ಶಾಲಾ ಮಕ್ಕಳಿಗೆ ಟ್ರ್ಯಾಕ್ ಸೂಟ್ ವಿತರಣೆ

KannadaprabhaNewsNetwork |  
Published : Nov 20, 2024, 12:30 AM IST
19ಕೆಎಂಎನ್ ಡಿ24 | Kannada Prabha

ಸಾರಾಂಶ

ಮೈಸೂರಿನ ಮಿತ್ರ ಫೌಂಡೇಷನ್ ವತಿಯಿಂದ ತಾಲೂಕಿನ ಬಳ್ಳೇಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಟ್ರ್ಯಾಕ್ ಸೂಟ್ ಗಳನ್ನು ವಿತರಿಸಲಾಯಿತು.

ಕೆ.ಆರ್.ಪೇಟೆ: ಮೈಸೂರಿನ ಮಿತ್ರ ಫೌಂಡೇಷನ್ ವತಿಯಿಂದ ತಾಲೂಕಿನ ಬಳ್ಳೇಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಟ್ರ್ಯಾಕ್ ಸೂಟ್ ಗಳನ್ನು ವಿತರಿಸಲಾಯಿತು.

ಮಿತ್ರ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ವಿಜಯ ರಾಮೇಗೌಡರ ಪರ ಆಪ್ತ ಸಹಾಯಕ ಬಸವರಾಜು ಶಾಲಾ ಮಕ್ಕಳಿಗೆ ಟ್ರ್ಯಾಕ್ ಸೂಟ್ ಗಳನ್ನು ವಿತರಿಸಿ ಮಾತನಾಡಿ, ವಿಜಯರಾಮೇಗೌಡರು ಸಂಕಷ್ಟದಲ್ಲಿರುವ ತಾಲೂಕಿನ ಜನರಿಗೆ ಸಹಾಯ ಮಾಡುವುದರ ಜೊತೆಗೆ ದೇವಾಲಯಗಳ ಜೀರ್ಣೋದ್ಧಾರ, ಕೃಷಿಕರಿಗೆ ನೆರವು ಮತ್ತು ಮಾರ್ಗದರ್ಶನ ನೀಡುತ್ತಿದ್ದಾರೆ ಎಂದರು.

ಕ್ರೀಡೆ ಹಾಗೂ ರಂಗಭೂಮಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮೂಲಕ ಗ್ರಾಮೀಣ ಪ್ರದೇಶದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವಿಗೆ ಮಿತ್ರ ಫೌಂಡೇಷನ್ ಸ್ಪಂದಿಸುತ್ತಿದೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳನ್ನು ಉಳಿಸಬೇಕಾದರೆ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಉತ್ತೇಜನ ನೀಡುವ ಕೆಲಸ ಮಾಡಬೇಕು. ಗ್ರಾಮೀಣ ಶಾಲೆಗಳಿಗೆ ಸಮುದಾಯದ ನೆರವಿನ ಅಗತ್ಯವಿದೆ. ಹೀಗಾಗಿ ವಿಜಯರಾಮೇಗೌಡರ ಆಶಯದಂತೆ ಬಳ್ಳೇಕೆರೆ ಸರ್ಕಾರಿ ಶಾಲೆಯ ಮಕ್ಕಳಿಗೆ ಟ್ರ್ಯಾಕ್ ಸೂಟ್ ನೀಡಲಾಗುತ್ತಿದೆ ಎಂದು ತಿಳಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್, ಸದಸ್ಯರಾದ ಶಿವಕುಮಾರ್, ಕುಮಾರಿ, ಗ್ರಾಪಂ ಸದಸ್ಯೆ ಸವಿತಾ ಇಂದ್ರೇಶ್, ಮುಖಂಡರಾದ ಮಹೇಶ್, ಶಿಕ್ಷಕರಾದ ಮಹೇಶ್ ಕುಮಾರ್, ಪಿ.ನಿಂಗೇಗೌಡ, ವಿಜಯಲಕ್ಷ್ಮೀ, ಅಂಗನವಾಡಿ ಶಿಕ್ಷಕರಿ ರಾಧಾ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿಲ್ಲಿಯಲ್ಲಿ ಡಿಕೆಶಿ ರಾಜ್ಯ ನೀರಾವರಿ ಸಭೆ
ಗ್ಯಾಸ್ ಇಲ್ಲದೇ ಬೆಳಗಾವಿಯ 60 + ಕೈಗಾರಿಕೆ ಬಂದ್‌ ಹಂತಕ್ಕೆ