈದ್ ಮಿಲಾದ್ ಪ್ರಯುಕ್ತ ಈ ರೀತಿಯ ಕಾರ್ಯಕ್ರಮವನ್ನು ಶಾಂತಿಯುತವಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು. ಈದ್ ಮಿಲಾದ್ ಹಬ್ಬದ ಅಂಗವಾಗಿ ಬೆಳಿಗ್ಗಿನಿಂದ ರಾತ್ರಿ ೯ ಗಂಟೆಯವರೆಗೂ ಈ ಹಣ್ಣು ವಿತರಣೆ ಕಾರ್ಯಕ್ರಮ ನಡೆಸುವುದಾಗಿ ಹೇಳಿದರು.ಇದೇ ವೇಳೆ ಅಧ್ಯಕ್ಷ ಸಾಧಿಕ್, ಫಾರೂಕ್, ಅಪ್ಪು, ನಜೀರ್, ಸಮೀರ್ ಇತರರು ಉಪಸ್ಥಿತರಿದ್ದರು.