ಕನ್ನಡಪ್ರಭ ವಾರ್ತೆ ಪಾಂಡವಪುರ
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪುರಸಭೆ ಸದಸ್ಯ ಆರ್.ಸೋಮಶೇಖರ್ ನೇತೃತ್ವದಲ್ಲಿ ಜೆಡಿಎಸ್ ಕಾರ್‍ಯಕರ್ತರು ಆಸ್ಪತ್ರೆಯ ಒಳ ಹಾಗೂ ಹೊರ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ನೆಚ್ಚಿನ ನಾಯಕರಿಗೆ ಶುಭಕೋರಿದರು.
ಪುರಸಭೆ ಸದಸ್ಯ ಆರ್.ಸೋಮಶೇಖರ್ ಮಾತನಾಡಿ, ಕೇಂದ್ರದ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾಗಿ ಕೆಲಸ ಮಾಡುತ್ತಿವ ಎಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದೇವೆ ಎಂದರು.ತಾಯಿ ಚಾಮುಂಡೇಶ್ವರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ನೀಡುವ ಮೂಲಕ ಮುಂದಿನ ದಿನಗಳಲ್ಲಿ ರಾಜ್ಯದ ಸಿಎಂ ಆಗಿ ರಾಜ್ಯದ ರೈತರು, ಬಡವರು, ಶೋಷಿತರು, ದೀನದಲಿತರ ಪರವಾಗಿ ಕೆಲಸ ಮಾಡುವ ಶಕ್ತಿ ನೀಡಲೆಂದು ಹಾರೈಸಿದರು.
ಇಂದು ಕನ್ನಡ ನಿತ್ಯೋತ್ಸವ ಕಾರ್ಯಕ್ರಮ: ಯೋಗಣ್ಣ
ಜಯ ಕರ್ನಾಟಕ ಸಂಘಟನೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಡಿ.17 ರಂದು ನಗರದ ಬಾಲಭವನದಲ್ಲಿ ಕನ್ನಡ ನಿತ್ಯೋತ್ಸವವನ್ನು ಆಯೋಜಿಸಲಾಗಿದೆ ಎಂದು ಸಂಘಟನೆ ಜಿಲ್ಲಾಧ್ಯಕ್ಷ ಯೋಗಣ್ಣ ತಿಳಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞ ಡಾ.ಮನೋಹರ್ ನೆರವೇರಿಸುವರು. ಶಾಸಕ ರವಿಕುಮಾರ್‌ಗೌಡ ಉದ್ಘಾಟಿಸುವರು. ಸಂಘಟನೆ ರಾಜ್ಯಾಧ್ಯಕ್ಷ ಬಿ.ಎನ್.ಜಗದೀಶ್ ಅಧ್ಯಕ್ಷತೆ ವಹಿಸುವರು. ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್(ನಾಗೇಶ್) ಮರವಣಿಗೆಗೆ ಚಾಲನೆ ನೀಡುವರು. ಉಪಾಧ್ಯಕ್ಷ ಎಂ.ಪಿ.ಅರುಣ್‌ಕುಮಾರ್ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಸಂಘಟನೆ ರಾಜ್ಯ ಕಾರ್ಯಾಧ್ಯಕ್ಷ ರಾಮಚಂದ್ರಯ್ಯ, ಪ್ರಧಾನ ಕಾರ್ಯದರ್ಶಿ ರಜತ್ ಗಗನ್‌ರಾಜ್, ಹಿರಿಯ ಉಪಾಧ್ಯಕ್ಷ ಮನಿಸ್ವಾಮಿ, ಸಂಘಟನಾ ಕಾರ್ಯದರ್ಶಿಗಳಾದ ಮೊಹಮ್ಮದ್ ಇಲಿಯಾಜ್, ಮ್ಯಾಥ್ಯೂ ಘನ ಉಪಸ್ಥಿತಿ ವಹಿಸುವರು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಂದ್ರ, ಉಪಾಧ್ಯಕ್ಷ ಗೌತಮ್, ತಾಲ್ಲೂಕು ಅಧ್ಯಕ್ಷ ಉಮೇಶ್, ಪುನಿತ್, ಮಂಜು, ಕಿಶನ್ ಇದ್ದರು.