ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶ್ರೀ ಸಂತ ಸೇವಾಲಾಲ್ ಜಯಂತ್ಯುತ್ಸವ ಆಚರಣಾ ಸಮಿತಿ ಸಂಯುಕ್ತವಾಗಿ ಭಾನುವಾರ ಆಯೋಜಿಸಿದ್ದ ಶ್ರೀ ಸಂತ ಸೇವಾಲಾಲ್ ಜಯಂತಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಎಲ್ಲರೂ ಒಗ್ಗಟ್ಟಿನಿಂದ ಒಂದೇ ವೇದಿಕೆಯಲ್ಲಿ ಕೆಲಸ ಮಾಡುವಂತಾಗಬೇಕು. ನಾವು ಒಗ್ಗಟ್ಟಾಗಿ ಇದ್ದಾಗ ಮಾತ್ರ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಫಲರಾಗುತ್ತೇವೆ. ಹೀಗಾಗಿ, ಎಲ್ಲರನ್ನೂ ಒಗ್ಗೂಡಿಸಿ, ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು.ಲಂಬಾಣಿ ಸಮುದಾಯ ಕರ್ನಾಟಕಕ್ಕಿಂತ ಹೆಚ್ಚಾಗಿ ಉತ್ತರಕರ್ನಾಟಕದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅದರಲ್ಲೂ ಹೈದರಾಬಾದ್ ಕರ್ನಾಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಮೈಸೂರಿನ ಭಾಗಗಳಲ್ಲಿ ಏಳರಿಂದ ಎಂಟು ಸಾವಿರ ಜನಸಂಖ್ಯೆ ಮಾತ್ರ ಇದೆ. ನಮ್ಮ ಚಾಮರಾಜ ಕ್ಷೇತ್ರದಲ್ಲಿ ಬಂಜಾರ ಸಮುದಾಯದವರಿಗೆ ಸಮುದಾಯ ಭವನವನ್ನು ಲೋಕಾರ್ಪಣೆ ಮಾಡಿದ್ದೇವೆ. ಬಂಜಾರ ಸಮುದಾಯ ಕೇಳುವಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಅವರು ಭರವಸೆ ನೀಡಿದರು.
ಸೇವಾಲಾಲ್ ಕೊಡುಗೆ ಅಪಾರ
280 ವರ್ಷಗಳ ಹಿಂದೆ ಸಂತ ಸೇವಾಲಾಲ್ ಅವರು ಮಾಡಿರುವಂತಹ ಕೆಲಸಗಳು ಅಪಾರವಾದದ್ದು, ಅವುಗಳನ್ನು ಪ್ರಚಾರ ಮಾಡಲು ಯಾವುದೇ ಮಾಧ್ಯಮಗಳು ಇರಲಿಲ್ಲ. ಹಾಗೂ ಅವರ ಪುಸ್ತಕಗಳನ್ನು ಪ್ರಚಾರ ಮಾಡಲು ಯಾರು ಇರಲಿಲ್ಲ. ಅಂತಹ ಕಾಲದಲ್ಲಿಯೇ ಸಂತ ಸೇವಾಲಾಲ್ ಅವರು ಎಷ್ಟೋ ಜನರ ಮನಸ್ಸು ಗೆದ್ದಿದ್ದಾರೆ ಎಂದರೆ ಅವರು ಮಾಡಿದಂತಹ ಕೆಲಸ ಸಮಾಜಕ್ಕೆ ಕೊಟ್ಟಿರುವಂತಹ ಕೊಡುಗೆ ಅಪಾರ ಎಂದು ಅವರು ಹೇಳಿದರು.
ಕಲಬುರಗಿ ಜಿಲ್ಲೆಯ ಅಬಕಾರಿ ಅಧೀಕ್ಷಕ ಶ್ರೀರಾಮ್ ದೇವಸೋಥ್ ಅವರು ವಿಶೇಷ ಉಪನ್ಯಾಸ ನೀಡಿದರು. ವಿಜಯನಗರ ಜಿಲ್ಲೆಯ ಬಂಜಾರ ಶ್ರೀಶಕ್ತಿ ಪೀಠದ ಶ್ರೀ ಶಿವಪ್ರಕಾಶ ಮಹಾರಾಜ್ ಸಾನ್ನಿಧ್ಯ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್, ಬಂಜಾರ ಸೇವಾ ಸಂಘದ ಅಧ್ಯಕ್ಷ ಎಂ. ಸುಂದರ್, ಉಪಾಧ್ಯಕ್ಷ ತೇಜಾನಾಯ್ಕ್, ಕಾರ್ಯದರ್ಶಿ ಎಂ. ಅನಿಲ್, ಮುಖಂಡರಾದ ಕಾವೇರಿ ಬಾಯಿ, ಧರಣಿಭಾಯಿ ಸುದರ್ಶನ್, ಪ್ರಕಾಶ್ ಮೊದಲಾದವರು ಇದ್ದರು.
ಕೋಟ್...
- ಸಿ.ಎನ್. ಮಂಜೇಗೌಡ, ವಿಧಾನಪರಿಷತ್ತು ಸದಸ್ಯ