ಕನ್ನಡಪ್ರಭ ವಾರ್ತೆ ಸಕಲೇಶಪುರ
ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ-75ರ ವಿವಿಧ ಭಾಗಗಳಲ್ಲಿ ಭೂಕುಸಿತ ತಡೆಗೆ ಸುಮಾರು 64 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಕಳೆದ ವರ್ಷಕ್ಕೆ ಹೋಲಿಸಿದರೆ ಮಂಜರಾಬಾದ್ ಕೋಟೆ ಸಮೀಪದ ರಸ್ತೆ ಕಾಮಗಾರಿ ಉತ್ತಮವಾಗಿ ಪೂರ್ಣಗೊಂಡಿದ್ದು, ಈ ಭಾಗದಲ್ಲಿ ರಸ್ತೆ ಸಂಚಾರ ವ್ಯವಸ್ಥೆ ಸುಧಾರಿಸಿದೆ. ತಡೆಗೋಡೆಗಳು ಹಾಗೂ ಗ್ಯಾಬಿಯನ್ ವಾಲ್ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳು ಇನ್ನೂ ಪ್ರಗತಿಯಲ್ಲಿದ್ದು, ಮಳೆಗಾಲದಲ್ಲಿ ಅಪಾಯ ಸಂಭವಿಸುವ ಪ್ರದೇಶಗಳಲ್ಲಿ ವಿಶೇಷ ಗಮನ ಹರಿಸಲಾಗಿದೆ ಎಂದು ಹೇಳಿದರು.ಆನೆಮಹಲ್ ಪ್ರದೇಶದಲ್ಲಿ ಕಳೆದ ವರ್ಷ ಭೂಕುಸಿತದಿಂದ ಹೆಚ್ಚಿನ ಸಮಸ್ಯೆಗಳು ಎದುರಾಗಿದ್ದವು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅಗತ್ಯ ಕಾಮಗಾರಿಗಳನ್ನು ಈಗಾಗಲೇ ಕೈಗೆತ್ತಿಕೊಂಡಿದ್ದು, ಮಳೆಗಾಲ ಆರಂಭವಾಗಿರುವುದರಿಂದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಆನೆಮಹಲ್ ನಿಂದ ಮಾರನಹಳ್ಳಿವರೆಗಿನ ವಿವಿಧ ತಡೆ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಮಳೆಗಾಲದಲ್ಲಿ ವಾಹನ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.ಯೋಜನೆಯ ವಿವಿಧ ಘಟಕಗಳ ಕಾರ್ಯಕ್ಷಮತೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ನೀರು ಎತ್ತುವ ಪ್ರಕ್ರಿಯೆ ಸುಗಮವಾಗಿ ನಡೆಯಲು ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಹುಲಿಮನೆ ತಿಮ್ಮಣ್ಣ, ತಹಸೀಲ್ದಾರ್ ಸುಪ್ರೀತಾ, ಎತ್ತಿನಹೊಳೆ ಯೋಜನೆ ಸಿಬ್ಬಂದಿಗಳಾದ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮೊಹಮ್ಮದ್ ಇಕ್ಬಾಲ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್
ಪ್ರಮೋದ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಲ್ಮಾ, ಎಂಜಿನಿಯರ್ ಪ್ರಸನ್ನ ಹಾಗೂ ಇನಿತ್ತರ ಅಧಿಕಾರಿಗಳು ಇದ್ದರು.