ಬಾಕಿಯಿರುವ ಹಕ್ಕುಪತ್ರ ವಿತರಣೆ: ಶಾಸಕ ಡಾ.ಮಂತರ್‌ ಗೌಡ

KannadaprabhaNewsNetwork |  
Published : Sep 17, 2025, 01:08 AM IST
ಕಂದಾಯ ಇಲಾಖೆಯ ವತಿಯಿಂದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಶಾಸಕ ಡಾ.ಮಂತರ್‌ ಗೌಡ | Kannada Prabha

ಸಾರಾಂಶ

ಕಂದಾಯ ಇಲಾಖೆಯ ವತಿಯಿಂದ ಫಲಾನುಭವಿಗಳಿಗೆ ಹಕ್ಕುಪತ್ರವನ್ನು ಶಾಸಕ ಡಾ. ಮಂತರ್‌ ಗೌಡ ಶಾಸಕರ ಕಚೇರಿ ಎದುರು ವಿತರಿಸಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಕಂದಾಯ ಇಲಾಖೆಯ ವತಿಯಿಂದ ಫಲಾನುಭವಿಗಳಿಗೆ ಹಕ್ಕುಪತ್ರವನ್ನು ಶಾಸಕ ಡಾ.ಮಂತರ್‌ ಗೌಡ ಶಾಸಕರ ಕಚೇರಿ ಎದುರು ವಿತರಿಸಿದರು.

ನಂತರ ಮಾತನಾಡಿದ ಅವರು, ಹಕ್ಕುಪತ್ರ ಪಡೆದುಕೊಂಡವರು ಜಾಗವನ್ನು ಮಾರಾಟ ಮಾಡದೆ ಕಾಪಾಡಿಕೊಳ್ಳಬೇಕು ಎಂದು ಶಾಸಕ ಡಾ.ಮಂತರ್ ಗೌಡ ಹೇಳಿದರು.ತಿರಸ್ಕೃತಗೊಂಡಿರುವ ಹಕ್ಕುಪತ್ರ ಅರ್ಜಿಗಳ ಪುನರ್ ಪರಿಶೀಲನೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಬಾಕಿಯಿರುವ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಭರವಸೆ ನೀಡಿದರು.

ಈ ಹಿಂದೆ ಕಂದಾಯ ಇಲಾಖೆ ಮಾಡಿದ ತಪ್ಪುಗಳಿಂದ ಈಗ ಬಡವರು ಹಕ್ಕಪತ್ರಗಳಿಂದ ವಂಚಿತರಾಗಬೇಕಾದ ಸಂಕಷ್ಟ ಬಂದಿದೆ. ಪ್ರಸಕ್ತ ಕಂದಾಯ ಅಧಿಕಾರಿಗಳು ಪ್ರತಿ ಗ್ರಾಮಗಳಿಗೆ ವಾಹನಗಳಲ್ಲಿ ತೆರಳುವ ಸೌಲಭ್ಯವಿದೆ. ಉನ್ನತ ದರ್ಜೆಯ ತಾಂತ್ರಿಕತೆಯಿದೆ. ಕಂದಾಯ ಇಲಾಖೆಗೆ ಸೇರಬೇಕಾದ ಜಾಗವನ್ನು ಇನ್ನಾದರೂ ಕಾಪಾಡಿಕೊಳ್ಳಬೇಕು. ಬಡವರಿಗೆ ಹಕ್ಕುಪತ್ರ ನೀಡುವ ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಹಕ್ಕುಪತ್ರ ನೀಡಬೇಕು ಎಂದು ಹೇಳಿದರು.ಕಂದಾಯ ಇಲಾಖೆಗೆ ಸಲ್ಲಿಕೆಯಾಗಿರುವ, ಸದ್ಯದ ನಿಯಮದಂತೆ ಹಕ್ಕುಪತ್ರಗಳನ್ನು ನೀಡಲು ಸಾಧ್ಯವಾಗದ ಯಾವುದೇ ಅರ್ಜಿಗಳನ್ನು ತಹಸೀಲ್ದಾರ್ ಅವರು ವಜಾ ಮಾಡಬಾರದು. ಪೂರಕವಾದ ನಿಯಮಗಳನ್ನು ಸರ್ಕಾರ ತಂದಾಗ ಕಾನೂನಿನ ಚೌಕಟ್ಟಿನಲ್ಲಿ ಉಳಿಕೆ ಅರ್ಜಿಗಳನ್ನು ವಿಲೇವಾರಿ ಮಾಡಬಹುದು ಎಂದು ಹೇಳಿದರು.ವಡಯನಪುರ ಸೇರಿದಂತೆ ಅನೇಕ ಗ್ರಾಮಗಳಲ್ಲಿರುವ ಜಾಗದ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮುಂದುವರಿದಿದೆ. ಬಡವರಿಗೆ ಹಕ್ಕುಪತ್ರ ಕೊಡಿಸುವ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡಲಾಗುತ್ತಿದೆ ಎಂದು ಹೇಳಿದರು.ಸೋಮವಾರ ಸಂತೆ ದಿನ ತಾಲೂಕು ಕಚೇರಿಯಲ್ಲಿ ಎಲ್ಲ ಅಧಿಕಾರಿಗಳು ಸಾರ್ವಜನಿಕರಿಗೆ ಸಿಗಬೇಕು. ಯಾವಾಗ ಕೇಳಿದರೂ ಫೀಲ್ಡ್‌ ಗೆ ಹೋಗಿದ್ದಾರೆ ಎಂಬ ಉತ್ತರವನ್ನು ಇನ್ನು ಮುಂದೆ ಕೊಡಬಾರದು. ಈ ಬಗ್ಗೆ ತಹಸೀಲ್ದಾರ್ ಅವರು ಸಿಬ್ಬಂದಿಗಳಿಗೆ ಸೂಚನೆ ನೀಡಬೇಕು ಎಂದು ಹೇಳಿದರು.ತಹಸೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, 2014 ಮತ್ತು 2022ರಲ್ಲಿ ಹಕ್ಕುಪತ್ರಕ್ಕಾಗಿ ಅಕ್ರಮ-ಸಕ್ರಮ ಸಮಿತಿಗೆ ಸಲ್ಲಿಕೆಯಾಗಿರುವ 10 ಸಾವಿರ ಅರ್ಜಿಗಳಲ್ಲಿ, ಈಗಾಗಲೇ 4200 ಅರ್ಜಿಗಳಿಗೆ ಮಂಜೂರಾತಿ ನೀಡಲಾಗಿದೆ. ಕಾನೂನಿನ ಪರಿಮಿತಿಯಲ್ಲಿ ಇರದ ಉಳಿಕೆ ಅರ್ಜಿಗಳನ್ನು ತಿರಸ್ಕಾರ ಮಾಡಿಲ್ಲ. ಶಾಸಕರ ಸಲಹೆಯಂತೆ ಪ್ರತಿಹಂತದಲ್ಲೂ ಪುನರ್ ಪರಿಶೀಲನೆ ಮಾಡಲಾಗುತ್ತಿದೆ. ಸಾಧ್ಯವಾದಷ್ಟು ಅರ್ಜಿಗಳಿಗೆ ಕಂದಾಯ ಇಲಾಖೆಯಿಂದ ಹಕ್ಕುಪತ್ರಗಳನ್ನು ನೀಡಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ಬಿ.ಬಿ.ಸತೀಶ್, ಜನಾರ್ಧನ್, ಚಂದ್ರಿಕಾ ಕುಮಾರ್, ಗ್ಯಾರೆಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕಾಂತರಾಜು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ.ಲೋಕೇಶ್, ಇಒ ಪರಮೇಶ ಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''