ಕನ್ನಡಪ್ರಭ ವಾರ್ತೆ ಮಡಿಕೇರಿ
ರೀಬಿಲ್ಡ್ ಕೊಡಗು ಸಂಸ್ಥೆ ವತಿಯಿಂದ ನಗರದ ಜೂನಿಯರ್ ಕಾಲೇಜು ಆವರಣದಲ್ಲಿರುವ ಶಾಲಾ ಸಿದ್ಧತಾ ಕೇಂದ್ರದಲ್ಲಿ ನಡೆದ ವಿಶೇಷ ಅಗತ್ಯತೆವುಳ್ಳ ವಿದ್ಯಾರ್ಥಿಗಳ ಪೋಷಕರ ಆಪ್ತ ಸಮಾಲೋಚನಾ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಟ್ಯ್ರಾಕ್ ಸೂಟ್ ವಿತರಣೆ ಮಾಡಿ ಮಾತನಾಡಿದರು.
ಜಿಲ್ಲೆಯಲ್ಲಿ 2018-19ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ರೀಬಿಲ್ಡ್ ಕೊಡಗು ಸಂಸ್ಥೆ ಹುಟ್ಟಿಕೊಂಡಿದ್ದು, ಸಂಸ್ಥೆಯ ಮೂಲಕ ನಿರಂತರವಾಗಿ ಸಮಾಜ ಸೇವೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಸಂಸ್ಥೆಗೆ ಪ್ರಪಂಚಾದ್ಯಂತದ ಆತ್ಮೀಯರು ಕೊಡುಗೆ ನೀಡಿದ್ದು, ಇದರಿಂದ ಇಲ್ಲಿಯವರೆಗೆ ನಮ್ಮ ಪ್ರಯಾಣ ಫಲಪ್ರದವಾಗಿದೆ ಮತ್ತು ತೃಪ್ತಿಕರವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ ಕೆ.ಎ.ಕುಶಾಲಪ್ಪ, ನಮ್ಮ ಪ್ರಯತ್ನದಿಂದ ಸಾವಿರಾರು ಜನರು ಪ್ರಯೋಜನ ಪಡೆಯುತ್ತಿದ್ದಾರೆ. ಇದೀಗ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.ವಿರಾಜಪೇಟೆಯ ನರ್ಸಿಂಗ್ ಹೋಮ್‌ನಲ್ಲಿ ರೀಬಿಲ್ಡ್ ಸಂಸ್ಥೆಯ ಈಕ್ವಿಪಿಕ್ ಬ್ಯಾಂಕ್ ಇದ್ದು, ವಿಶೇಷ ಚೇತನರಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಅಗತ್ಯ ಇರುವವರು ತಮ್ಮನ್ನು ಸಂಪರ್ಕಿಸಿ ಉಚಿತವಾಗಿ ಪಡೆದುಕೊಳ್ಳಬಹುದು ಎಂದು ಹೇಳಿದರು.
ನಗರದ ಜಿಲ್ಲಾಸ್ಪತ್ರೆಯ ಕೊಠಡಿ ಸಂಖ್ಯೆ 11ರಲ್ಲಿ ಪ್ರತಿ ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ವಿಶೇಷ ಮಕ್ಕಳ ಸಮಾಲೋಚನೆ ನಡೆಯಲಿದ್ದು, ಅಗತ್ಯ ಇರುವವರು ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಡಾ.ರಮೇಶ್ ತಿಳಿಸಿದರು.
ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್‌ನ ಸುನಿತಾ ಮಾತನಾಡಿ, ಯೂತ್ ಮೂಮೆಂಟ್‌ನಿಂದ ಲಭ್ಯವಾಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ರೀಬಿಲ್ಡ್ ಕೊಡಗು ಸಂಸ್ಥೆ ವತಿಯಿಂದ ವಿಶೇಷ ಚೇತನ ವಿದ್ಯಾರ್ಥಿಗಳಿಗೆ 95 ಟ್ಯ್ರಾಕ್ ಸೂಟ್‌ಗಳನ್ನು ವಿತರಣೆ ಮಾಡಲಾಯಿತು. ಮಡಿಕೇರಿ ಇನ್ನರ್ ವೀಲ್ ಕ್ಲಬ್ ಸಂಸ್ಥೆಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.