ಕನ್ನಡಪ್ರಭ ವಾರ್ತೆ ಮೈಸೂರುವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 323.04 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ನೆರವೇರಿಸಿದರು.ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಕುಪ್ಯ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ವರುಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಮೂರು ಬಾರಿ ಕಾರ್ಯಕ್ರಮ ಆಯೋಜಿಸಲಾಗಿದೆ. 2024ರಲ್ಲಿ 501 ಕೋಟಿ ರೂ. ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, 2025ರಲ್ಲಿ 1108 ಕೋಟಿ ರೂ. ವೆಚ್ಚದ ಕಾಮಗಾರಿ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಇಂದು 323 ಕೋಟಿ ರೂ. ಸೇರಿದಂತೆ ಒಟ್ಟು 1932 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ವರುಣಾ ವಿಧಾನಸಭಾ ಕ್ಷೇತ್ರ ಒಂದರಲ್ಲೇ ಹಮ್ಮಿಕೊಳ್ಳಲಾಗಿದೆ ಎಂದರು. ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳಿಗಾಗಿ 1,15,000 ಕೋಟಿ ರೂ. ವೆಚ್ಚ ಮಾಡಲಾಗಿದ್ದು, ಇದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಕೂಡ ಒತ್ತು ನೀಡಲಾಗುತ್ತಿದೆ. ಮೈಸೂರು ಜಿಲ್ಲೆ ಒಂದರಲ್ಲೇ 10 ಸಾವಿರ ಕೋಟಿ ರೂ. ಅಭಿವೃದ್ಧಿ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದೇನೆ ಎಂದರು.ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಮಾತನಾಡಿ, ಜಿಲ್ಲೆಯ ವರುಣ ಕ್ಷೇತ್ರದಲ್ಲಿ ನೀಮ್ಹಾನ್ಸ್ ಆಸ್ಪತ್ರೆ ಮಾದರಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಮುಖ್ಯಮಂತ್ರಿಗಳು ಮೈಸೂರು ಜಿಲ್ಲೆಯಲ್ಲಿ ಜಯದೇವ್ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಪ್ರಾರಂಭಿಸಿ ಬಡವರಿಗೆ ಉತ್ತಮ ಆರೋಗ್ಯ ಸೇವೆ ಪಡೆಯುವ ರೀತಿ ಮಾಡಿದ್ದಾರೆ ಎಂದರು.ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕಳೆದ ಸಾಲು ಹಾಗೂ ಸದರಿ ಸಾಲಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಪ್ರತಿ ವರ್ಷ ನೂರಾರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಹಮ್ಮಿಕೊಳ್ಳಲಾಗುತ್ತಿರುವುದು ಸರ್ಕಾರದಿಂದ ಜನಪರ ಕೆಲಸಗಳಿಗೆ ಸಾಕ್ಷಿ ಎಂದು ಹೇಳಿದರು.ಸಂವಿಧಾನದ ಮೌಲ್ಯವನ್ನು ಪ್ರತಿಯೊಬ್ಬರು ತಿಳಿಯಬೇಕು. ಸಂವಿಧಾನವನ್ನು ಗೌರವಿಸಿ ಪಾಲನೆ ಮಾಡುವ ಜನಪ್ರತಿನಿಧಿಗಳನ್ನು ಸಾರ್ವಜನಿಕರು ಬೆಂಬಲಿಸಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಹಕರಿಸಬೇಕು ಎಂದರು.ಸಂಸದ ಸುನೀಲ್ ಬೋಸ್ ಮಾತನಾಡಿ, ಸಂಗೊಳ್ಳಿ ರಾಯಣ್ಣ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡವರು ಬಾಬೂ ಜಗ ಜೀವನ್ ರಾಮ್ ಅವರು ಕಾರ್ಮಿಕರ ಅಭಿವೃದ್ಧಿಗಾಗಿ ಕಾರ್ಮಿಕ ವಿಮೆ ತಂದರು. ಸಮಾಜದಲ್ಲಿ ಹಿಂದುಳಿದ ವರ್ಗದವರ ಅಭಿವೃದ್ಧಿಗೆ ದುಡಿದವರು. ಇಂತಹ ಮಹಾನ್ ಚೇತನಗಳ ಪುತ್ಥಳಿಯನ್ನು ಅನಾವರಣಗೊಳಿಸಿರುವುದು ಸಂತೋಷದ ವಿಷಯ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಉನ್ನತ ಶಿಕ್ಷಣ ಸಚಿವ ಡಿ. ಸುಧಾಕರ್, ರಾಜ್ಯ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಚ್.ಎಂ. ರೇವಣ್ಣ, ವಿಧಾನ ಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ, ಶಾಸಕ ಡಿ. ರವಿಶಂಕರ್, ಮೈಲ್ಯಾಕ್ ಅಧ್ಯಕ್ಷ ಗಣೇಶ್ ಮೊದಲಾದವರು ಇದ್ದರು.---ಬಾಕ್ಸ್ ಸುದ್ದಿ321.46 ಕೋಟಿ ರೂ. ವೆಚ್ಚದ 154 ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ 1.58 ಕೋಟಿ ರೂ. ವೆಚ್ಚದ 3 ಕಾಮಗಾರಿಗಳ ಉದ್ಘಾಟನೆಕನ್ನಡಪ್ರಭ ವಾರ್ತೆ ಮೈಸೂರು