ವಾತ್ಸಲ್ಯ ಕುಟುಂಬ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

KannadaprabhaNewsNetwork |  
Published : Apr 04, 2026, 02:45 AM IST
2-ಎನ್ ಪಿ ಕೆ -3.-4.ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಚೆಂಬು ಗ್ರಾಮದ ವಾತ್ಸಲ್ಯಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.   | Kannada Prabha

ಸಾರಾಂಶ

ಮಡಿಕೇರಿ ತಾಲೂಕಿನ ಒಟ್ಟು 35 ವಾತ್ಸಲ್ಯ ಕುಟುಂಬಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ಯೋಜನೆಯ ಚೆಂಬು ಗ್ರಾಮದ ವಾತ್ಸಲ್ಯ ಫಲಾನುಭವಿಗಳಾದ ದೇವಕಿ ಹಾಗೂ ಲೀಲಾ ಅವರಿಗೆ ಹೇಮಾವತಿ ವಿ. ಹೆಗ್ಗಡೆ ಅವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಅವರು ಹಣ್ಣು ಹಂಪಲು ವಿತರಣೆ ಮಾಡಿ ಯೋಗ ಕ್ಷೇಮ ವಿಚಾರಿಸಿದರು.

ಮಡಿಕೇರಿ ತಾಲೂಕಿನ ಒಟ್ಟು 35 ವಾತ್ಸಲ್ಯ ಕುಟುಂಬಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಈ ಸಂದರ್ಭ ತಾಲೂಕಿನ

ಯೋಜನಾಧಿಕಾರಿ ಪುರುಷೋತ್ತಮ ಜ್ಞಾನವಿಕಾಸ ಸಮನ್ವಯಾಧಿಕಾರಿ ಹಾಗೂ ಸೇವಾಪ್ರತಿನಿಧಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂರು ವರ್ಷದಲ್ಲಿ 2809 ಜನ ರೈತರ ಸಾವು: ಕೇಂದ್ರ ಸಚಿವ ಸೋಮಣ್ಣ
ಕಾಂಗ್ರೆಸ್‌ನಷ್ಟು ಲಜ್ಜೆಗೇಡಿ ಸರ್ಕಾರ ನಾನು ನೋಡಿಲ್ಲ: ಸಂಸದ ಜಿಗಜಿಣಗಿ