ನಾಲ್ಕು ಹೋಬಳಿಯಲ್ಲಿ ಬಿತ್ತನೆ ಬೀಜ ವಿತರಣೆ

KannadaprabhaNewsNetwork |  
Published : Jun 03, 2026, 01:15 AM IST
ಫೋಟೋ 2ಪಿವಿಡಿ2.ಫೋಟೋ 2ಪಿವಿಜಿ2ಪಾವಗಡ,ಮುಂಗಾರು ಹಂಗಾಮು ಪ್ರಯುಕ್ತ ಶಾಸಕ,ತುಮುಲ್‌ ಅಧ್ಯಕ್ಷರಾದ  ಎಚ್‌.ವಿ‌.ವೆಂಕಟೇಶ್ ತಾಲೂಕಿನ ರೈತರಿಗೆ ಸಹಾಯಧನದ ಶೇಂಗಾ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿದರು.ಫೋಟೋ 2ಪಿವಿಡಿ3ತಾಲೂಕಿನ ಅನೇಕ ಮಂದಿ ರೈತ ಮುಖಂಡರು ಹಾಗೂ ಸಾರ್ವಜನಿಕರು ಸೇರಿ,ಶಾಸಕ ಎಚ್‌.ವಿ.ವೆಂಕಟೇಶ್‌ ಅವರ ತಂದೆ,ಮಾಜಿ ಸಚಿವರಾದ ವೆಂಕಟರಮಣಪ್ಪ ಅವರು ನಿಧನರಾಗಿದ್ದ ಹಿನ್ನಲೆಯಲ್ಲಿ ಎಪಿಎಂಸಿ ಯಾರ್ಡ್‌ ಸಭಾಂಗಣದಲ್ಲಿ ಎರಡು ನಿಮಿಷಗಳ ಕಾಲ ಮೌನಾಚರಣೆ ನಡೆಸಿ,ಗೌರವ ಸಲ್ಲಿಸಲಾಯಿತು | Kannada Prabha

ಸಾರಾಂಶ

ಪಟ್ಟಣ ಸೇರಿದಂತೆ ತಾಲೂಕಿನ ನಾಲ್ಕು ಹೋಬಳಿಯ ಕೇಂದ್ರ ಸ್ಥಾನಗಳಲ್ಲಿ ಬಿತ್ತನೆ ವಿತರಣೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ರೈತರು ಯಾವುದೇ ಆತಂಕಕ್ಕೆ ಒಳಗಾಗದೆ ಬೀಜಗಳನ್ನು ಪಡೆಯಬೇಕು ಎಂದು ಶಾಸಕ ಹಾಗೂ ತುಮುಲ್‌ ಅಧ್ಯಕ್ಷರಾದ ಎಚ್‌.ವಿ.ವೆಂಕಟೇಶ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಪಾವಗಡ

ಪಟ್ಟಣ ಸೇರಿದಂತೆ ತಾಲೂಕಿನ ನಾಲ್ಕು ಹೋಬಳಿಯ ಕೇಂದ್ರ ಸ್ಥಾನಗಳಲ್ಲಿ ಬಿತ್ತನೆ ವಿತರಣೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ರೈತರು ಯಾವುದೇ ಆತಂಕಕ್ಕೆ ಒಳಗಾಗದೆ ಬೀಜಗಳನ್ನು ಪಡೆಯಬೇಕು ಎಂದು ಶಾಸಕ ಹಾಗೂ ತುಮುಲ್‌ ಅಧ್ಯಕ್ಷರಾದ ಎಚ್‌.ವಿ.ವೆಂಕಟೇಶ್‌ ಹೇಳಿದರು.

ಪಟ್ಟಣದ ಎಪಿಎಂಸಿ ಮಾರುಕಟ್ಟೆ ಗೋದಾಮಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಿಯಾಯಿತಿ ದರದ ಶೇಂಗಾ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಸಕ್ತ ಸಾಲಿಗೆ ರೈತರಿಗೆ ಸಮಯಕ್ಕೆ ಸರಿಯಾಗಿ ಬಿತ್ತನೆ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರದ ರಿಯಾಯಿತಿ ದರದಲ್ಲಿ ಶೇಂಗಾ ಇತರೆ ದ್ವಿದಳ ಧಾನ್ಯಗಳ ಬೀಜಗಳನ್ನು ವಿತರಿಸಲಾಗುತ್ತಿದ್ದು, ಸರ್ಕಾರ ಜಾರಿಪಡಿಸಿದ್ದ ಕ್ವಿಂಟಾಲ್‌ ದರದಲ್ಲಿ ಪಹಣಿ ಹಾಗೂ ಇತರೆ ಅಗತ್ಯ ದಾಖಲೆ ಸಲ್ಲಿಸಿ ಬಿತ್ತನೆ ಬೀಜ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು. ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವ ಸಲುವಾಗಿ ತಾಲೂಕು ಕೃಷಿ ಇಲಾಖೆಯಿಂದ ಪ್ರಸಕ್ತ ರಿಯಾಯಿತಿ ದರದಲ್ಲಿ ಶೇಂಗಾ ಹಾಗೂ ತೊಗರಿ, ಅಲಸಂದೆ ಮತ್ತು ಮೆಕ್ಕೆಜೋಳ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ ಅದನ್ನು ಸದುಪಯೋಗಪಡಿಸಿಕೊಳ್ಳುವಂತೆ ರೈತರಿಗೆ ಕರೆ ನೀಡಿ ಶುಭ ಹಾರೈಸಿದರು.

ಇದೇ ವೇಳೆ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಅಜಯ್ ಕುಮಾರ್,ಪುರಸಭಾ ಮಾಜಿ ಅಧ್ಯಕ್ಷರಾದ ಸುದೇಶ್ ಬಾಬು, ಮುಖಂಡರಾದ ಶಂಕರ್ ರೆಡ್ಡಿ, ಚಂದ್ರಶೇಖರರೆಡ್ಡಿ ಪಿ. ಎಚ್‌.ರಾಜೇಶ್, ಕೆಒಎಫ್‌ ನಿರ್ದೇಶಕ ಎ.ಎನ್.ನಾರಾಯಣಪ್ಪ, ವಿತರಕ ಬಾಲಾಜಿ, ಕರೆಕ್ಯಾತನಹಳ್ಳಿಯ ಡಿ.ಮಂಜುನಾಥ್, ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ, ತಾಲೂಕು ಅಧ್ಯಕ್ಷ ನರಸಿಂಹರೆಡ್ಡಿ, ಕೃಷ್ಣರಾವ್, ಕಲ್ಪವೃಕ್ಷ ರವಿ, ಶಿವಮೂರ್ತಿ, ವಾಗೀಶ್ ಆರಾಧ್ಯ, ಗುತ್ತಿಗೆದಾರ ಆರ್.ಎ.ಹನುಮಂತರಾಯಪ್ಪ ಪಳವಳ್ಳಿ ಸೊಸೈಟಿ ಕಾರ್ಯದರ್ಶಿ ನಜುರುಲ್ಲ, ಹರೀಶ್ ಸೇರಿದಂತೆ ಹಲವಾರು ಮುಖಂಡರು ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಮೀರ್‌ ವಿರುದ್ಧ ಕಠಿಣ ಕ್ರಮ, ಮಂಪರು ಪರೀಕ್ಷೆಗೆ ಒತ್ತಾಯ
ಹೊನ್ನಾಳಿ ಶಾಸಕ ಶಾಂತನಗೌಡಗೆ ಸಂಪುಟ ಸಚಿವ ಸ್ಥಾನ ನೀಡಿ