ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದಿಂದ ಜೂನ್ 29, 30 ರಂದು ಬಾಗಲಕೋಟೆ ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ ಎಂದು ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನವನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಮ್ಮೇಳನ ನಡೆಯಲಿದ್ದು, 29ರಂದು ಬೆಳಗ್ಗೆ 8 ಗಂಟೆಗೆ ರಾಷ್ಟ್ರಧ್ವಜ, ನಾಡ ಧ್ವಜ ಮತ್ತು ಪರಿಷತ್ತಿನ ಧ್ವಜಾರೋಹಣ ನೆರವೇರುವುದು. 8.30 ಗಂಟೆಗೆ ಜಿಲ್ಲೆಯ ವಿವಿಧ ಕಲಾ ತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷ ಹಿರಿಯ ಸಾಹಿತಿ ತಾತಾಸಾಹೇಬ ಬಾಂಗಿ ನೇತೃತ್ವದಲ್ಲಿ ಭುವನೇಶ್ವರಿದೇವಿ ಪೂಜೆ ಹಾಗೂ ಮೆರವಣಿಗೆಯು ಜಿಲ್ಲಾ ಕಸಾಪ ಭವನದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದವರಿಗೆ ನಡೆಯಲಿದೆ ಎಂದರು.
ಬೆಳಗ್ಗೆ 10.30 ಗಂಟೆಗೆ ಸಮ್ಮೇಳನ ಉದ್ಘಾಟನೆ ಸಮಾರಂಭ ಜರುಗಲಿದ್ದು, ಸಾನ್ನಿಧ್ಯವನ್ನು ಯಡೆಯೂರ ತೋಂಟದಾರ್ಯ ಸಂಸ್ಥಾನಮಠದ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ವಹಿಸುವರು. ಶಾಸಕ ಎಚ್.ವೈ. ಮೇಟಿ ಅಧ್ಯಕ್ಷತೆ ವಹಿಸಲಿದ್ದು, ಡಾ.ಪದ್ಮಿವಿ ನಾಗರಾಜು ಆಶಯನುಡಿಗಳನ್ನಾಡುವರು. ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಸಮ್ಮೇಳನ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ರಜತಕೋಟೆ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ್ದು, ಶಾಸಕ ಜೆ.ಟಿ. ಪಾಟೀಲ ಕೃತಿ ಬಿಡುಗಡೆ ಮಾಡುವರು. ಶಾಸಕ ವಿಜಯಾನಂದ ಕಾಶಪ್ಪನವರ ಪುಸ್ತಕ ಮಳಿಗೆ ಉದ್ಘಾಟಿಸುವರು. ಮಾಜಿ ಸಚಿವ ಎಸ್.ಆರ್. ಪಾಟೀಲ ಪರಿಷತ್ತಿನ ಕೃತಿ ಬಿಡುಗಡೆಗೊಳಿಸುವರು. ಸಂಸದ ಪಿ.ಸಿ. ಗದ್ದಿಗೌಡರ ವಿವಿಧ ಮಳಿಗೆಗಳ ಉದ್ಘಾಟನೆ ಮಾಡುವರು. ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಪಿ.ಎಚ್. ಪೂಜಾರ, ಎಚ್.ಆರ್. ನಿರಾಣಿ, ಶಾಸಕರಾದ ಭೀಮಸೇನ ಚಿಮ್ಮನಕಟ್ಟಿ, ಸಿದ್ದು ಸವದಿ, ಜಗದೀಶ ಗುಡಗುಂಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಜಯಕುಮಾರ ಸರನಾಯಕ, ಬಸವೇಶ್ವರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತಪಶೆಟ್ಟಿ, ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷ ಡಾ.ಕೆ.ಆರ್. ದುರ್ಗಾದಾಸ್ ಆಗಮಿಸಲಿದ್ದು, ಅತಿಥಿಗಳಾಗಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಜಿ.ಪಂ.ಸಿಇಒ ಶಶಿಧರ ಕುರೇರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಆಗಮಿಸಲಿದ್ದಾರೆಂದು ತಿಳಿಸಿದರು.ವಿವಿಧ ಗೋಷ್ಠಿಗಳು, ವಿಶೇಷ ಉಪನ್ಯಾಸಗಳು, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ, ಸಾಧಕರಿ ಸನ್ಮಾನ, ಜಿಲ್ಲೆಯ ವಿವಿಧ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದ್ವಾಂಸರು, ಹಿರಿಯ ಸಾಹಿತಿಗಳು, ಸಂಪನ್ಮೂಲ ವ್ಯಕ್ತಿಗಳು, ಕಲಾವಿದರು ಸೇರಿದಂತೆ ಜನ ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳುವರು ಎಂದರು. ಸುದ್ದಿಗೋಷ್ಠಿಯಲ್ಲಿ ಪಾಂಡುರಂಗ ಸಣ್ಣಪ್ಪನವರ, ಕಿರಣ ಬಾಳಾಗೋಳ, ಚಂದ್ರಶೇಖರ ಕಾಳನ್ನವರ್, ಮುತ್ತು ಬಳ್ಳಾ ಇದ್ದರು.
.ಬಾಕ್ಸ್....ಸಮಾರೋಪ ಸಮಾರಂಭ30ರಂದು ಸಂಜೆ 5.30 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಚರಂತಿಮಠದ ಪ್ರಭುಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸುವರು. ಕುವೆಂಪು ಭಾಷಾ ಭಾರತಿ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಸಮಾರೋಪ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ಕುಕ್ಕಟ ನಿಗಮದ ಮಾಜಿ ಅಧ್ಯಕ್ಷ ಯಲ್ಲಪ್ಪ ಬೆಂಡಿಗೇರಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಜಿಪಂ ಮಾಜಿ ಅಧ್ಯಕ್ಷ ಹೂವಪ್ಪ ರಾಠೋಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ಖ್ಯಾತ ವೈದ್ಯರಾದ ಡಾ.ಬಿ.ಎಚ್. ಕೆರೂಡಿ, ರಾಜ್ಯ ರೆಡ್ಡಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಸ್.ಬಿ. ಮಾಚಾ, ಸಾಂಸ್ಕೃತಿಕ ಚಿಂತಕ ಬಸಪ್ಪ ಮಂಟೂರ ಆಗಮಿಸಲಿದ್ದಾರೆ ಎಂದು ಹೇಳಿದರು.