ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಭಾನುವಾರ ಯುದ್ದ ಅಥವಾ ಇನ್ನಿತರ ವಿಪತ್ತು ನಿರ್ವಹಣೆ ಕುರಿತು ತುರ್ತು ಕ್ರಮ ಕೈಗೊಳ್ಳಲು ಗೂಗಲ್ ಮೀಟ್ ಮೂಲಕ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರರೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮೂರು ತಿಂಗಳವರೆಗೆ ಬೇಕಾಗುವಷ್ಟು ಆಹಾರ ಧಾನ್ಯಗಳ ದಾಸ್ತಾನು ಇಡಲಾಗುತ್ತಿದೆ.ಅಕ್ರಮವಾಗಿ ದಾಸ್ತಾನು ಹಾಗೂ ಕಾಳಸಂತೆಯಲ್ಲಿ ಮಾರಾಟವಾಗದಂತೆ ಹೆಚ್ಚಿನ ನಿಗಾ ವಹಿಸಲು ಆಹಾರ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಕುಡಿಯಲು ನೀರು ಹಾಗೂ ಆರೋಗ್ಯ ಸೌಲಭ್ಯಕ್ಕಾಗಿ ಬೆಡ್ ಹಾಗೂ ಔಷಧಿಗಳ ದಾಸ್ತಾನು ಇಡಲು ತಿಳಿಸಲಾಗಿದೆ. ತುರ್ತು ವಾಹನಗಳಿಗೆ ಬೇಕಾಗುವ ಇಂಧನ ವ್ಯವಸ್ಥೆ ಸಹ ಮಾಡಿಕೊಳ್ಳಲಾಗುತ್ತಿದೆ. ಅಗ್ನಿಶಾಮಕ ದಳದವರು ದಿನದ 24 ಗಂಟೆಗಳ ಕಾಲ ಸನ್ನದ್ದ ಸ್ಥಿತಿಯಲ್ಲಿರಲು ಸೂಚಿಸಲಾಗಿದೆ.ಸಾಮಾಜಿಕ ತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳ ಮೇಲೆ ನಿರಂತರ ನಿಗಾವಹಿಸಲಾಗುತ್ತಿದ್ದು, ವದಂತಿ ಹರಡುವುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ವದಂತಿಗಳಿಗೆ ಕಿವಿಗೊಡದೇ ಸಾರ್ವಜನಿಕರು ಸೂಕ್ತ ತಿಳಿವಳಿಕೆ ಹೊಂದುವ ಅಗತ್ಯವಿದೆ. ದಿನದ 24 ಗಂಟೆಗಳ ಕಾಲ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರಯಲಾಗಿದೆ. ಸಹಾಯವಾಣಿ ಕೇಂದ್ರಗಳು ವ್ಯವಸ್ಥಿತವಾಗಿ ನಡೆಯಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲು ಸೂಚಿಸಲಾಗಿದೆ. ಸಹಾಯವಾಣಿ ಕೇಂದ್ರದ ಪ್ರತಿ ದಿನದ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಸಹಾಯವಾಣಿಕೇಂದ್ರ ಸ್ಥಾಪನೆ: