ಕಾವೇರಿ ತೀರ್ಥ ವಿತರಣೆ, ಅನ್ನಸಂತರ್ಪಣೆ ಕಾರ್ಯಕ್ರಮ

KannadaprabhaNewsNetwork |  
Published : Oct 19, 2026, 03:00 AM IST
ಕಾರ್ಯಕ್ರಮ ಸಂದರ್ಭ | Kannada Prabha

ಸಾರಾಂಶ

ಕಾವೇರಿ ಸಂಕ್ರಮಣ ಹಿನ್ನೆಲೆಯಲ್ಲಿ ಕುಶಾಲನಗರ-ಕೊಪ್ಪ ಗಡಿಭಾಗದಲ್ಲಿ ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ 14ನೇ ವರ್ಷದ ಕಾವೇರಿ ತೀರ್ಥ ವಿತರಣೆ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಕುಶಾಲನಗರ : ಕಾವೇರಿ ಸಂಕ್ರಮಣ ಹಿನ್ನೆಲೆಯಲ್ಲಿ ಕುಶಾಲನಗರ-ಕೊಪ್ಪ ಗಡಿಭಾಗದಲ್ಲಿ ಬಾರವಿ ಕಾವೇರಿ ಕನ್ನಡ ಸಂಘದ ವತಿಯಿಂದ 14ನೇ ವರ್ಷದ ಕಾವೇರಿ ತೀರ್ಥ ವಿತರಣೆ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು.

ಕುಶಾಲನಗರ ಗಡಿಭಾಗದ ಕಾವೇರಿ ವೃತ್ತದಲ್ಲಿರುವ ಕಾವೇರಿ ಮಾತೆ ಪ್ರತಿಮೆಗೆ ದಿನದ ವಿಶೇಷ ಪೂಜೆ ನೆರವೇರಿಸಲಾಯಿತು. ಅರ್ಚಕ ಪುರುಷೋತ್ತಮ್ ಭಟ್ ಪೂಜಾ ವಿಧಿ ನೆರವೇರಿಸಿದರು.

ಎಸ್.ಎಲ್.ಎನ್.ಸಮೂಹ ಸಂಸ್ಥೆಯ ಪ್ರಮುಖರಾದ ನಾರಾಯಣ್, ಸಾತಪ್ಪನ್ ಮತ್ತು ವಿಶ್ವನಾಥನ್ ಕುಟುಂಬಸ್ಥರು ಪೂಜೆ ನೆರವೇರಿಸಿ ತೀರ್ಥ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು.

ಇದೇ ಸಂದರ್ಭ ಸೋಮವಾರಪೇಟೆ ‌ಮತ್ತು‌ ಮರಗೋಡಿನಲ್ಲಿ ತೀರ್ಥ ಪ್ರಸಾದ ವಿತರಣೆಗೆ ತೆರಳುವ ವಾಹನಕ್ಕೆ ಪೂಜೆ ಸಲ್ಲಿಸಿ ಚಾಲನೆ‌ ನೀಡಿ ಬೀಳ್ಕೊಡಲಾಯಿತು.ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅವರು ಪಕ್ಷದ ಮುಖಂಡರೊಂದಿಗೆ ಆಗಮಿಸಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಕಾವೇರಿ ಸಂರಕ್ಷಣೆ ಎಲ್ಲರ ಪ್ರಮುಖ ಆದ್ಯತೆಯಾಗಬೇಕಿದೆ. ತಾಯಿ ಕಾವೇರಿ ಎಲ್ಲರಿಗೂ ಸಮೃದ್ದಿ ಕರುಣಿಸಲಿ. ಕಳೆದ 14 ವರ್ಷಗಳಿಂದ ಪ್ರತಿ ವರ್ಷ ತೀರ್ಥ ವಿತರಣೆ, ಅನ್ನಸಂತರ್ಪಣೆ ನೆರವೇರಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರು.ಈ ಸಂದರ್ಭ ಮಾತನಾಡಿದ ಸಂಘದ ಪ್ರಮುಖರಾದ ರವೀಂದ್ರ ಪ್ರಸಾದ್, ಉತ್ತಮ ‌ಮಳೆಯಾಗುವ ಮೂಲಕ ನಾಡಿನ ಸಂರಕ್ಷಣೆಗೆ ಕೋರಿ ಸಾಮೂಹಿಕವಾಗಿ ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು. ಆವರಣದಲ್ಲಿ ನೆಟ್ಟು ಬೆಳೆಸಿದ ಗಿಡವೊಂದಕ್ಕೆ ವೃಕ್ಷ ಮಾತೆ ಸಾಲುಮರ ತಿಮ್ಮಕ್ಕ ನಾಮಕರಣ ಮಾಡಲಾಯಿತು. ಸ್ವಚ್ಛತೆ ಬಗ್ಗೆ ಅಳವಡಿಸಿದ ಫಲಕಗಳ ಅನಾವರಣ ಮಾಡಲಾಯಿತು.ಸಾವಿರಾರು ಮಂದಿ ಭಕ್ತಾದಿಗಳು ಆಗಮಿಸಿ ತೀರ್ಥ ಪ್ರಸಾದ ಪಡೆದರು.ಈ ಸಂದರ್ಭ ಕುಡಾ ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡುರಾವ್, ರೋಟರಿ ಸಂಸ್ಥೆ ನಿಕಟಪೂರ್ವ ಅಧ್ಯಕ್ಷ ಮನು ಪೆಮ್ಮಯ್ಯ, ಭಾರವಿ ಕನ್ನಡ ಸಂಘದ ಪ್ರಮುಖರಾದ ಬಬೀಂದ್ರಪ್ರಸಾದ್, ವಿಜೇಂದ್ರ ಪ್ರಸಾದ್, ಮೈಸೂರು ಜಿಲ್ಲಾ ಬಿಜೆಪಿ ಮುಖಂಡ ಚಂದ್ರು ಬೆಮ್ಮತ್ತಿ‌, ಚಂದ್ರು, ತಿಲಕ್ ಪೂಜಾರಿ, ರುದ್ರ, ಜಬೀಬುಲ್ಲಾ, ಹೇಮಂತ್ ರಾವ್, ಅಬೀಬ್ ರೆಹಮಾನ್, ಕಿಶನ್ ಕಾರ್ಯಪ್ಪ, ಸೇರಿದಂತೆ ಸಂಘದ ಪ್ರಮುಖರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೃದಯದ ಭಾಷೆಯೇ ನಿಜವಾದ ಸಾಹಿತ್ಯ: ಡಾ.ಶ್ರೀರಾಮ ಇಟ್ಟನ್ನವರ
ನಶಿಸಿಸುತ್ತಿರುವ ಭಾರತೀಯ ಸಂಸ್ಕೃತಿ, ಸಂಪ್ರದಾಯಗಳು: ಅನುಪಮಾ ಧಾರವಾಡ