ಕೃಷಿ ಸಚಿವರಿಂದ ಅರ್ಹರಿಗೆ ವಿವಿಧ ಸವಲತ್ತುಗಳ ವಿತರಣೆ

KannadaprabhaNewsNetwork |  
Published : May 22, 2025, 12:59 AM IST
21ಎಂಎನ್‌ಡಿ-4ಮಂಡ್ಯ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ವಿವಿಧ ಸವಲತ್ತುಗಳನ್ನು ವಿತರಿಸಿದರು. | Kannada Prabha

ಸಾರಾಂಶ

ಗ್ರಂಥಾಲಯಗಳಿಗೆ ಪುಸ್ತಕ ವಿತರಣೆ ಸರ್ಕಾರ ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಜ್ಞಾನಾರ್ಜನೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ೨೫೫ ಗ್ರಾಮಗಳಲ್ಲಿ ಗ್ರಂಥಾಲಯವನ್ನು ಪ್ರಾರಂಭಿಸಿದ್ದು, ಇಂದು ಸಚಿವರು ಹೆಚ್ಚುವರಿ ೨೫೫ ಗ್ರಂಥಾಲಯಗಳಿಗೆ ಪ್ರತಿ ಗ್ರಂಥಾಲಯಕ್ಕೆ ೨ ಲಕ್ಷ ರು. ವೆಚ್ಚದ ಪುಸ್ತಕಗಳನ್ನು ಸಾಂಕೇತಿವಾಗಿ ವಿತರಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ ಜಿಲ್ಲಾ ಪಂಚಾಯ್ತಿ ಆವರಣದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು.

೫೦ ಸಾಧನ ಸಲಕರಣೆ ವಿತರಣೆ:

ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನ-೧೩, ಬ್ಯಾಟರಿ ಚಾಲಿತ ವೀಲ್ ಚೇರ್- ೧೧, ಶ್ರವಣ ಸಾಧನ- ೧೫, ವೀಲ್ ಚೇರ್- ೦೪, ಟ್ರೈಸೈಕಲ್-೦೨, ಕ್ರಚರ್ಸ್-೦೪ ಹಾಗೂ ವಾಕರ್- ೦೨ ಒಟ್ಟು ೫೦ ವಿಶೇಷಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಮೊಬೈಲ್ ಮೆಡಿಕಲ್ ಯುನಿಟ್ ವಾಹನಗಳು:

ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಗೆ ಎಂ.ಎಂ.ಯು ಕಟ್ಟಡ ಕಾರ್ಮಿಕರು ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲು ಮೂರು ಮೊಬೈಲ್ ಮೆಡಿಕಲ್ ಯುನಿಟ್ ವಾಹನಗಳು ಜಿಲ್ಲೆಗೆ ಮಂಜೂರಾಗಿದ್ದು, ಅವುಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ಕೊಟ್ಟರು.

ವಾಹನದಲ್ಲಿ ಓರ್ವ ವೈದ್ಯರು, ಜಿಎನ್‌ಎಂ, ಎಎನ್‌ಎಂ, ಲ್ಯಾಬ್ ಟೆಕ್ನಿಷಿಯನ್, ಸಹಾಯಕರು ಹಾಗೂ ವಾಹನ ಚಾಲಕರು ಒಟ್ಟು ೬ ಜನರು ಕಾರ್ಯನಿರ್ವಹಿಸಲಿದ್ದಾರೆ. ಕಟ್ಟಡ ಕಾರ್ಮಿಕರು ಹೆಚ್ಚಿರುವ ಸ್ಥಳ ಅಥವಾ ಇಲಾಖೆ ನೀಡುವ ರೂಟ್‌ವ್ಯಾಪ್‌ನಂತೆ ಸಂಚರಿಸಿ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಕೆಲಸಗಳನ್ನು ನಿರ್ವಹಿಸಲಿದೆ.

೨ ಲಕ್ಷ ರು. ವೆಚ್ಚದ ಪುಸ್ತಕಗಳ ಸಾಂಕೇತಿಕ ವಿತರಣೆ:

ಗ್ರಂಥಾಲಯಗಳಿಗೆ ಪುಸ್ತಕ ವಿತರಣೆ ಸರ್ಕಾರ ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಜ್ಞಾನಾರ್ಜನೆಯನ್ನು ಹೆಚ್ಚಿಸಬೇಕು ಎಂದು ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ ೨೫೫ ಗ್ರಾಮಗಳಲ್ಲಿ ಗ್ರಂಥಾಲಯವನ್ನು ಪ್ರಾರಂಭಿಸಿದ್ದು, ಇಂದು ಸಚಿವರು ಹೆಚ್ಚುವರಿ ೨೫೫ ಗ್ರಂಥಾಲಯಗಳಿಗೆ ಪ್ರತಿ ಗ್ರಂಥಾಲಯಕ್ಕೆ ೨ ಲಕ್ಷ ರು. ವೆಚ್ಚದ ಪುಸ್ತಕಗಳನ್ನು ಸಾಂಕೇತಿವಾಗಿ ವಿತರಿಸಿದರು.

೧೦೧ ,ಆ್ಯಂಡರಾಯ್ಡ್ ಪಿಒಎಸ್ ಯಂತ್ರ ವಿತರಣೆ ಗ್ರಾಮ ಪಂಚಾಯ್ತಿಗಳಲ್ಲಿ ಕರ ಸಂಗ್ರಹಣೆಗಾಗಿ ಉಪಯೋಗಿಸುವ ೧೦೧ ಪಿಒಎಸ್ ಯಂತ್ರವನ್ನು ಜಿಲ್ಲಾ ಪಂಚಾಯತ್ ವತಿಯಿಂದ ಖರೀದಿಸಿದ್ದು, ಅವುಗಳನ್ನು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಸಚಿವರು ವಿತರಿಸಿ, ಬಿಲ್ ಕಲೆಕ್ಟರ್‌ಗಳು ಯಂತ್ರವನ್ನು ವ್ಯವಸ್ಥಿತವಾಗಿ ಉಪಯೋಗಿಸಬೇಕು ಎಂದರು.

ಮಾವು ಮೇಳ ಪೋಸ್ಟರ್ ಬಿಡುಗಡೆ:

ತೋಟಗಾರಿಕೆ ಇಲಾಖೆಯಿಂದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಮೇ ೨೬ ರಿಂದ ೨೮ ರವರೆಗೆ ಮಾವು ಮತ್ತು ಹಲಸು ಮೇಳ ಹಾಗೂ ಸಸ್ಯ ಸಂತೆ- ೨೦೨೫ ನ್ನು ಹಮ್ಮಿಕೊಳ್ಳಲಾಗಿದ್ದು, ಅದರ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಮೇಳದಲ್ಲಿ ನೈಸರ್ಗಿಕವಾಗಿ ಮಾಗಿಸಿದ ಕಾರ್ಬೈಡ್ ಮುಕ್ತ ಮಾವು ಮತ್ತು ಹಲಸು ಮಾರಾಟ ಹಾಗೂ ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಾಗುವುದು.

ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ, ಜಿಪಂ ಉಪ ಕಾರ್ಯದರ್ಶಿ ಲಕ್ಷ್ಮೀ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ