ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ತಾಲೂಕು ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಪ್ರಜಾಸೇವಾ ಆಂದೋಲನ ಕುರಿತು ಮಾತನಾಡಿ, ಪಟ್ಟಣ ಪುರಸಭಾ ವ್ಯಾಪ್ತಿಯ ರಸ್ತೆ ಚರಂಡಿ ಹಾಗೂ ಇತರೆ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು ಎಂದರು.
ಈಗಾಗಲೇ ಪುರಸಭೆಗೆ ಫಲಾನುಭವಿಗಳು ತಮ್ಮ ನಿವೇಶನ ಹಾಗೂ ಮನೆಗೆ ಸಂಬಂಧಿಸಿದ ಖಾತೆಗಳ ಅರ್ಜಿ ಸಲ್ಲಿಸಿ ಖಾತೆ ಮಾಡಿಸಿಕೊಳ್ಳಲು ಅರ್ಜಿ ನೀಡಿರುವರಿಗೆ ಬಿ ಖಾತೆಯಿಂದ ಎ ಖಾತೆ ಬದಲಾವಣೆ, ಪೌತಿ ಖಾತೆ, ಸಾಮಾಜಿಕ ಭದ್ರತೆಯ ವೃದ್ಯಾಪ್ಯ ವೇತನ, ವಿಧುವಾ ವೇತನ, ಅಂಗವಿಕಲರ ವೇತನಗಳು ಸೇರಿದಂತೆ ಅವುಗಳ ಅರ್ಜಿಗಳನ್ನು ವಿಲೇವಾರಿ ಮಾಡಿಸಿ ಗಂಜಾಂನಲ್ಲಿ ಸರ್ಕಾರದಿಂದ ಆಯೋಜಿಸಿರುವ ಎಲ್ಲಾ ಸಮಾಜದ ಜನರಿಗೆ ಪ್ರಜಾಸೇವಾ ಕಾರ್ಯಕ್ರಮದ ಮೂಲಕ ಮನೆ ಮನೆಗೆ ತೆರಳಿ ಆಯಾ ಫಲಾನುಭವಿಗಳಿಗೆ ವಿತರಿಸಲಾಗುವುದು ಎಂದರು.ಹೊಸ ಪಿಂಚಣಿಗೆ ಅರ್ಜಿ ಸಲ್ಲಿಸುವರು ಗ್ರಾಮಲೆಖ್ಕಿಗ ಹಾಗೂ ರಾಜಸ್ವ ನೀರೀಕ್ಷರ ಬಳಿ ಹೊಸ ಅರ್ಜಿಗಳನ್ನು ಸಲ್ಲಿಸಬಹುದು. ಜೊತೆಗೆ ಸಾಮಾಜಿಕ ಭದ್ರತೆಯ ವೇತನದ ಹಳೆಯ ಅರ್ಜಿಗಳಲ್ಲಿ ತಪ್ಪಾಗಿ ಹಲವು ದಿನಗಳಿಂದ ವೇತನಗಳು ಬಿಡುಗಡೆಯಾಗದಿದ್ದರೆ ಅಂತಹ ಅರ್ಜಿಗಳನ್ನು ಪರಿಶೀಲಿಸಿ ಸಮಸ್ಯೆ ಇದ್ದರೆ ಸ್ಥಳದಲ್ಲೇ ತಿದ್ದುಪಡಿ ಮಾಡಿ ವಿತರಿಸಲಾಗುವುದು ಎಂದರು.
ಸಭೆಯಲ್ಲಿ ತಹಸೀಲ್ದಾರ್ ಚೇತನ ಯಾದವ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಲ್. ದಿನೇಶ್, ಪುರಸಭೆ ಮುಖ್ಯಾಧಿಕಾರಿ ರಾಜಣ್ಣ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡಪ್ರಭ ವಾರ್ತೆ ಮದ್ದೂರುಜನರ ಕುಂದುಕೊರತೆ ಆಲಿಸುವ ಜೊತೆಗೆ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಉದ್ದೇಶದಿಂದ ಸೆ.5ರಂದು ಪ್ರಜಾಸೇವೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಗುರುವಾರ ಹೇಳಿದರು.
ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸರ್ಕಾರದ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವುದೇ ನಿಜವಾದ ಪ್ರಜಾಸೇವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಪ್ರಜಾಸೇವಾ ಆಂದೋಲನವನ್ನು ಯಶಸ್ವಿಗೊಳಿಸಬೇಕು. ತಾಲೂಕಿನ ಜನರು ಭಾಗವಹಿಸಿ ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಸಲ್ಲಿಸಿ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು ಎಂದು ಮನವಿ ಮಾಡಿದರು.