ಯುಪಿಎಸ್‌ಸಿ 101ನೇ ರ‍್ಯಾಂಕ್‌: ಸೌಭಾಗ್ಯಗೆ ಜಿಲ್ಲಾಡಳಿತ ಸನ್ಮಾನ

KannadaprabhaNewsNetwork |  
Published : Apr 18, 2024, 02:20 AM IST
ಕ್ಯಾಪ್ಷನಃ17ಕೆಡಿವಿಜಿ43ಃದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ಯುಪಿಎಸ್‌ಸಿ ಪರೀಕ್ಷೆಯಲ್ಲಿ 101ನೇ ರ‍್ಯಾಂಕ್ ಗಳಿಸಿದ  ಸೌಭಾಗ್ಯ ಬೀಳಗಿಮಠರಿಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅಭಿನಂದಿಸಿ ಸನ್ಮಾನಿಸಿದರು. | Kannada Prabha

ಸಾರಾಂಶ

ದ್ವಿತೀಯ ಪಿ.ಯು.ಸಿ.ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101ನೇ ರ‍್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಅವರಿಗೆ ಬುಧವಾರ ಅಭಿನಂದನಾ ಪತ್ರ ಹಾಗೂ ಪುಸ್ತಕವನ್ನು ಉಡುಗೊರೆಯಾಗಿ ನೀಡುವ ಮೂಲಕ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸನ್ಮಾನಿಸಿ ಗೌರವಿಸಿದರು.

ಕನ್ನಡಪ್ರಭ ವಾರ್ತೆ, ದಾವಣಗೆರೆ

ದ್ವಿತೀಯ ಪಿ.ಯು.ಸಿ.ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ ನಡೆಸುವ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆಯಲ್ಲಿ 101ನೇ ರ‍್ಯಾಂಕ್ ಪಡೆದ ಸೌಭಾಗ್ಯ ಬೀಳಗಿಮಠ ಅವರಿಗೆ ಬುಧವಾರ ಅಭಿನಂದನಾ ಪತ್ರ ಹಾಗೂ ಪುಸ್ತಕವನ್ನು ಉಡುಗೊರೆಯಾಗಿ ನೀಡುವ ಮೂಲಕ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸನ್ಮಾನಿಸಿ ಗೌರವಿಸಿದರು.

ದಾವಣಗೆರೆಯಲ್ಲಿ ಓದಿ, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಯಾವುದೇ ಕೋಚಿಂಗ್ ಕೇಂದ್ರದಲ್ಲಿ ತರಬೇತಿ ಪಡೆಯದೇ, ಪುಸ್ತಕಗಳನ್ನು ಓದುವ ಮೂಲಕ ಸ್ವಂತ ಓದಿನಿಂದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ರ‍್ಯಾಂಕ್ ಪಡೆದಿದ್ದಾರೆ. ಈ ಹಿನ್ನೆಲೆ ಹೆಮ್ಮೆಯಿಂದ ಸೌಭಾಗ್ಯ ಅವರನ್ನು ಸನ್ಮಾನಿಸಲಾಗುತ್ತಿದೆ ಎಂದ ಜಿಲ್ಲಾಧಿಕಾರಿ ಹೇಳಿದರು.

ನಿಮ್ಮ ಸೇವಾ ಅವಧಿಯಲ್ಲಿ ಸಾಧನೆ ಮಾಡಿದವರಿಗೆ ಇದೇ ರೀತಿ ಸನ್ಮಾನಿಸಿ, ಗೌರವಿಸುವ ಕೆಲಸ ಮಾಡಬೇಕು. ಇದರಿಂದ ಅವರು ಸಹ ನಿಮ್ಮಂತೆ ಶ್ರಮಪಟ್ಟು ಓದಿ, ಉನ್ನತ ಸ್ಥಾನಕ್ಕೇರುವರು ಎಂದರು.

ಅಪರ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಭಾನು ಎಸ್. ಬಳ್ಳಾರಿ, ಸೌಭಾಗ್ಯ ತಂದೆ ಶರಣಯ್ಯಸ್ವಾಮಿ, ತಾಯಿ ಶರಣಮ್ಮ, ಸಹೋದರ, ಮಾರ್ಗದರ್ಶನ ಮಾಡಿದ ಪ್ರೊ. ಡಾ.ಅಶ್ವಿನಿ, ಜಿಲ್ಲಾ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

22 ವರ್ಷದ ಸೌಭಾಗ್ಯ ಬೀಳಗಿಮಠ ಅವರು ಪ್ರೌಢಶಿಕ್ಷಣವನ್ನು ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ನಿವಾಸದ ಹತ್ತಿರದ ಎಜು ಏಷಿಯಾ ಶಾಲೆಯಲ್ಲಿ ಮತ್ತು ಪಿಯುಸಿ ಶಿಕ್ಷಣವನ್ನು ಸಿದ್ಧಗಂಗಾ ಶಾಲೆಯಲ್ಲಿ ಪೂರೈಸಿ, ಧಾರವಾಡದಲ್ಲಿ ಕೃಷಿ ಪದವಿ ಪಡೆದಿದ್ದಾರೆ.

- - - -17ಕೆಡಿವಿಜಿ43ಃ:

ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ಯುಪಿಎಸ್‌ಸಿ ಪರೀಕ್ಷೆಯಲ್ಲಿ 101ನೇ ರ‍್ಯಾಂಕ್ ಗಳಿಸಿದ ಸೌಭಾಗ್ಯ ಬೀಳಗಿಮಠ ಅವರಿಗೆ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಅಭಿನಂದಿಸಿ ಸನ್ಮಾನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನ್ಯಕೋಮಿನವನ ಜತೆ ಮದುವೆ: ಮೊಮ್ಮಗಳ ಶಿಶು ಕೊಂ*ದ ಅಜ್ಜಿ!
ಕಾಳಸಂತೆಯಲ್ಲಿ ಎಲ್ಪಿಜಿ ಸೇಲ್‌ ಮೇಲೆ ನಿಗಾ - ಅಧಿಕಾರಿಗಳಿಗೆ ಸಿಎಸ್‌ ಸೂಚನೆ