ಅರ್ಹ ರೈತ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿಯಲ್ಲಿ ಮಂಜೂರಾದ ಪಂಪ್‌ಸೆಟ್ ಹಾಗೂ ಅಗತ್ಯ ಸಲಕರಣೆಗಳನ್ನು ಮಾಜಿ ಸಚಿವ ಹಾಗೂ ಎಂಎಲ್ಸಿ ಎನ್.ಎಸ್.ಭೋಸರಾಜು ಅವರು ವಿತರಿಸಿದರು
ಮಾನ್ವಿ: ಅರ್ಹ ರೈತ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿಯಲ್ಲಿ ಮಂಜೂರಾದ ಪಂಪ್‌ಸೆಟ್ ಹಾಗೂ ಅಗತ್ಯ ಸಲಕರಣೆಗಳನ್ನು ಮಾಜಿ ಸಚಿವ ಹಾಗೂ ಎಂಎಲ್ಸಿ ಎನ್.ಎಸ್.ಭೋಸರಾಜು ಅವರು ವಿತರಿಸಿದರು.
ಈ ವೇಳೆ ಮಾತನಾಡಿದ ಅವರು, ನೀರಿನ ಸೌಲಭ್ಯವಿದ್ದಲ್ಲಿ ಮಾತ್ರ ರೈತರು ಕೃಷಿಯಲ್ಲಿ ಹೆಚ್ಚಿನ ಆದಾಯವನ್ನು ಪಡೆಯುವುದಕ್ಕೆ ಸಾಧ್ಯ ವಾಗುತ್ತದೆ ಎನ್ನುವ ಉದ್ದೇಶದಿಂದ ರೈತರ ಜಮೀನುಗಳಲ್ಲಿ ಬೋರ್‌ವೆಲ್‌ಗಳ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಅರ್ಹ ಫಲಾನುಭವಿಗಳಿಗೆ ಸರಕಾರದಿಂದ ಪಂಪ್‌ಸೆಟ್‌ಗಳನ್ನು ಹಾಗೂ ಅಗತ್ಯ ಪರಿಕರಗಳನ್ನು ವಿತರಿಸಲಾಗುತ್ತಿದೆ. ರೈತರು ಸರಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಕೃಷಿಯಲ್ಲಿ ಹೆಚ್ಚಿನ ಇಳುವರಿಯನ್ನು ಪಡೆದುಕೊಂಡು ಜೀವನಮಟ್ಟ ಸುಧಾರಿಸಿಕೊಳ್ಳಿ ಎಂದು ತಿಳಿಸಿದರು. ಅರ್ಹ ರೈತ ಫಲಾನುಭವಿಗಳಿಗೆ ಪಂಪ್‌ಸೆಟ್‌ಗಳನ್ನು ಹಾಗೂ ಅಗತ್ಯ ಪರಿಕರಗಳನ್ನು ವಿತರಿಸಲಾಯಿತು. ಈ ವೇಳೆ ಹಿರಿಯ ಮುಖಂಡರಾದ ಕೆ.ಶಾಂತಪ್ಪ, ಜಯಣ್ಣ, ಮೊಹಮ್ಮದ್ ಶಾಲಂ, ರವಿ ಪಾಟೀಲ್, ರಾಯಚೂರು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಬದೊಡ್ಡಿ ಆಂಜಿನೇಯ್ಯ, ಚುಕ್ಕಿಶಿವಕುಮಾರ್, ಅಮರೇಗೌಡ ಹಂಚಿನಾಳ, ತಿಮ್ಮಪ್ಪ ಮ್ಯಾತ್ರಿ, ಮಹದೇವ್, ಬೋಳಬಂಡಿ, ವೀರೇಶ ರಾಜಲಬಂಡಾ, ಯೇಸು ಸೇರಿದಂತೆ ಇನ್ನಿತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.