ವಿದ್ಯಾರ್ಥಿಗಳಿಗೆ ‘ರಾಗಿ ಮಾಲ್ಟ್’ ವಿತರಣೆ: ಮಧು ಬಂಗಾರಪ್ಪ

KannadaprabhaNewsNetwork |  
Published : Jan 09, 2024, 02:00 AM IST
ಚಿತ್ರ : 8ಎಂಡಿಕೆ2 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.  | Kannada Prabha

ಸಾರಾಂಶ

ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಧು ಬಂಗಾರಪ್ಪ ಮಾತನಾಡಿದರು. ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಯೋಚಿಸಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ

ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಯೋಚಿಸಲಾಗಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆ ಹರಿಸಲಾಗುತ್ತಿದೆ. 13 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ. 37 ಸಾವಿರ ಶಿಕ್ಷಕರನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕೈಗೊಂಡಿದೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಸೇರಿದಂತೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ ಹಾಗೂ ಹಾಲು ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತಲುಪಿಸಲಾಗುತ್ತಿದೆ ಎಂದರು. ಶತಮಾನ ಪೂರೈಸಿದ ಶಾಲೆಗಳ ಅಭಿವೃದ್ಧಿ: ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹೊರೆಯಾಗದಂತೆ ತಪ್ಪಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕೊಡಗು ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ಶಾಲೆಗಳು ಇದ್ದು, ಈ ಶಾಲೆಗಲನ್ನು ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಹಳೆ ಶಾಲೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳು ನೆಲದಲ್ಲಿ ಕೂರಬಾರದು. ಶಾಲೆಗಳಿಗೆ ಡೆಸ್ಕ್, ಬೆಂಚ್ ಇತರೆ ಸಾಮಾಗ್ರಿಗಳನ್ನು ವಿತರಿಸಲಾಗುವುದು ಎಂದರು.

ಹೊಸ ತಾಲೂಕುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇಮಕಾತಿ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳ ಕೊರತೆ ಇರುವುದರಿಂದ ನೇಮಕ ಮಾಡಿಲ್ಲ. ಮುಂದಿನ ದಿನಗಳಲ್ಲಿ ನೇಮಕಾತಿ ಮಾಡಲಾಗುವುದು ಎಂದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳ ಕುಂದುಕೊರತೆ ಸಂಬಂಧಿಸಿದಂತೆ ಅಹವಾಲು ಆಲಿಸಿದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಹಾಕಿ ಕ್ರೀಡೆಯು ಕೊಡಗು ಜಿಲ್ಲೆಯ ಸಂಸ್ಕೃತಿಯ ಭಾಗವಾಗಿದೆ ಎಂದರು.

ಪೊನ್ನಂಪೇಟೆ ಹಾಕಿ ಕ್ರೀಡಾಂಗಣಕ್ಕೆ ಇನ್ನಷ್ಟು ಮೂಲ ಸೌಲಭ್ಯಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವಂತಾಗಬೇಕು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 10 ಆಟದ ಮೈದಾನಗಳನ್ನು ಗುರುತಿಸಲಾಗಿದ್ದು, ಸ್ಥಳೀಯ ಕ್ರೀಡಾಪಟುಗಳು ಇದರ ಪ್ರಯೋಜನ ಪಡೆಯುವಂತಾಗಬೇಕು ಎಂದರು.

ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕ ಎಂ.ಚಂದ್ರಕಾಂತ್, ತಹಸೀಲ್ದಾರ್ ಎಚ್.ಎನ್.ರಾಮಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ಡಾ.ಬಿ.ಸಿ.ದೊಡ್ಡೇಗೌಡ, ಎಸ್.ಭಾಗ್ಯಮ್ಮ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಹದೇವಸ್ವಾಮಿ, ಕ್ರೀಡಾ ಸಂಚಾಲಕ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಶಿಕ್ಷಕರ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ