ಬಳ್ಳಾರಿ: ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ವಿಧಾನಗಳ (ಲಿಂಗ ಆಯ್ಕೆ ಮತ್ತು ನಿಷೇಧ) ಕಾಯ್ದೆ 1994 ರಡಿ ರಾಜ್ಯ ಸರ್ಕಾರವು ಮುಂದಿನ ಮೂರು ವರ್ಷಗಳ ಅವಧಿಗೆ ಜಿಲ್ಲಾ ಸಲಹಾ ಸಮಿತಿಯನ್ನು ಪುನರ್ ರಚಿಸಿ ಆದೇಶಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದರು.
ಜಿಲ್ಲೆಯಲ್ಲಿ ಕಾನೂನುಬಾಹಿರ ಭ್ರೂಣಲಿಂಗ ಪತ್ತೆ ಕಾರ್ಯಗಳಿಗೆ ಕಡಿವಾಣ ಹಾಕುವುದು, ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ನಿಗಾ ಇಡುವುದು ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಈ ಸಮಿತಿಯು ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.
ಪಿಸಿ-ಪಿಎನ್‌ಡಿಟಿ ಕಾಯ್ದೆ 1994 ರ ಕಲಂ 17ರ ಉಪಕಲಂ 5 ಮತ್ತು 6 ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಸಮಿತಿಗಳನ್ನು ಪುನರ್ ರಚಿಸಲಾಗಿದೆ. ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟುವುದು ಮತ್ತು ಲಿಂಗ ಅನುಪಾತದ ಸಮತೋಲನವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಸಮಿತಿ ಜಿಲ್ಲಾ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದರು.ಮೂರು ವರ್ಷಗಳ ಅವಧಿ:
ಕಾನೂನು ಬಾಹಿರವಾಗಿ ಲಿಂಗ ಪತ್ತೆ ಮಾಡುವ ಕೇಂದ್ರಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪ್ರಾಧಿಕಾರಕ್ಕೆ ಈ ಸಮಿತಿಯು ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಬೇಕು. ಸಮಾಜದಲ್ಲಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಲಿಂಗ ತಾರತಮ್ಯ ನಿವಾರಣೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳಿಗೆ ಸಮಿತಿ ಉತ್ತೇಜನ ನೀಡಲಿದೆ ಎಂದರು.
ಜಿಲ್ಲೆಯಲ್ಲಿ 87 ಸ್ಕ್ಯಾನಿಂಗ್ ಕೇಂದ್ರ ಸಕ್ರಿಯ:
ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ವೀರೇಂದ್ರ ಕುಮಾರ್, ಸ್ತ್ರೀರೋಗ ತಜ್ಞರಾದ ಡಾ.ಪ್ರಣೀತಾ ಅಜಯ್, ಮಕ್ಕಳ ತಜ್ಞ ಡಾ.ಯೋಗಾನಂದ ರೆಡ್ಡಿ.ವೈ.ಸಿ., ರೇಡಿಯಾಲಜಿಸ್ಟ್ ಡಾ.ಕೃಷ್ಣ ಮೂರ್ತಿ.ಎನ್., ಕಾನೂನು ತಜ್ಞ ಮಂಜುನಾಥ ಪೂಜಾರ್, ರೆಡ್ ಕ್ರಾಸ್ ಸಂಸ್ಥೆಯ ಸಮಾಜ ಸೇವಕ ಎ.ಹೆಚ್.ಅಶೋಕಕುಮಾರ್ ಜೈನ್, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ, ವಿಷಯ ನಿರ್ವಾಹಕ ಗೋಪಾಲ್ ಕೆ.ಹೆಚ್., ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಪ್ರಕಾಶ್ ಎಸ್.ಕರ್ಜಗಿ, ರೇಣುಕಾ ಜಡಗನ್ನನವರ್, ಆರೋಗ್ಯ ನಿರೀಕ್ಷಣಾಧಿಕಾರಿ ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.