ಮಕ್ಕಳಲ್ಲಿ ರಕ್ತಹೀನತೆ ನೂನ್ಯತೆ ನಿವಾರಣೆಗೆ ಪೌಷ್ಟಿಕ ಆಹಾರ ವಿತರಣೆ: ಕವಿತಾ

KannadaprabhaNewsNetwork |  
Published : Nov 06, 2025, 02:30 AM IST
5ಎಚ್‌ ಪಿಟಿ4- ಹೊಸಪೇಟೆಯಲ್ಲಿ ಬುಧವಾರ ಗಣಿಬಾಧಿತ ಪ್ರದೇಶದ ಸಮಗ್ರ ಅಭಿವೃದ್ಧಿ (ಸಿಇಪಿಎಂಐಜೆಡ್) ಕಾರ್ಯಕ್ರಮದಡಿ ಸರ್ಕಾರಿ ಶಾಲಾ ಮಕ್ಕಳಿಗೆ ಪೌಷ್ಟಿಕ ಅಹಾರ ವಿತರಣಾ ಕಾರ್ಯಕ್ರಮಕ್ಕೆ ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಚಾಲನೆ ನೀಡಿದರು. ಜಿಪಂ ಸಿಇಒ ಅಕ್ರಂ ಷಾ ಮತ್ತಿತರರಿದ್ದರು. | Kannada Prabha

ಸಾರಾಂಶ

ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ಹೊಸಪೇಟೆ: ಸರ್ಕಾರಿ ಶಾಲಾ ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಸೇರಿದಂತೆ ಬಹುಪೋಷಕಾಂಶಗಳ ನ್ಯೂನತೆ ನಿವಾರಿಸಲು ಸರ್ಕಾರ ಮಹತ್ವಾಕಾಂಕ್ಷಿ ಯೋಜನೆ ತಂದಿರುವುದನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.

ನಗರದ ಪುಣ್ಯಮೂರ್ತಿ ರಾಘಪ್ಪ ಶೆಟ್ಟಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣಿ ಪರಿಸರ ಪುನಶ್ಚೇತನ ನಿಗಮದಿಂದ ಗಣಿಬಾಧಿತ ಪ್ರದೇಶದ ಸಮಗ್ರ ಅಭಿವೃದ್ಧಿ (ಸಿಇಪಿಎಂಐಜೆಡ್) ಕಾರ್ಯಕ್ರಮದಡಿ ಬುಧವಾರ ಸರ್ಕಾರಿ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಪಂ ಸಿಇಒ ಅಕ್ರಂ ಷಾ ಮಾತನಾಡಿ, ಮಕ್ಕಳು ಈ ಯೋಜನೆಯನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದರು.

31ನೇ ವಾರ್ಡ್‌ನ ನಗರಸಭೆ ಸದಸ್ಯ ತಾರಿಹಳ್ಳಿ ಜಂಬುನಾಥ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೆಂಕಟೇಶ್ ರಾಮಚಂದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ, ಎಸ್‌ಡಿಎಂಸಿ ಸದಸ್ಯರು, ಪೋಷಕರು ಸೇರಿದಂತೆ ಶಾಲಾ ಮಕ್ಕಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ