ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕಿಟ್‌ ವಿತರಣೆ

KannadaprabhaNewsNetwork |  
Published : Aug 12, 2026, 02:00 AM IST
ಬಿ.ಬಿ. ಶಿವರಾಜ್    ರೋಟರಿ ಕ್ಲಬ್‌ನಿಂದ 25 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪೌಷ್ಟಿಕಾಂಶವುಳ್ಳ ಆಹಾರ ಕಿಟ್ನ್ನು  ವಿತರಣೆ  ಮಾಡಲಾಯಿತು. | Kannada Prabha

ಸಾರಾಂಶ

ಆರೋಗ್ಯ ಕ್ಷೇತ್ರದ ಜತೆಗೆ ಶಿಕ್ಷಣ, ಪರಿಸರ ಹಾಗೂ ಸಮಾಜಮುಖಿ ಸೇವೆಗಳಿಗೆ ರೋಟರಿ ಕ್ಲಬ್ ಆದ್ಯತೆ ನೀಡುತ್ತಿದ್ದು, ಅಗತ್ಯವಿರುವವರಿಗೆ ನೆರವು ನೀಡುವ ಮೂಲಕ ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯ ಮುಂದುವರಿಸಲಾಗುವುದು ಎಂದರು. ಗಂಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ಜಿ. ಆರ್‌. ಮಾತನಾಡಿ, ಗರ್ಭಿಣಿಯರ ಆರೋಗ್ಯದ ದೃಷ್ಟಿಯಿಂದ ಪ್ರತಿ ತಿಂಗಳ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಅಗತ್ಯ ರಕ್ತ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಗರ್ಭಿಣಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕನ್ನಡಪ್ರಭ ವಾರ್ತೆ ಬೇಲೂರುಗರ್ಭಿಣಿಯರು ತಮ್ಮ ಆರೋಗ್ಯದ ಜೊತೆಗೆ ಮಗುವಿನ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ರೋಟರಿ ಕ್ಲಬ್ ಬೇಲೂರು ಅಧ್ಯಕ್ಷ ಬಿ.ಬಿ. ಶಿವರಾಜ್ ಹೇಳಿದರು.

ಗಂಗೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಿಸ್ಟ್ರಿಕ್ಟ್- 3182, ಝೋನ್ - 8ರ ರೋಟರಿ ಕ್ಲಬ್ ವತಿಯಿಂದ 25ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಗರ್ಭಾವಸ್ಥೆಯಲ್ಲಿ ತಾಯಂದಿರಿಗೆ ಅಗತ್ಯವಾದ ಪೌಷ್ಟಿಕಾಂಶ ದೊರೆಯುವುದು ಅತ್ಯಂತ ಮುಖ್ಯ. ಆರೋಗ್ಯ ಕ್ಷೇತ್ರದ ಜತೆಗೆ ಶಿಕ್ಷಣ, ಪರಿಸರ ಹಾಗೂ ಸಮಾಜಮುಖಿ ಸೇವೆಗಳಿಗೆ ರೋಟರಿ ಕ್ಲಬ್ ಆದ್ಯತೆ ನೀಡುತ್ತಿದ್ದು, ಅಗತ್ಯವಿರುವವರಿಗೆ ನೆರವು ನೀಡುವ ಮೂಲಕ ಸಮಾಜದಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕಾರ್ಯ ಮುಂದುವರಿಸಲಾಗುವುದು ಎಂದರು. ಗಂಗೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ಜಿ. ಆರ್‌. ಮಾತನಾಡಿ, ಗರ್ಭಿಣಿಯರ ಆರೋಗ್ಯದ ದೃಷ್ಟಿಯಿಂದ ಪ್ರತಿ ತಿಂಗಳ ಆರೋಗ್ಯ ಕೇಂದ್ರಗಳಲ್ಲಿ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಅಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಅಗತ್ಯ ರಕ್ತ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಗರ್ಭಿಣಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.ರಕ್ತದೊತ್ತಡ, ಥೈರಾಯ್ಡ್, ಮಧುಮೇಹ ಸೇರಿದಂತೆ ಆರೋಗ್ಯ ಸಮಸ್ಯೆಗಳಿರುವ ಗರ್ಭಿಣಿಯರನ್ನು ಹೈರಿಸ್ಕ್ ಪ್ರಕರಣಗಳೆಂದು ಗುರುತಿಸಿ ಹೆಚ್ಚಿನ ವೈದ್ಯಕೀಯ ಆರೈಕೆ ನೀಡಲಾಗುತ್ತದೆ. ಗರ್ಭಾವಸ್ಥೆಯಲ್ಲಿ ಹಿಮೋಗ್ಲೋಬಿನ್ ಪ್ರಮಾಣವನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳಬೇಕು. ರಕ್ತದ ಪ್ರಮಾಣ ಕಡಿಮೆಯಾದರೆ ತಾಯಿ ಹಾಗೂ ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಪೌಷ್ಟಿಕ ಆಹಾರ ಸೇವನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷತಾ ಅಧಿಕಾರಿ ಕಾವ್ಯಶ್ರಿ ಮಾತನಾಡಿ ಗರ್ಭಿಣಿಯರು ಆರೋಗ್ಯ ನಿರ್ಲಕ್ಷಿಸಬಾರದು ಗರ್ಭಿಣಿಯರಿಗೆ ಒಂಬತ್ತು ತಿಂಗಳ ಅವಧಿ ತಮ್ಮ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳಲು ದೊರೆಯುತ್ತದೆ. ಈ ಅವಧಿಯಲ್ಲಿ ರಕ್ತದ ಪ್ರಮಾಣ ಹಾಗೂ ಮಗುವಿನ ಬೆಳವಣಿಗೆ ಉತ್ತಮವಾಗುವಂತೆ ಪೌಷ್ಟಿಕ ಆಹಾರ ಸೇವಿಸಬೇಕು. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಹೆರಿಗೆ ಸಂದರ್ಭದಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ರಾಘವೇಂದ್ರ, ಖಜಾಂಚಿ ಬಿ.ಎಲ್. ರಾಜೇಗೌಡ, ರೊ. ಸಂದೇಶ್, ರೋಟರಿ ಕ್ಲಬ್ ಸದಸ್ಯ ಹಾಗೂ ಆರೋಗ್ಯ ಸಿಬ್ಬಂದಿ ಶಂಭುಗೌಡ, ರೊ. ಪುಟ್ಟೇಗೌಡ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಗರ್ಭಿಣಿಯರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ: ಡಿ.ಸಿ.ತಮ್ಮಣ್ಣ ತೀವ್ರ ವಿರೋಧ
ಮನೆ ದೇವರ ದರ್ಶನ ಪಡೆದ ಸಚಿವ ಚಲುವರಾಯಸ್ವಾಮಿ ದಂಪತಿ