ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕನ್ನಡ ಧ್ವಜ ವಿತರಣೆ

KannadaprabhaNewsNetwork |  
Published : Oct 30, 2026, 02:30 AM IST
ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಯ ಕರ್ನಾಟಕ ಸಂಘಟನೆಯ ಬ್ಯಾಡಗಿ ತಾಲೂಕು ಘಟಕದ ವತಿಯಿಂದ ಪಟ್ಟಣದ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಸೇರಿದಂತೆ ಸಾರ್ವಜನಿಕರಿಗೆ ಕನ್ನಡ ಧ್ವಜಗಳನ್ನು ವಿತರಿಸಲಾಯಿತು. | Kannada Prabha

ಸಾರಾಂಶ

ಮುಂಬರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಭಾಷೆಯ ಮೇಲಿನ ಅಭಿಮಾನವನ್ನು ಜನರಲ್ಲಿ ಜಾಗೃತಗೊಳಿಸುವ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ವತಿಯಿಂದ ಪಟ್ಟಣದ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಸೇರಿದಂತೆ ಸಾರ್ವಜನಿಕರಿಗೆ ಕನ್ನಡ ಧ್ವಜಗಳನ್ನು ವಿತರಿಸಲಾಯಿತು.

ಬ್ಯಾಡಗಿ: ಮುಂಬರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಭಾಷೆಯ ಮೇಲಿನ ಅಭಿಮಾನವನ್ನು ಜನರಲ್ಲಿ ಜಾಗೃತಗೊಳಿಸುವ ಉದ್ದೇಶದಿಂದ ಜಯ ಕರ್ನಾಟಕ ಸಂಘಟನೆಯ ತಾಲೂಕು ಘಟಕದ ವತಿಯಿಂದ ಪಟ್ಟಣದ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಸೇರಿದಂತೆ ಸಾರ್ವಜನಿಕರಿಗೆ ಕನ್ನಡ ಧ್ವಜಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಧ್ವಜಗಳನ್ನು ವಿತರಿಸಿ ಮಾತನಾಡಿದ ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ವಿನಾಯಕ ಕಂಬಳಿ, “ಕರ್ನಾಟಕದಲ್ಲಿ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗರೂ ಜಾಗೃತರಾಗಬೇಕು. ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ದೊರೆಯಬೇಕು. ಕನ್ನಡವೇ ಸಾರ್ವಭೌಮ ಭಾಷೆಯಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ತನ್ನ ಗೌರವವನ್ನು ಉಳಿಸಿಕೊಳ್ಳಬೇಕು. ಕನ್ನಡ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ” ಎಂದರು.

ಕನ್ನಡ ರಾಜ್ಯೋತ್ಸವವನ್ನು ಕೇವಲ ಒಂದು ದಿನದ ಸಂಭ್ರಮಕ್ಕೆ ಸೀಮಿತಗೊಳಿಸದೆ, ಪ್ರತಿನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುವ ಮೂಲಕ ಭಾಷೆಯ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ವ್ಯಾಪಾರ-ವಹಿವಾಟು, ಶಿಕ್ಷಣ, ಆಡಳಿತ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಕನ್ನಡದ ಬಳಕೆಗೆ ಪ್ರೋತ್ಸಾಹ ನೀಡಬೇಕು. ಕನ್ನಡಿಗರು ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದರ ಜೊತೆಗೆ ಕನ್ನಡದ ಗೌರವಕ್ಕೆ ಧಕ್ಕೆಯಾಗದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ನ.1ರಂದು ಬೃಹತ್ ರಕ್ತದಾನ ಶಿಬಿರ: ಕನ್ನಡ ನಾ ಡಿನ ಸೇವೆ ಎಂದರೆ ಕೇವಲ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವುದಷ್ಟೇ ಅಲ್ಲ, ಸಮಾಜದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವುದೂ ಆಗಿದೆ. ಈ ನಿಟ್ಟಿನಲ್ಲಿ ರಾಜ್ಯೋತ್ಸವದ ಅಂಗವಾಗಿ ನ.1ರಂದು ಜಯ ಕರ್ನಾಟಕ ಸಂಘಟನೆಯ ವತಿಯಿಂದ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿ ಬೆಳಗ್ಗೆ 10ರಿಂದ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದ್ದು, ಆರೋಗ್ಯವಂತರು ಸ್ವಯಂ ಪ್ರೇರಿತರಾಗಿ ರಕ್ತದಾನದಲ್ಲಿ ಪಾಲ್ಗೊಳ್ಳಬೇಕು. ನಮ್ಮ ಒಂದು ಹನಿ ರಕ್ತ ಮತ್ತೊಬ್ಬರ ಬದುಕಿನಲ್ಲಿ ಹೊಸ ಭರವಸೆಯನ್ನು ಮೂಡಿಸಬಲ್ಲದು. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು