ಯುವಕ ಸಂಘಗಳಿಗೆ ಕ್ರೀಡಾ ಸಲಕರಣೆ ವಿತರಣೆ

KannadaprabhaNewsNetwork |  
Published : Mar 21, 2025, 12:33 AM IST
20ಸಿಎಚ್‌ಎನ್‌57ಚಾಮರಾಜನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಯುವ ಚೈತನ್ಯ ಯೋಜನೆಯಡಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜಿಲ್ಲೆಯ 7 ಯುವಕ ಸಂಘಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕ್ರೀಡಾ ಸಲಕರಣೆಗಳನ್ನು ವಿತರಿಸಿದರು.  | Kannada Prabha

ಸಾರಾಂಶ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಯುವ ಚೈತನ್ಯ ಯೋಜನೆಯಡಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜಿಲ್ಲೆಯ 7 ಯುವಕ ಸಂಘಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಕ್ರೀಡಾ ಸಲಕರಣೆಗಳನ್ನು ವಿತರಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಯುವ ಚೈತನ್ಯ ಯೋಜನೆಯಡಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜಿಲ್ಲೆಯ 7 ಯುವಕ ಸಂಘಗಳಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಕ್ರೀಡಾ ಸಲಕರಣೆಗಳನ್ನು ವಿತರಿಸಿದರು.ಕ್ರೀಡಾ ಸಲಕರಣೆಗಳನ್ನು ವಿತರಿಸಿ ಬಳಿಕ ಯುವಕ ಸಂಘಗಳನ್ನು ಉದ್ದೇಶಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಯುವಕರನ್ನು ಉತ್ತೇಜಿಸುವ ಸಲುವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯುವಕ ಸಂಘಗಳನ್ನು ಸ್ಥಾಪಿಸಿ ಕ್ರೀಡಾಕಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಹೆಚ್ಚಿನ ಪ್ರಗತಿ ಸಾಧಿಸಿದ ಯುವಕ ಸಂಘಗಳನ್ನು ಸರ್ಕಾರದ ವತಿಯಿಂದ ಯುವ ಚೈತನ್ಯ ಯೋಜನೆಯಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದರು.ಯುವಕ ಸಂಘಗಳಿಗೆ ಅಗತ್ಯವಿರುವ ಕ್ರೀಡಾ ಸಲಕರಣೆಗಳನ್ನು ನೀಡುವ ನಿಟ್ಟಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರಾಜ್ಯದಲ್ಲಿ ಒಟ್ಟು 200 ಯುವಕ ಸಂಘಗಳನ್ನು ಗುರುತಿಸಲಾಗಿದ್ದು, ಈ ಪೈಕಿ ಜಿಲ್ಲೆಯ 7 ಯುವಕ ಸಂಘಗಳು ಸೇರಿವೆ. ಆಯ್ಕೆಯಾದ ಸಂಘಕ್ಕೆ ವಾಲಿಬಾಲ್, ನೆಟ್, ಥ್ರೋಬಾಲ್, ನೆಟ್, ಫುಟ್ಬಾಲ್, ಷಟಲ್ ಬ್ಯಾಡ್ಮಿಂಟನ್, ರಾಕೆಟ್ ನೆಟ್, ಕಾಕ್, ಕೇರಂ, ಚೆಸ್ ಸೆಟ್, ಸ್ಕಿಪ್ಪಿಂಗ್ ರೋಪ್ ಕಿಟ್ ನೀಡಲಾಗುತ್ತದೆ. ಗ್ರಾಮೀಣ ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು. ವಿತರಿಸಲಾಗಿರುವ ಕ್ರೀಡಾ ಪರಿಕರಗಳನ್ನು ಯುವಕ ಸಂಘಗಳು ಸದ್ಭಳಕೆ ಮಾಡಿಕೊಳ್ಳಬೇಕು. ಯುವಕರು ದೇಹದಾರ್ಢತೆ ವೃದ್ಧಿಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು. ದೈಹಿಕ ಹಾಗೂ ಮಾನಸಿಕ ಆತ್ಮಸೈರ್ಯ ಹೆಚ್ಚಿಸಿಕೊಳ್ಳಬೇಕು ಎಂದು ಆಶಿಸಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸುರೇಶ್, ಫುಟ್ಬಾಲ್ ತರಬೇತುದಾರರಾದ ಗೋಪಾಲ್, ಯುವಕ ಸಂಘದ ಅಧ್ಯಕ್ಷ ನಾಗೇಂದ್ರ, ಕಾರ್ಯದರ್ಶಿ ಪ್ರಕಾಶ್, ಇತರರು ಇದೇ ವೇಳೆ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!