ದೇವಿಗೆರೆಯಲ್ಲಿ ಸೂಕ್ತ ಪಾರ್ಕಿಂಗ್, ಶೌಚಾಲಯ, ಕುಡಿಯುವ ನೀರು, ಕಸ ವಿಲೇವಾರಿ ಹಾಗೂ ಸಾರ್ವಜನಿಕರ ಓಡಾಟಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ದೇವಿಗೆರೆಯ ದಕ್ಷಿಣ ಭಾಗದಲ್ಲಿರುವ ಈಶ್ವರ ಮತ್ತು ಗಣಪತಿ ದೇವಸ್ಥಾನಗಳಿಗೂ ಸೂಕ್ತ ನಿರ್ವಹಣೆ ಹಾಗೂ ಮೂಲಸೌಕರ್ಯ ಕಲ್ಪಿಸಬೇಕು ಎಂದು ವೇಣುಗೋಪಾಲ್ ಆಗ್ರಹಿಸಿದರು.
ಕನ್ನಡಪ್ರಭವಾರ್ತೆ, ಹಾಸನ
ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ದೇವಿಗೆರೆಯ ಸಮಗ್ರ ಅಭಿವೃದ್ಧಿ ಮತ್ತು ಸ್ವಚ್ಛತೆಗೆ ಜಿಲ್ಲಾಡಳಿತ ಹಾಗೂ ಮುಜರಾಯಿ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ಚನ್ನಕೇಶವಸ್ವಾಮಿ ಮತ್ತು ಕೊಳಲು ಗೋಪಾಲಕರಷ್ಣಸ್ವಾಮಿ ಸೇವಾ ಕೈಂಕರ್ಯ ಟ್ರಸ್ಟ್ ಅಧ್ಯಕ್ಷ ಜಯರಾಂ ಮತ್ತು ಬಿಜೆಪಿ ಕಾರ್ಯಕರ್ತ ವೇಣುಗೋಪಾಲ್ ಹಾಗೂ ಇತರರು ಆಗ್ರಹಿಸಿದ್ದಾರೆ.
ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ದೇವಿಗೆರೆ ಭಕ್ತರ ಪಾಲಿಗೆ ಮಹತ್ವದ ಧಾರ್ಮಿಕ ಕ್ಷೇತ್ರವಾಗಿದೆ. ಇಂತಹ ಸ್ಥಳ ಸೂಕ್ತ ನಿರ್ವಹಣೆಯಿಲ್ಲದೆ ಕಸದ ಸಮಸ್ಯೆ ಹಾಗೂ ಸ್ವಚ್ಛತೆ ಕೊರತೆಯಿಂದ ಬಳಲುತ್ತಿರುವುದು ವಿಷಾದನೀಯ ಎಂದರು.
ದೇವಿಗೆರೆಯಲ್ಲಿ ಸೂಕ್ತ ಪಾರ್ಕಿಂಗ್, ಶೌಚಾಲಯ, ಕುಡಿಯುವ ನೀರು, ಕಸ ವಿಲೇವಾರಿ ಹಾಗೂ ಸಾರ್ವಜನಿಕರ ಓಡಾಟಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು. ದೇವಿಗೆರೆಯ ದಕ್ಷಿಣ ಭಾಗದಲ್ಲಿರುವ ಈಶ್ವರ ಮತ್ತು ಗಣಪತಿ ದೇವಸ್ಥಾನಗಳಿಗೂ ಸೂಕ್ತ ನಿರ್ವಹಣೆ ಹಾಗೂ ಮೂಲಸೌಕರ್ಯ ಕಲ್ಪಿಸಬೇಕು ಎಂದು ವೇಣುಗೋಪಾಲ್ ಆಗ್ರಹಿಸಿದರು.
ಹಾಸನದ ಐತಿಹಾಸಿಕ ಕೊಳಲು ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯುವ ಗೋಕುಲಾಷ್ಟಮಿ ಉತ್ಸವಕ್ಕೆ ಸರ್ಕಾರ ಮತ್ತು ಮುಜರಾಯಿ ಇಲಾಖೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಮನವಿ ಮಾಡಿದರು.
ಹಾಸನಾಂಬ ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ, ದೇವಿಗೆರೆ ಸೇರಿದಂತೆ ನಗರದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲೂ ಮೂಲಸೌಕರ್ಯ ಮತ್ತು ಸ್ವಚ್ಛತೆಗೆ ಆದ್ಯತೆ ನೀಡುವುದು ಅಗತ್ಯವಾಗಿದೆ. ಹೀಗಾಗಿ ಅದರ ಸಂರಕ್ಷಣೆ ಮತ್ತು ಅಭಿವೃದ್ಧಿ ಕುರಿತು ಜಿಲ್ಲಾಡಳಿತ ಸಮಗ್ರ ಯೋಜನೆ ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.