ಪುನೀತ್ ರಾಜ್‌ಕುಮಾರ್ 4ನೇ ವರ್ಷದ ಸ್ಮರಣೆ: ಆಸ್ಪತ್ರೆ ಒಳರೋಗಿಗಳಿಗೆ ಮಧ್ಯಾಹ್ನ ಊಟ ವಿತರಣೆ

KannadaprabhaNewsNetwork |  
Published : Nov 03, 2025, 03:03 AM IST
ಪುನೀತ್ ರಾಜ್‌ಕುಮಾರ್ ಅವರ ೪ನೇ ವರ್ಷದ ಸ್ಮರಣೆ-ಆಸ್ಪತ್ರೆಯ ಒಳರೋಗಿಗಳಿಗೆ ಮಧ್ಯಾಹ್ನ ಊಟ ವಿತರಣೆ | Kannada Prabha

ಸಾರಾಂಶ

ಅಪ್ಪು ಅಭಿಮಾನಿ ಬಳಗದ ವತಿಯಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಮಧ್ಯಾಹ್ನ ಊಟ ವಿತರಿಸಲಾಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಚಲನ ಚಿತ್ರ ನಾಯಕ ನಟರಾಗಿದ್ದ ಪುನೀತ್ ರಾಜ್‌ಕುಮಾರ್ ಅವರ 4ನೇ ವರ್ಷದ ಸ್ಮರಣೆ ಅಂಗವಾಗಿ ಇಲ್ಲಿನ ಅಪ್ಪು ಅಭಿಮಾನಿಗಳ ಬಳಗದ ವತಿಯಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಮಧ್ಯಾಹ್ನ ಊಟ ವಿತರಿಸಲಾಯಿತು.ಬಳಗದ ಅಧ್ಯಕ್ಷ ರವಿಕುಮಾರ್ ಅಬ್ಬೂರುಕಟ್ಟೆ ಅವರ ನೇತೃತ್ವದಲ್ಲಿ ಆಸ್ಪತ್ರೆಯ ಒಳರೋಗಿಗಳಿಗೆ ಮೊಟ್ಟೆ, ಹಣ್ಣು ಸಹಿತ ಊಟ ನೀಡಲಾಯಿತು. ಈ ಸಂದರ್ಭ ಮಾತನಾಡಿದ ಅವರು, ಕನ್ನಡ ಚಲನಚಿತ್ರ ರಂಗದಲ್ಲಿ ನಟರಾಗಿ ಹೆಸರು ಮಾಡಿದ ಪುನೀತ್ ಅವರು ಹಲವಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ಅಗಲಿಕೆಯ ನಂತರವೂ ಅಭಿಮಾನಿಗಳ ಸಂಘದಿಂದ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿರುವುದಾಗಿ ತಿಳಿಸಿದರು.ಆಸ್ಪತ್ರೆಯ ಸ್ತ್ರೀ ರೋಗ ತಜ್ಞ ಡಾ. ಶಿವಪ್ರಸಾದ್ ಮಾತನಾಡಿ, ಮರಣದ ನಂತರವೂ ಜನಮಾನಸದಲ್ಲಿ ಉಳಿದಿರುವ ಪುನೀತ್ ಅವರ ಸೇವಾ ಕಾರ್ಯವನ್ನು ಸಂಘದ ಮೂಲಕ ಮುಂದುವರೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದರು.ಈ ಸಂದರ್ಭ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಜಮೀರ್ ಅಹಮ್ಮದ್, ಆರೋಗ್ಯ ರಕ್ಷಾ ಸಮಿತಿ ಸದಸ್ಯೆ ಮಂಜುಳಾ ಹರೀಶ್, ಸಿಬ್ಬಂದಿ, ಅಭಿಮಾನಿ ಬಳಗದ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ