ಕನ್ನಡಪ್ರಭ ವಾರ್ತೆ ಬಾಳೆಹೊನ್ನೂರು
ಪಟ್ಟಣದಲ್ಲಿ ಶಾಸಕರ ನಿಧಿ ಹಾಗೂ ಕಂದಾಯ ಇಲಾಖೆಯಿಂದ ನೂತನವಾಗಿ ನಿರ್ಮಾಣವಾಗಿರುವ ನಾಡಕಚೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಕಂದಾಯ ಸಚಿವ ಕೃಷ್ಣ ಬೈರೇಗೌಡರ ಆಶಯದಂತೆ ರಾಜ್ಯಾದ್ಯಂತ ಕಂದಾಯ ಗ್ರಾಮ, ಕಂದಾಯ ಉಪಗ್ರಾಮಗಳ ಯೋಜನೆ ಘೋಷಣೆಯಾಗಿ ಜಾರಿಗೆ ಬಂದಿದೆ. ರಾಜ್ಯಾದ್ಯಂತ ಈವರೆಗೆ ಸುಮಾರು ₹3.5 ಲಕ್ಷಕ್ಕೂ ಅಧಿಕ ಜನರಿಗೆ ಹಕ್ಕುಪತ್ರಗಳನ್ನು ಈ ಯೋಜನೆಯಡಿ ವಿತರಿಸಲಾಗಿದೆ ಎಂದರು.
ಎನ್.ಆರ್.ಪುರ ತಾಲೂಕಿನಲ್ಲಿ 57 ಗ್ರಾಮಗಳಲ್ಲಿ 35 ಗ್ರಾಮಗಳ ಜಂಟಿ ಸರ್ವೆ ಈಗಾಗಲೇ ಮುಕ್ತಾಯಗೊಂಡಿದ್ದು, ಉಳಿದ ಗ್ರಾಮಗಳನ್ನು ಶೀಘ್ರವಾಗಿ ಜಂಟಿ ಸರ್ವೆ ನಡೆಸಲಾಗುವುದು. ಈಗಾಗಲೇ ಒತ್ತುವರಿ ಮಾಡಿದ ಜಮೀನು, ಅಕ್ರಮ ವಾಗಿ ಮನೆ ಕಟ್ಟಿಕೊಂಡವರಿಗೆ ಕಾಫಿ ಬೆಳೆ ಹೊರತುಪಡಿಸಿ ಫಾರಂ ನಂ.50, 53, 57ರ ಅಡಿಯಲ್ಲಿ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದರು.ಈ ಹಿಂದೆ ಕಂದಾಯ ಇಲಾಖೆಯಲ್ಲಿ ಸಾಕಷ್ಟು ಅಕ್ರಮ, ಭ್ರಷ್ಟಾಚಾರ ಪ್ರಕರಣಗಳು ನಡೆಯುತ್ತಿದ್ದವು. ಆದರೆ ಇದೀಗ ಸರ್ಕಾರ ಕೈಗೊಂಡ ಕ್ರಮಗಳಿಂದ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆ ಕಂಡುಬಂದಿದೆ. ಫಲಾನುಭವಿಗಳ ಮನೆಗೆ ಹೋಗಿ ಹಕ್ಕು ಪತ್ರನೀಡುವ ಕೆಲಸ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿರುವ ೩೪ ನಾಡಕಚೇರಿಗಳ ಪೈಕಿ ಬಾಳೆಹೊನ್ನೂರು ನಾಡಕಚೇರಿ ಪ್ರಗತಿಯಲ್ಲಿ ೧೦ನೇ ಸ್ಥಾನ ಪಡೆದಿದೆ. ಕ್ಷೇತ್ರದಲ್ಲಿ ಈ ಬಾರಿ 5 ಹೊಸ ನಾಡಕಚೇರಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದರು.
ಬಂಡಿಮಠದ 9 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ
7 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ತಾಂತ್ರಿಕ ತೊಂದರೆಯಿಂದ ಹಕ್ಕುಪತ್ರ ವಿತರಣೆಗೆ ವಿಳಂಭವಾಗಿದೆ. ಸಮಸ್ಯೆ ಸರಿಪಡಿಸಿ ಹಕ್ಕುಪತ್ರ ವಿತರಣೆಗೆ ಕ್ರಮವಹಿಸಲಾಗುವುದು. ಭದ್ರಾನದಿಗೆ ನೂತನವಾಗಿ ನಿರ್ಮಿಸುತ್ತಿರುವ ಸೇತುವೆ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಬೇಕಿದೆ. ಸೇತುವೆ ಬಳಿಯಲ್ಲಿ ಇರುವ ಕುಟುಂಬಸ್ಥರು ಕೂಡಲೇ ಬಾಡಿಗೆ ಮನೆಗಳಿಗೆ ಸ್ಥಳಾಂತರಗೊಂಡು ಮನೆ ತೆರವುಗೊಳಿಸಿಕೊಟ್ಟರೆ ಸ್ಥಳಾಂತರಗೊಂಡ ಕುಟುಂಬಗಳಿಗೆ ಬಾಡಿಗೆ ನೀಡಲು ಕ್ರಮಕೈ ಗೊಳ್ಳಲಾಗುವುದು ಎಂದು ತಿಳಿಸಿದರು.