ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ವಡೇರಪುರ ಸಮೀಪದ ದೊಡ್ಡಜಟಕಾ ರಸ್ತೆಯಲ್ಲಿರುವ ಕಲ್ಲು ಗಣಿಗಾರಿಕೆ ಕ್ವಾರಿ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಚಾಲಕನ ಸಹಿತ ನೀರು ತುಂಬಿದ ಹಳ್ಳಕ್ಕೆ ಬಿದ್ದಿದ್ದ ಸ್ಥಳಕ್ಕೆ ಶನಿವಾರ ಮಧ್ಯಾಹ್ನ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ ಬಳಿಕ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಬಿಟ್ಟಿ ಭಾಗ್ಯಗಳಲ್ಲಿ ಬಡಕುಟುಂಬಕ್ಕೆ ಸಾವೂ ಕೂಡ ಒಂದು ಬಿಟ್ಟಿ ಭಾಗ್ಯವಾಗಿದೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ಕಿಡಿಕಾರಿದರು.
ಘಟನೆ ಸಂಭವಿಸಿ ಎರಡು ದಿನ ಕಳೆದರೂ ಕೂಡ ಒಬ್ಬ ಕೂಲಿ ಕಾರ್ಮಿಕನ ದೇಹವನ್ನು ಜಿಲ್ಲಾಡಳಿತ ಪತ್ತೆಹಚ್ಚಿಲ್ಲ. ಇನ್ನು ತಾಲೂಕು ಆಡಳಿತ ರಾಜಕಾರಣಿ ಹಿಡಿತದಲ್ಲಿ ಸಿಲುಕಿ ಅದ್ವಾನವಾಗಿದೆ. ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಭ್ರಷ್ಟಾಚಾರದಲ್ಲಿ ಅಧಿಕಾರಿಗಳ ಪಾಲುಕೂಡ ಇದ್ದಂತೆ ಕಾಣಿಸುತ್ತಿದೆ ಎಂದು ದೂರಿದರು.ಜಿಲ್ಲಾಧಿಕಾರಿ, ಉಪವಿಭಾಗಧಿಕಾರಿ, ತಹಸೀಲ್ದಾರ್ ಸೇರಿದಂತೆ ಯಾವೊಬ್ಬ ಅಧಿಕಾರಿಯೂ ಕೂಡ ಸ್ಥಳಕ್ಕೆ ಭೇಟಿ ಕೊಟ್ಟು ಚಾಲಕನ ಹುಡುಕುವ ಕಾರ್ಯಕ್ಕೆ ಮುಂದಾಗಿಲ್ಲ ಎಂದರೆ ಯಾವ ರೀತಿಯ ಆಡಳಿತ ನೆಡೆಸುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಘಟನೆಯಲ್ಲಿ ಚಾಲಕ ಲಕ್ಷ್ಮಣ ಬದುಕುಳಿದಿರುವ ಸಾಧ್ಯತೆಯಿಲ್ಲ. ಹಾಗಾಗಿ ಆತನ ದೇಹವನ್ನು ಪತ್ತೆಹಚ್ಚಿ ಕುಟುಂಬಸ್ಥರಿಗೆ ಸೂಕ್ತ ನ್ಯಾಯ ಒದಗಿಸದಿದ್ದರೆ ನಾವೇ ಮುಂದೆ ನಿಂತು ಹುಡುಕಾಟ ನಡೆಸಿ ನಮ್ಮದೇ ರೀತಿಯಲ್ಲಿ ನ್ಯಾಯ ಒದಗಿಸಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.