ರೋಗಿಗಳಿಗೆ ಹಣ್ಣು, ಹಾಲು, ಬ್ರೆಡ್ ವಿತರಣೆ

KannadaprabhaNewsNetwork |  
Published : Nov 28, 2025, 02:45 AM IST
ಕಂಪ್ಲಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದ ನಿಮಿತ್ತ ರೋಗಿಗಳಿಗೆ ಹಣ್ಣು ಹಾಲು ಬ್ರೆಡ್ ವಿತರಿಸಲಾಯಿತು.  | Kannada Prabha

ಸಾರಾಂಶ

ಮಾನವ ಕಲ್ಯಾಣದ ಜೊತೆಗೆ ಪರಿಸರ ಸಂರಕ್ಷಣೆ, ಕೃಷಿ ಅಭಿವೃದ್ಧಿ, ಕೈಗಾರಿಕೆ ಮತ್ತು ವ್ಯಾಪಾರದಲ್ಲಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಮಹತ್ವದ ಪಾತ್ರವಹಿಸುತ್ತಿವೆ

ಕಂಪ್ಲಿ: ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರ 78ನೇ ಜನ್ಮದಿನೋತ್ಸವದ ಅಂಗವಾಗಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿಶೇಷ ಸೇವಾ ಕಾರ್ಯಕ್ರಮ ನಿಮಿತ್ತ ರೋಗಿಗಳಿಗೆ ಹಣ್ಣು, ಹಾಲು ಮತ್ತು ಬ್ರೆಡ್‌ಗಳನ್ನು ವಿತರಿಸಿಲಾಯಿತು.

ಜನ ಜಾಗೃತಿ ಸಮಿತಿ ಜಿಲ್ಲಾಧ್ಯಕ್ಷ ಡಾ. ವೆಂಕಟೇಶ್ ಮಾತನಾಡಿ, ಡಾ. ವೀರೇಂದ್ರ ಹೆಗ್ಗಡೆ ಅವರು ರೂಪಿಸಿ ಜಾರಿಗೆ ತಂದ ಅನೇಕ ಸೇವಾ ಹಾಗೂ ಕಲ್ಯಾಣ ಯೋಜನೆಗಳು ರಾಜ್ಯಕ್ಕೆ ಮಾದರಿಯಾಗಿವೆ. ಮಾನವ ಕಲ್ಯಾಣದ ಜೊತೆಗೆ ಪರಿಸರ ಸಂರಕ್ಷಣೆ, ಕೃಷಿ ಅಭಿವೃದ್ಧಿ, ಕೈಗಾರಿಕೆ ಮತ್ತು ವ್ಯಾಪಾರದಲ್ಲಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳು ಮಹತ್ವದ ಪಾತ್ರವಹಿಸುತ್ತಿವೆ ಎಂದರು. ವಿಶೇಷವಾಗಿ ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಲಕ್ಷಾಂತರ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಿರುವುದು ಹೆಗ್ಗಡೆವರ ಸೇವೆಯ ಮಹತ್ತರ ಸಾಧನೆಯಾಗಿದೆ ಎಂದರು.

ಹುಟ್ಟುಹಬ್ಬದ ಅಂಗವಾಗಿ ಪಟ್ಟಣದ ಅನಾಥಾಶ್ರಮಗಳಲ್ಲಿ ಪಡಿತರ ಧಾನ್ಯ ವಿತರಣೆ, ಬಟ್ಟೆ ದಾನ, ಮತ್ತು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಕೂಡ ಜರುಗಿದವು.

ಕಾರ್ಯಕ್ರಮದಲ್ಲಿ ಟ್ರಸ್ಟ್ ಯೋಜನಾಧಿಕಾರಿ ಕೆ. ರಾಘವೇಂದ್ರ, ಪ್ರಮುಖರಾದ ಕೆ.ಎಂ. ಹೇಮಯ್ಯಸ್ವಾಮಿ, ಡಾ. ಶಾರದಾ ಜಿ. ಹಿರೇಮಠ, ಎಸ್.ಎಸ್.ಎಂ. ಚನ್ನಯ್ಯಸ್ವಾಮಿ, ಡಾ. ವೀರೇಶ್, ಡಾ. ಮಲ್ಲೇಶಪ್ಪ, ಡಾ. ಭರತ್, ಡಾ. ಸಾಗರ್, ಸಿಬ್ಬಂದಿ ರೇಖಾ, ಮಂಜುಳಾ, ಉಮಾಮಹೇಶ್ವರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ