ಫೆ.12ಕ್ಕೆ ನಿವೇಶನದ ಹಕ್ಕು ಪತ್ರ ವಿತರಣೆ

KannadaprabhaNewsNetwork |  
Published : Jan 17, 2025, 12:48 AM IST
15ಜಿಯುಡಿ1 | Kannada Prabha

ಸಾರಾಂಶ

ಗುಡಿಬಂಡೆ ಮುಖ್ಯ ರಸ್ತೆಯನ್ನು ಅಗಲೀಕರಣ ವೇಳೆ ಅನೇಕರು ತಮ್ಮ ಮನೆಗಳನ್ನು ಕಳೆದುಕೊಂಡವರಿಗೆ ಸದ್ಯರಾಜೀವ್ ಗಾಂಧಿ ವಸತಿ ನಿಗಮದಿಂದ 54 ಮಂದಿ ಫಲಾನುಭವಿಗಳಿಗೆ ನಿವೇಶನ ನೀಡಲು ಹಕ್ಕು ಪತ್ರ ನೀಡಲಾಗುವುದು. ಉಳಿದ ಸಂತ್ರಸ್ತರಿಗೆ ಫಲಾನಪಲೈಗಾರಹಳ್ಳಿ ಬಳಿ ನೀವೇಶ ನೀಡಲು ಕ್ರಮ ಕೈಗೊಳ್ಳಲಾಗುವುದು.

ಕನ್ನಡಪ್ರಭ ವಾರ್ತೆ ಗುಡಿಬಂಡೆ

ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣದ ವೇಳೆ ಅನೇಕರು ಮನೆ ಕಳೆದುಕೊಂಡಿದ್ದು, ಕೆಲವೊಂದು ಕಾರಣಗಳಿಂದ ಅವರಿಗೆ ನಿವೇಶನ ನೀಡಲು ತಡವಾಗಿತ್ತು. ಇದೀಗ ಮೊದಲ ಹಂತದಲ್ಲಿ ಫೆ.12ರಂದು 54 ಮಂದಿಗೆ ನಿವೇಶನದ ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ ಎಂದು ಶಾಸಕ ಸುಬ್ಬಾರೆಡ್ಡಿ ತಿಳಿಸಿದರು.

ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಆಶ್ರಯ ಸಮಿತಿ ಯೋಜನೆಯ ಸಭೆಯಲ್ಲಿ ಮಾತನಾಡಿದ ಅವರು, ಗುಡಿಬಂಡೆ ಮುಖ್ಯ ರಸ್ತೆಯನ್ನು ಅಗಲೀಕರಣ ವೇಳೆ ಅನೇಕರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಸದ್ಯರಾಜೀವ್ ಗಾಂಧಿ ವಸತಿ ನಿಗಮದಿಂದ 54 ಮಂದಿ ಫಲಾನುಭವಿಗಳಿಗೆ ನಿವೇಶನ ನೀಡಲು ಹಕ್ಕು ಪತ್ರ ನೀಡಲಾಗುವುದು ಎಂದರು.

ಮನೆ ಕಳೆದುಕೊಂಡ ಸಂತ್ರಸ್ತರು

ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣದ ವೇಳೆ ಸಂಪೂರ್ಣವಾಗಿ ಮನೆ ಕಳೆದುಕೊಂಡವರಿಗೆ ಮೊದಲ ಹಂತವಾಗಿ ಈ 54 ಸೈಟ್ ಗಳ ಹಕ್ಕು ಪತ್ರಗಳನ್ನು ನೀಡಲಾಗುತ್ತದೆ. ಸದ್ಯ ಸಿದ್ಧವಾಗಿರುವ ಪಟ್ಟಿಯಲ್ಲಿ ಯಾರಾದರೂ ನಿವೇಶನ ಕಳೆದುಕೊಂಡವರಿಲ್ಲದೇ ಬೇರೆಯವರಿದ್ದರೆ ಅಂತಹವರನ್ನು ಪತ್ತೆ ಮಾಡಿ ಪಟ್ಟಿಯಿಂದ ತೆಗೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಉಳಿದವರಿಗೂ ಸಹ ಶೀಘ್ರದಲ್ಲೇ ನಿವೇಶನ ನೀಡುವ ಕೆಲಸವಾಗಲಿದೆ ಎಂದರು.

ಈಗಾಗಲೇ ತಾಲೂಕಿನ ಪಲೈಗಾರಹಳ್ಳಿ ಬಳಿ 5 ಎಕರೆ ಜಮೀನಿನಲ್ಲಿ ನಿವೇಶನ ನೀಡಲು ಕೆಲಸಗಳು ನಡೆಯುತ್ತಿವೆ. ಅಲ್ಲಿ ಸುಮಾರು 157 ಸೈಟ್ ಗಳು ಸಿಗಲಿದ್ದು, ಇವುಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಲಾಗುತ್ತದೆ ಎಂದರು.

ಆಶ್ರಯ ಸಮಿತಿಯ ಸದಸ್ಯರಾದ ತಹಸೀಲ್ದಾರ್ ಸಿಗ್ಬತ್ತುಲ್ಲಾ, ಪ.ಪಂ ಮುಖ್ಯಾಧಿಕಾರಿ ಸಭಾ ಶರೀನ್, ಪಟ್ಟಣ ಪಂಚಾಯತಿ ಅಧ್ಯಕ್ಷ ವಿಕಾಸ್, ನಿರ್ಮಲಮ್ಮ, ಬಿ.ಮಂಜುನಾಥ್, ನಾಗರಾಜ್, ಫಯಾಜ್ ಸೇರಿದಂತೆ ಹಲವರು ಇದ್ದರು. .

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೇಕೇದಾಟು ಯೋಜನೆ ಅನುಷ್ಠಾನಕ್ಕೆ 30 ಮಂದಿ ತಂಡ ರಚಿಸಿದ ಸರ್ಕಾರ
ಗ್ರಾಪಂಗಳಲ್ಲಿ 10 ವರ್ಷಗಳಲ್ಲಿ ₹50000 ಕೋಟಿ ಅಕ್ರಮ: ಶಾಸಕ