ಎಬಿವಿಪಿ ಆಗ್ರಹಕ್ಕೆ ಜಿಲ್ಲಾಡಳಿತದ ಸ್ಪಂದನೆ: ಆಜ್ರಿಯಿಂದ ಕುಂದಾಪುರಕ್ಕೆ ಸರ್ಕಾರಿ ಬಸ್

KannadaprabhaNewsNetwork |  
Published : Jun 21, 2024, 01:03 AM IST
ಬಸ್20 | Kannada Prabha

ಸಾರಾಂಶ

ಈಗಾಗಲೇ ಆಜ್ರಿಯಿಂದ ನೇರಳಕಟ್ಟೆ, ತಲ್ಲೂರು ಮಾರ್ಗವಾಗಿ ಕುಂದಾಪುರಕ್ಕೆ ಮಾಡಿದ ಬಸ್ ವ್ಯವಸ್ಥೆಯಿಂದಾಗಿ ಕೇವಲ ವಿದ್ಯಾರ್ಥಿಗಳಿಗಲ್ಲದೆ ಸಾರ್ವಜನಿಕರಿಗೂ ಸಹಾಯಕವಾಗಿದೆ.

ಕನ್ನಡಪ್ರಭ ವಾರ್ತೆ ಕುಂದಾಪುರ

ವಿದ್ಯಾರ್ಥಿಗಳ ಆಗ್ರಹದಂತೆ ಆಜ್ರಿಯಿಂದ ಕುಂದಾಪುರಕ್ಕೆ ಸರ್ಕಾರಿ ಬಸ್ ಓಡಾಟ ಆರಂಭಿಸಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ಘಟಕದ ವತಿಯಿಂದ ಗ್ರಾಮಾಂತರ ಭಾಗಗಳಿಂದ ಕುಂದಾಪುರ ನಗರಕ್ಕೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ವಾರದ ಹಿಂದೆ ಶಾಸ್ತ್ರಿ ಸರ್ಕಲ್‌ನಿಂದ ತಾಲೂಕು ಆಫೀಸ್‌ ವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿತ್ತು. ಈ ಸಂದರ್ಭ ಕುಂದಾಪುರ ತಹಸೀಲ್ದಾರ್‌, ಕೆಎಸ್ಆರ್‌ಟಿಸಿ ಡಿಪೋ ಮ್ಯಾನೇಜರ್ ಸೇರಿದಂತೆ, ಕುಂದಾಪುರ ಮತ್ತು ಬೈಂದೂರು ಶಾಸಕರಿಗೆ ಆಗ್ರಹ ಮನವಿ ಸಲ್ಲಿಸಲಾಗಿತ್ತು. ಇದರ ಪರಿಣಾಮ ಮೊದಲ ಹಂತದಲ್ಲಿ ಆಜ್ರಿಯಿಂದ ಕುಂದಾಪುರಕ್ಕೆ ಸರ್ಕಾರಿ ಬಸ್ ಓಡಾಟ ಆರಂಭಿಸಿದೆ ಎಂದು ಎಬಿವಿಪಿ ಸಂತಸ ವ್ಯಕ್ತಪಡಿಸಿದೆ.

ಈಗಾಗಲೇ ಆಜ್ರಿಯಿಂದ ನೇರಳಕಟ್ಟೆ, ತಲ್ಲೂರು ಮಾರ್ಗವಾಗಿ ಕುಂದಾಪುರಕ್ಕೆ ಮಾಡಿದ ಬಸ್ ವ್ಯವಸ್ಥೆಯಿಂದಾಗಿ ಕೇವಲ ವಿದ್ಯಾರ್ಥಿಗಳಿಗಲ್ಲದೆ ಸಾರ್ವಜನಿಕರಿಗೂ ಸಹಾಯಕವಾಗಿದೆ. ಅನೇಕ ಸಮಯದಿಂದ ಈ ಮಾರ್ಗಕ್ಕೆ ಬಸ್‌ನ ಬೇಡಿಕೆ ಇದ್ದರೂ ಅಧಿಕಾರಿಗಳಿಗೆ ವಿವಿಧ ರೀತಿಯಲ್ಲಿ ಮನವಿ ಸಲ್ಲಿಸಿದರೂ ಸಮರ್ಪಕ ಬಸ್ ವ್ಯವಸ್ಥೆ ಮಾಡಿರಲಿಲ್ಲ. ಈಗ ಹೋರಾಟ ನಡೆಸಿದ ಐದು ದಿನಗಳ ಒಳಗೆ ಬಸ್ ಬಿಟ್ಟಿರುವುದು ವಿದ್ಯಾರ್ಥಿಗಳ ಧ್ವನಿಯ ಬೆಲೆಯನ್ನು ಸಾರುತ್ತದೆ.

ಇನ್ನು ಸುಮಾರು 15ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಸ್ ವ್ಯವಸ್ಥೆ ಮಾಡುವ ಅವಶ್ಯಕತೆ ಇದ್ದು, ಆದಷ್ಟು ಬೇಗ ಇದು ಆಗುವಂತೆ ಎಬಿವಿಪಿಯು ವಿದ್ಯಾರ್ಥಿಗಳ ಆಗ್ರಹದ ಧ್ವನಿಯಾಗಿ ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದೆ ಮತ್ತು ಮುಂದೆ ಬರುವ 15 ದಿನಗಳ ಒಳಗೆ ಎಲ್ಲ ಮಾರ್ಗಗಳಿಗೆ ಬಸ್ ವ್ಯವಸ್ಥೆ ಆಗುವ ಭರವಸೆಯೂ ಇದೆ ಎಂದು ಎಬಿವಿಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗದ್ದಲದ ನಡುವೆ, ಚರ್ಚೆಯೇ ಇಲ್ಲದೆ ದ್ವೇಷ ಭಾಷಣ ತಡೆ ಮಸೂದೆ ಪಾಸ್‌
ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!