ವಿದ್ಯಾರ್ಥಿಗಳಿಗೆ ಗಾಡ್ರೆಜ್, ಟ್ರ್ಯಾಕ್ ಶೂಟ್ ವಿತರಣೆ

KannadaprabhaNewsNetwork |  
Published : Sep 21, 2026, 02:30 AM IST
ಚಿತ್ರ : 20ಎಂಡಿಕೆ4 : ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ವಿತರಣೆ. | Kannada Prabha

ಸಾರಾಂಶ

ಸಮೀಪದ ಮಗ್ಗುಲ ಗ್ರಾಮದಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಎಲ್ಎಸ್ಎ ಕೇರ್ಸ್ ವತಿಯಿಂದ ಸರ್ಕಾರಿ ಶಾಲೆಗಳು ಹಾಗೂ ವಿವಿಧ ಸ್ಥಳಗಳಲ್ಲಿ, ಸಮಾಜಮುಖಿ ಚಟುವಟಿಕೆಗಳನ್ನು ಆಯೋಜಿಸುತ್ತಾ ಬರಲಾಗುತ್ತಿದ್ದು ಅದರ ಪ್ರಯುಕ್ತ ಈ ತಿಂಗಳಿನ ಸಮಾಜಮುಖಿ ಕಾರ್ಯಕ್ರಮದ ಸಲುವಾಗಿ ವಿರಾಜಪೇಟೆ ಸಮೀಪದ ನಾಂಗಾಲ ಗ್ರಾಮದ ಕಲ್ತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಲ್ಲಿನ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ಗಳನ್ನು ವಿತರಿಸಲಾಯಿತು.

ವಿರಾಜಪೇಟೆ : ಸಮೀಪದ ಮಗ್ಗುಲ ಗ್ರಾಮದಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಎಲ್ಎಸ್ಎ ಕೇರ್ಸ್ ವತಿಯಿಂದ ಸರ್ಕಾರಿ ಶಾಲೆಗಳು ಹಾಗೂ ವಿವಿಧ ಸ್ಥಳಗಳಲ್ಲಿ, ಸಮಾಜಮುಖಿ ಚಟುವಟಿಕೆಗಳನ್ನು ಆಯೋಜಿಸುತ್ತಾ ಬರಲಾಗುತ್ತಿದ್ದು ಅದರ ಪ್ರಯುಕ್ತ ಈ ತಿಂಗಳಿನ ಸಮಾಜಮುಖಿ ಕಾರ್ಯಕ್ರಮದ ಸಲುವಾಗಿ ವಿರಾಜಪೇಟೆ ಸಮೀಪದ ನಾಂಗಾಲ ಗ್ರಾಮದ ಕಲ್ತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಲ್ಲಿನ ವಿದ್ಯಾರ್ಥಿಗಳಿಗೆ ಗಾಡ್ರೆಜ್ ಹಾಗೂ ಟ್ರ್ಯಾಕ್ ಶೂಟ್ ಗಳನ್ನು ವಿತರಿಸಲಾಯಿತು. ಮಾತ್ರವಲ್ಲದೆ ಕಲಿಕಾ ಹಾಗೂ ಆಟದ ಸಾಮಗ್ರಿಗಳನ್ನು ನೀಡಲಾಯಿತು. ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರು ಹಾಗೂ ಉದ್ಯಮಿ ಪೂಜಾ ಸಜೇಶ್ ರವರು ವಿದ್ಯಾರ್ಥಿಗಳಿಗೆ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದರು ನಮ್ಮ ಸಂಸ್ಥೆಯ ಎಲ್ಎಸ್ಎ ಕೇರ್ಸ್ ವತಿಯಿಂದ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದು ಇದೊಂದು ಶೈಕ್ಷಣಿಕ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿಯಬಾರದು. ಉತ್ತಮವಾದ ಶಿಕ್ಷಣವನ್ನು ಪಡೆದು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಮಾನವೀಯ ಹಾಗೂ ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಿ ಬಾಳಿ ಬದುಕಿ ಎಂದು ಕರೆ ನೀಡಿದರು. ಪರಸ್ಪರ ಸಹಕಾರ ಸೇವಾ ಮನೋಭಾವನೆ ಹಾಗೂ ಸಮಾನತೆಯನ್ನು ಬೆಳೆಸುವ ಸಲುವಾಗಿ ವಿವಿಧ ಸಮಾಜ ಸೇವಾ ಕಾರ್ಯಕ್ರಮಗಳನ್ನು ಇನ್ನು ಮುಂದೆಯೂ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಾಂಗಾಲ ಗ್ರಾಮದ ಕಲ್ತೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಫ್ಯಾನ್ಸಿ ಲೋಬೊ, ಸಹ ಶಿಕ್ಷಕಿಯರು, ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಶಿಕ್ಷಕಿಯರು , ವಿದ್ಯಾರ್ಥಿಗಳು, ನಾ೦ಗಾಲ ಶಾಲೆಯ ವಿದ್ಯಾರ್ಥಿ, ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಫ್ ಕಲಾ ಒಕ್ಕೂಟ ಕೊಡಗಿನಿಂದ ಜಿಲ್ಲಾ ಮಟ್ಟದ ದಫ್ ಸ್ಪರ್ಧೆ
ಕಾಲ್ಚೆಂಡು : ಸೆಂಟ್ ಥೋಮಸ್ ಶಾಲೆಯ ಬಾಲಕರು ವಿಭಾಗ ಮಟ್ಟಕ್ಕೆ ಆಯ್ಕೆ