ಬಿಎಸ್‌ಎಫ್ ಯೋಧ ಕುಮಾರಸ್ವಾಮಿಗೆ ಜಿಲ್ಲಾಡಳಿತದಿಂದ ಗೌರವ

KannadaprabhaNewsNetwork |  
Published : Nov 14, 2026, 01:45 AM IST
13ಎಚ್ಎಸ್ಎನ್12 :  | Kannada Prabha

ಸಾರಾಂಶ

ಬಿಎಸ್‌ಎಫ್‌ನ ೯೯ನೇ ಬೆಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್ (ಜಿಡಿ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಮಾರಸ್ವಾಮಿ ಅವರು ಮೊಹಾಲಿಯಲ್ಲಿ ಸೇವೆಯಲ್ಲಿದ್ದ ಸಂದರ್ಭದಲ್ಲಿ ಚಂಡೀಗಢದ ಆಸ್ಪತ್ರೆಯಲ್ಲಿ ಲಿವರ್ ವೈಫಲ್ಯ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟರು. ಅವರ ಪಾರ್ಥಿವ ಶರೀರವನ್ನು ಹಾಸನದ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತಂದು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಎಸ್ಪಿ ಶುಭನ್ವಿತಾ, ಜಿಲ್ಲಾ ಪಂಚಾಯತ್ ಸಿಇಒ ಶುಭಂ ಶುಕ್ಲಾ, ಎಡಿಸಿ ಕೃಷ್ಣಮೂರ್ತಿ, ಅರೆಸೇನೆ ಪಡೆ ಸಂಘದ ಅಧ್ಯಕ್ಷ ನಾಗೇಶ್ ಸೇರಿದಂತೆ ಇತರರು ಪುಷ್ಪಗುಚ್ಛ ಅರ್ಪಿಸಿ ಬಳಿಕ ಪೊಲೀಸ್ ಹಾಗೂ ಜಿಲ್ಲಾಡಳಿತದ ವತಿಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಹಾಸನಕರ್ತವ್ಯ ನಿರ್ವಹಿಸುತ್ತಿದ್ದಾಗ ಆನಾರೋಗ್ಯದಿಂದ ಮೃತಪಟ್ಟ ನಗರದ ವಿಜಯನಗರದ ನಿವಾಸಿ ಬಿಎಸ್‌ಎಫ್ ಯೋಧ ಕುಮಾರಸ್ವಾಮಿ (೪೪) ಅವರ ಪಾರ್ಥೀವ ಶರೀರಕ್ಕೆ ಶುಕ್ರವಾರ ಜಿಲ್ಲಾಡಳಿತ ಹಾಗೂ ಸಾರ್ವಜನಿಕರು ಅಂತಿಮ ಗೌರವ ಸಲ್ಲಿಸಿದರು.ಬಿಎಸ್‌ಎಫ್‌ನ ೯೯ನೇ ಬೆಟಾಲಿಯನ್‌ನಲ್ಲಿ ಕಾನ್‌ಸ್ಟೆಬಲ್ (ಜಿಡಿ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಮಾರಸ್ವಾಮಿ ಅವರು ಮೊಹಾಲಿಯಲ್ಲಿ ಸೇವೆಯಲ್ಲಿದ್ದ ಸಂದರ್ಭದಲ್ಲಿ ಚಂಡೀಗಢದ ಆಸ್ಪತ್ರೆಯಲ್ಲಿ ಲಿವರ್ ವೈಫಲ್ಯ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಮೃತಪಟ್ಟರು. ಅವರ ಪಾರ್ಥಿವ ಶರೀರವನ್ನು ಹಾಸನದ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತಂದು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಈ ವೇಳೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಎಸ್ಪಿ ಶುಭನ್ವಿತಾ, ಜಿಲ್ಲಾ ಪಂಚಾಯತ್ ಸಿಇಒ ಶುಭಂ ಶುಕ್ಲಾ, ಎಡಿಸಿ ಕೃಷ್ಣಮೂರ್ತಿ, ಅರೆಸೇನೆ ಪಡೆ ಸಂಘದ ಅಧ್ಯಕ್ಷ ನಾಗೇಶ್ ಸೇರಿದಂತೆ ಇತರರು ಪುಷ್ಪಗುಚ್ಛ ಅರ್ಪಿಸಿ ಬಳಿಕ ಪೊಲೀಸ್ ಹಾಗೂ ಜಿಲ್ಲಾಡಳಿತದ ವತಿಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.ಅರಸೇನಾಪಡೆ ಸಂಘಟನೆ ಅಧ್ಯಕ್ಷ ನಾಗೇಶ್ ಮಾತನಾಡಿ, ದೇಶದ ಗಡಿ ರಕ್ಷಣಾ ಪಡೆಯಾದ ಬಿಎಸ್‌ಎಫ್‌ನಲ್ಲಿ ಸತತ ೨೪ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಯೋಧ ಕುಮಾರಸ್ವಾಮಿ ಅವರ ನಿಧನಕ್ಕೆ ಅರಸೇನಾಪಡೆ ಸಂಘಟನೆ ತೀವ್ರ ಸಂತಾಪ ವ್ಯಕ್ತಪಡಿಸಿದರು. ಈ ಹಿಂದೆ ಜಿಲ್ಲೆಯಲ್ಲಿ ಯೋಧರ ಅಂತಿಮ ಗೌರವ ಸಲ್ಲಿಸುವ ವಿಚಾರದಲ್ಲಿ ನಿರ್ಲಕ್ಷ್ಯ ಕಂಡುಬರುತ್ತಿತ್ತು. ಆದರೆ ಈ ಬಾರಿ ಜಿಲ್ಲಾಡಳಿತ ಮುತುವರ್ಜಿ ವಹಿಸಿ ಯೋಧನಿಗೆ ಗೌರವ ಸಲ್ಲಿಸಿರುವುದು ಸಂತಸದ ಸಂಗತಿ. ದೇಶಕ್ಕಾಗಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ. ಈ ನಿಟ್ಟಿನಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಜಿಲ್ಲಾಡಳಿತಕ್ಕೆ ಅರಸೇನಾಪಡೆ ಸಂಘಟನೆಯ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.

ನಂತರ ಮೆರವಣಿಗೆ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಯೋಧನ ಮೃತದೇಹವನ್ನು ನಿವಾಸಕ್ಕೆ ಕೊಂಡೊಯ್ಯಲಾಯಿತು. ಇದೇ ವೇಳೆ ತಹಸೀಲ್ದಾರ್‌ ಗೀತಾ, ಮಾಜಿ ಶಾಸಕ ಪ್ರೀತಂಗೌಡರ ತಂದೆ ಜವರೇಗೌಡ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳ ಸರ್ವತೋಮುಖ ಪ್ರಗತಿಗೆ ಶ್ರಮಿಸಿ
ಎಸಿಯಾಗಿ ಪದೋನ್ನತಿ ಹೊಂದಿದ ತಹಸೀಲ್ದಾರ್‌ ಬೋಸಗಿ