ದೇವಿರಮ್ಮನವರ ಜಾತ್ರೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

KannadaprabhaNewsNetwork |  
Published : Nov 03, 2026, 01:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರುಪ್ರಸಿದ್ಧ ದೇವಿರಮ್ಮನವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಭಕ್ತಾದಿಗಳ ಸುರಕ್ಷತೆ ಹಾಗೂ ಸುಗಮ ದರ್ಶನಕ್ಕೆ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಭಕ್ತರಿಗೆ ಯಾವುದೇ ರೀತಿಯ ತೊಂದರೆ ಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಜಿಲ್ಲಾಡಳಿತದ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮನವಿ ಮಾಡಿದರು.

(ಎರಡು ಪೋಟೊ ಬಳಸಿ)

ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ । ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ದೇವಿರಮ್ಮನ ಬೆಟ್ಟಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಪ್ರಸಿದ್ಧ ದೇವಿರಮ್ಮನವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಭಕ್ತಾದಿಗಳ ಸುರಕ್ಷತೆ ಹಾಗೂ ಸುಗಮ ದರ್ಶನಕ್ಕೆ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಭಕ್ತರಿಗೆ ಯಾವುದೇ ರೀತಿಯ ತೊಂದರೆ ಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಜಿಲ್ಲಾಡಳಿತದ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಮನವಿ ಮಾಡಿದರು.ಸೋಮವಾರ ಬೆಳಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳ ತಂಡದೊಂದಿಗೆ ದೇವಿರಮ್ಮನ ಬೆಟ್ಟಕ್ಕೆ ಭೇಟಿ ನೀಡಿ ಜಾತ್ರಾ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಜಾತ್ರೆ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಆಗ ಮಿಸುವ ನಿರೀಕ್ಷೆಯಿರುವುದರಿಂದ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.ದೇವಿರಮ್ಮ ಜಾತ್ರಾ ಮಹೋತ್ಸವದ ಸಿದ್ಧತೆ ಕುರಿತು ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ದೇವಸ್ಥಾನ ಸಮಿತಿಯವರೊಂದಿಗೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಭಕ್ತರ ಸುರಕ್ಷತೆ, ಬೆಟ್ಟ ಹತ್ತುವ ಮಾರ್ಗದ ವ್ಯವಸ್ಥೆ, ತುರ್ತು ಪರಿಸ್ಥಿತಿ ನಿರ್ವಹಣೆ, ಆರೋಗ್ಯ ಸೇವೆ ಹಾಗೂ ಪೊಲೀಸ್ ಬಂದೋಬಸ್ತ್ ಕುರಿತು ಚರ್ಚಿಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಬಳಿಕ ಅಧಿಕಾರಿಗಳ ತಂಡದೊಂದಿಗೆ ಬೆಟ್ಟದ ವಿವಿಧ ಸ್ಥಳಗಳನ್ನು ಖುದ್ದಾಗಿ ಪರಿಶೀಲಿಸಲಾಗಿದೆ ಎಂದರು.ಬೆಟ್ಟ ಹತ್ತುವ ಮಾರ್ಗದಲ್ಲಿ ಭಕ್ತರ ಸುರಕ್ಷತೆ ದೃಷ್ಟಿಯಿಂದ ಅಗ್ನಿಶಾಮಕ, ಆರೋಗ್ಯ ಮತ್ತು ಪೊಲೀಸ್ ಇಲಾಖೆಯಿಂದ ಅಣಕು ಕಾರ್ಯಾಚರಣೆ (ಮಾಕ್ ಡ್ರಿಲ್) ನಡೆಸಲಾಗಿದೆ. ಅಪಾಯಕಾರಿ ಹಾಗೂ ಜಾರುವ ಸ್ಥಳಗಳಲ್ಲಿ ಹೊಸ ಹಗ್ಗಗಳನ್ನು ಅಳವಡಿ ಸಲಾಗಿದೆ. ತುರ್ತು ಸಂದರ್ಭದಲ್ಲಿ ಬೆಟ್ಟದಿಂದ ಭಕ್ತರನ್ನು ಸುರಕ್ಷಿತವಾಗಿ ಕೆಳಕ್ಕೆ ಕರೆತರಲು ಅಗ್ನಿಶಾಮಕ ಸಿಬ್ಬಂದಿಗೆ ಹೆಡ್‌ಟಾರ್ಚ್, ಸ್ಟ್ರೆಚರ್ ಹಾಗೂ ಹಾರ್ನೆಸ್ ಸೇರಿದಂತೆ ಅಗತ್ಯ ಸುರಕ್ಷತಾ ಉಪಕರಣಗಳನ್ನು ಒದಗಿಸಲಾಗಿದೆ ಎಂದು ವಿವರಿಸಿದರು.ಬೆಟ್ಟದ ಮೇಲ್ಭಾಗದಲ್ಲಿ ತುರ್ತು ಚಿಕಿತ್ಸೆಗೆ ವೈದ್ಯಕೀಯ ತಂಡ ಹಾಗೂ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುವುದು. ಬೆಟ್ಟದ ವಿವಿಧ ಸ್ಥಳಗಳಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಪರಸ್ಪರ ತ್ವರಿತ ಸಂಪರ್ಕ ಸಾಧಿಸಲು ವಿಶೇಷ ವೈರ್‌ಲೆಸ್ ಸಂವಹನ ಸಾಧನಗಳನ್ನು ನೀಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ತಕ್ಷಣ ಸ್ಪಂದಿಸುವಂತೆ ಸಂಬಂಧಪಟ್ಟ ಇಲಾಖೆಗಳ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಹೇಳಿದರು.ನವೆಂಬರ್ 7ರಂದು ಬೆಳಗ್ಗೆ 6 ರಿಂದ ದೇವಿರಮ್ಮನವರ ಪೂಜಾ ಕಾರ್ಯ ಆರಂಭವಾಗಲಿದ್ದು, ಬೆಳಗ್ಗೆ 10 ಬೆಳಗ್ಗೆ ಪೂಜೆಗಳು ಮುಕ್ತಾಯಗೊಳ್ಳಲಿವೆ. ಬಳಿಕ ಭಕ್ತರಿಗೆ ಬೆಟ್ಟ ಹತ್ತಿ ದೇವಿ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗುವುದು. ನ. 7 ಮತ್ತು 8ರಂದು ಎರಡು ದಿನಗಳು ಭಕ್ತರಿಗೆ ದರ್ಶನದ ವ್ಯವಸ್ಥೆ ಇರಲಿದೆ.ರಾತ್ರಿ ವೇಳೆಯಲ್ಲಿ ಬೆಟ್ಟ ಹತ್ತುವುದು ಅಪಾಯಕಾರಿ ಹಾಗೂ ಸುರಕ್ಷತೆ ದೃಷ್ಟಿಯಿಂದ ಸೂಕ್ತವಲ್ಲದ ಕಾರಣ ಈ ಬಾರಿ ರಾತ್ರಿ ಬೆಟ್ಟ ಹತ್ತಲು ಅವಕಾಶ ನೀಡುವುದಿಲ್ಲ. ಮಧ್ಯಾಹ್ನದ ನಂತರ ಬರುವ ಭಕ್ತರಿಗೆ ಸಂಜೆ 4 ಗಂಟೆವರೆಗೆ ಮಾತ್ರ ಬೆಟ್ಟ ಹತ್ತಲು ಕೊನೆ ಪ್ರವೇಶ ನೀಡಲಾಗುವುದು. ನಿಗದಿತ ಸಮಯದ ನಂತರ ಪ್ರವೇಶಕ್ಕೆ ಅವಕಾಶವಿಲ್ಲ. ಆದ್ದರಿಂದ ಭಕ್ತರು ಸಮಯಕ್ಕೆ ಸರಿಯಾಗಿ ಆಗಮಿಸಿ ಜಿಲ್ಲಾಡಳಿತದ ಸೂಚನೆ ಪಾಲಿಸಬೇಕು ಎಂದು ಮನವಿ ಮಾಡಿದರು.ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ದೇವಸ್ಥಾನ ಸಮಿತಿ ಸಮನ್ವಯದಿಂದ ಜಾತ್ರೆ ಎಲ್ಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಭಕ್ತರ ಸುರಕ್ಷತೆ ಮತ್ತು ಸುಗಮ ದರ್ಶನಕ್ಕೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವ ಜನಿಕರು ಸಹಕರಿಸಬೇಕು. ಇದೇ ಸಂದರ್ಭದಲ್ಲಿ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಜಿಲ್ಲಾಧಿಕಾರಿ ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ತಹಸೀಲ್ದಾರ್ ರೇಷ್ಮಾ ಶೆಟ್ಟಿ, ದೇವಸ್ಥಾನ ಸಮಿತಿ ಅಧ್ಯಕ್ಷ ಕುಲಶೇಖರ್ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ