ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯಲ್ಲಿ ನಕಲಿ ಕ್ಲಿನಿಕ್‌ಗಳನ್ನು ಬೇರು ಸಹಿತ ಕಿತ್ತೊಗೆಯಲು ಜಿಲ್ಲಾಡಳಿತ ಪಣ ತೊಟ್ಟಿದ್ದು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಕಾರ್ಯಚರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೆ.ಪಿ.ಎಂ.ಇ.ಎ ಜಿಲ್ಲಾ ಕುಂದು ಕೊರತೆಗಳ ನಿವಾರಣಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವೈದ್ಯಕೀಯ ಅರ್ಹತೆ ಇಲ್ಲದೆ ಚಿಕಿತ್ಸೆ ನೀಡುವುದು ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕರ ಮತ್ತು ಕಾನೂನುಬಾಹಿರ ಎಂದು ಅವರು ಎಚ್ಚರಿಸಿದರು.ಜಿಲ್ಲೆಯಲ್ಲಿ ೧೪೮ ನಕಲಿ ಕ್ಲಿನಿಕ್
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು ೧೪೮ ನಕಲಿ ಕ್ಲಿನಿಕ್‌ಗಳನ್ನು ಗುರುತಿಸಲಾಗಿದೆ. ಈ ಪೈಕಿ ೪೮ ಕ್ಲಿನಿಕ್‌ಗಳನ್ನು ತಾಲೂಕು ಪರಿಶೀಲನಾ ತಂಡವು ಸೀಜ್ ಮಾಡಿದೆ. ೬೦ ಕ್ಲಿನಿಕ್‌ಗಳ ನಕಲಿ ವೈದ್ಯರು ಮಳಿಗೆಗಳನ್ನು ಮುಚ್ಚಿ ಪರಾರಿಯಾಗಿದ್ದಾರೆ. ೧೪ ಕ್ಲಿನಿಕ್‌ಗಳ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ೪ ಕ್ಲಿನಿಕ್‌ಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.3 ಕ್ಲಿನಿಕ್‌ಗಳ ನೋಂದಣಿ ರದ್ದು
ವೈದ್ಯಕೀಯ ವಿದ್ಯಾರ್ಹತೆ ಇಲ್ಲದೆ ಅಕ್ರಮವಾಗಿ ವೈದ್ಯಕೀಯ ಚಟುವಟಿಕೆಗಳನ್ನು ನಡೆಸುತ್ತಿದ್ದವರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಮುಂದುವರಿಸಿದೆ. ಇತ್ತೀಚೆಗೆ ಪತ್ತೆಯಾದ ೭ ಕ್ಲಿನಿಕ್‌ಗಳ ಪೈಕಿ ೩ ಕ್ಲಿನಿಕ್‌ಗಳ ನೋಂದಣಿ ರದ್ದುಪಡಿಸಲಾಗಿದೆ ಹಾಗೂ ನೋಂದಣಿಯಾಗದ 4 ಅನಧಿಕೃತ ಕ್ಲಿನಿಕ್‌ಗಳಿಗೆ ದಂಡ ವಿಧಿಸಿ, ಅವುಗಳ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಲಾಗಿದೆ ಎಂದರು.ಕೆ.ಪಿ.ಎಂ.ಇ.ಎ ಕಾಯ್ದೆಯನ್ವಯ ನೋಂದಾಯಿತ ವೈದ್ಯರು ಅರ್ಹ ವೈದ್ಯಕೀಯ ಪದ್ಧತಿಯಲ್ಲಿ ಮಾತ್ರ ಚಿಕಿತ್ಸೆ ನೀಡುತ್ತಿರುವುದರ ಬಗ್ಗೆ ನಿಗಾ ವಹಿಸಲು ಹಾಗೂ ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿ ನಿರ್ವಹಣೆ ಬಗ್ಗೆ ಗಮನಹರಿಸಲು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.ಟಿಎಚ್‌ಒಗೆ ಮಾಹಿತಿ ನೀಡಿ
ಸಾರ್ವಜನಿಕರು ಸಹ ತಮ್ಮ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಕ್ರಮವಾಗಿ ವೈದ್ಯಕೀಯ ಚಟುವಟಿಕೆಗಳು ನಡೆಯುತ್ತಿರುವುದು ಕಂಡುಬಂದಲ್ಲಿ ಕೂಡಲೇ ತಾಲ್ಲೂಕು ಆರೋಗ್ಯಾಧಿಕಾರಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್ ಕುಮಾರ್.ಎಸ್, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ನಾರಾಯಣಸ್ವಾಮಿ, ಜಿಲ್ಲಾ ಆಯು? ಅಧಿಕಾರಿ ಡಾ.ಉಮಾ, ಜಿಲ್ಲಾ ಔ?ಧ ನಿಯಂತ್ರಣಾಧಿಕಾರಿ ಶ್ಯಾಮಲ, ಎನ್.ಜಿ.ಓ ಡಾ. ಕೆ.ಎಸ್. ಶಂಕರ್ ಇದ್ದರು.