ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಸ್ತಿತ್ವಕ್ಕೆ: ನಾಗರಾಜು

KannadaprabhaNewsNetwork |  
Published : Jul 31, 2026, 02:00 AM IST
೨೭ಕೆಎಂಎನ್‌ಡಿ-೪ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಂಡ್ಯ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಟಿ.ವಿ. ನಾಗರಾಜು ಮಾತನಾಡಿದರು. | Kannada Prabha

ಸಾರಾಂಶ

ಆ.೭ರಿಂದ ೯ರವರೆಗೆ ಗದಗ್ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಎಂ.ಟಿ.ಬಿ.ಸೈಕ್ಲಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಮಂಡ್ಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ.೨ರಂದು ಟೂರ್ನ್‌ಮೆಂಟ್‌ಗೆ ಆಯ್ಕೆ ಮಾಡಿಕೊಳ್ಳಲು ಸಮಯ ನಿಗದಿಪಡಿಸಲಾಗಿದ್ದು, ಆಸಕ್ತರು ಅಂದು ಬೆಳಗ್ಗೆ ೮.೩೦ಕ್ಕೆ ಆಗಮಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯ ಮಕ್ಕಳು, ವಿದ್ಯಾರ್ಥಿಗಳಿಗೆ ಸೈಕ್ಲಿಂಗ್ ಕ್ರೀಡೆ ಕಲಿಸುವ ಉದ್ದೇಶದಿಂದ ಮಂಡ್ಯ ಜಿಲ್ಲಾ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಸ್ತಿತ್ವಕ್ಕೆ ತರಲಾಗಿದೆ ಎಂದು ಜಿಲ್ಲಾಧ್ಯಕ್ಷ ಟಿ.ವಿ.ನಾಗರಾಜು ತಿಳಿಸಿದರು.

ರಾಷ್ಟ್ರೀಯ ಮತ್ತು ರಾಜ್ಯ ಅಸೋಸಿಯೇಷನ್ ಸಮ್ಮತಿ ಮೇರೆಗೆ ಇದೇ ಜು.೨೫ರಂದು ಅಸೋಸಿಯೇಷನನ್ನು ಅಸ್ತಿತ್ವಕ್ಕೆ ತರಲಾಗಿದೆ. ಇದರಿಂದ ಜಿಲ್ಲೆಯಲ್ಲಿರುವ ೧೨ ವರ್ಷದಿಂದ ೨೩ ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರು ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಲು ಅನುಕೂಲವಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಆ.೭ರಿಂದ ೯ರವರೆಗೆ ಗದಗ್ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಎಂ.ಟಿ.ಬಿ.ಸೈಕ್ಲಿಂಗ್ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಮಂಡ್ಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆ.೨ರಂದು ಟೂರ್ನ್‌ಮೆಂಟ್‌ಗೆ ಆಯ್ಕೆ ಮಾಡಿಕೊಳ್ಳಲು ಸಮಯ ನಿಗದಿಪಡಿಸಲಾಗಿದ್ದು, ಆಸಕ್ತರು ಅಂದು ಬೆಳಗ್ಗೆ ೮.೩೦ಕ್ಕೆ ಆಗಮಿಸಬೇಕು ಎಂದು ಸಲಹೆ ನೀಡಿದರು.

ಅರ್ಹ ಸೈಕ್ಲಿಸ್ಟ್‌ಗಳು ಭಾಗವಹಿಸಲು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವರನ್ನು ಪ್ರೋತ್ಸಾಹಿಸುವಂತೆ ಎಂಡಿಸಿಎಸಿಎ ಶಾಲಾ ಕಾಲೇಜುಗಳು, ಸೈಕ್ಲಿಂಗ್ ಕ್ಲಬ್‌ಗಳು, ಕ್ರೀಡಾ ಅಕಾಡೆಮಿಗಳು, ಪೋಷಕರು ಹಾಗೂ ಸೈಕ್ಲಿಂಗ್ ಆಸಕ್ತರಲ್ಲಿ ಅವರು ಮನವಿ ಮಾಡಿದರು.

ಸೈಕ್ಲಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸುವಂತಹ ಸೈಕಲ್‌ಗಳಿಗೆ ಸುಮಾರು ೧ ರಿಂದ ೧೦ ಲಕ್ಷ ರು. ವೆಚ್ಚವಾಗುತ್ತಿದ್ದು, ಅದನ್ನು ದಾನಿಗಳ ಮೂಲಕ ಖರೀದಿಸಿ ಸಾಧಕರಿಗೆ ನೀಡಲಾಗುವುದು. ಇದರೊಂದಿಗೆ ಇತರೆ ವಿದ್ಯಾರ್ಥಿಗಳ ಕಲಿಕೆಗೂ ಉಪಯೋಗಿಸಿಕೊಳ್ಳುವುದು, ಸ್ಪರ್ಧೆಗಳಲ್ಲಿ ಭಾಗವಹಿಸಲು ಬಳಕೆ ಮಾಡಿಕೊಳ್ಳಲಾಗುವುದು ಎಂದರು.

ಸೈಕ್ಲಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಲು ನೋಂದಣಿಗಾಗಿ ೯೯೧೬೧೩೬೩೩೫ ಸಂಖ್ಯೆಯನ್ನು ಸಂಪರ್ಕಿಸುವಂತೆ ಅವರು ಕೋರಿದರು.

ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಜಿಲ್ಲಾ ಕಾರ್ಯದರ್ಶಿ ಧನ್ಯಸುಂದರ್ ಅವರು ಗೋಷ್ಠಿಯಲ್ಲಿದ್ದರು.

ಮಂಡ್ಯ ವಿವಿಯಲ್ಲಿ ನಾಳೆ ಹಲವು ವಿಷಯಗಳ ಕುರಿತು ಜಾಗೃತಿ ಕಾರ್ಯಕ್ರಮ

ಮಂಡ್ಯ: ಶ್ರೀ ಮ.ನಿ.ಪ್ರ.ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆ ಮಾದಕ (ಡ್ರಗ್ಸ್) ವ್ಯಸನ ವಿರೋಧಿ, ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆ, ಬಾಲ ಗರ್ಭಿಣಿ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಮಂಡ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಡ್ಯ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಮಂಡ್ಯ ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಶಾಸಕ ಪಿ.ರವಿಕುಮಾರ್ ಉದ್ಘಾಟಿಸಲಿದ್ದಾರೆ.ಡೀಸಿ ಡಾ.ಕುಮಾರ ಘನ ಉಪಸ್ಥಿತಿಯಲ್ಲಿ ಮಂಡ್ಯ ವಿಶ್ವವಿದ್ಯಾಲಯದ ಕುಲಸಚಿವ ಎಂ.ಪಿ.ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಜಿಪಂ ಸಿಇಒ ಕೆ.ಆರ್.ನಂದಿನಿ, ಜಿಲ್ಲಾ ಎಸ್ಪಿ ಶೋಭಾರಾಣಿ ವಿ. ಜೆ., ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಗೀತಾ ಲಕ್ಷ್ಮಿ, ಮಂಡ್ಯ ವಿವಿ ಕುಲಪತಿ ಪ್ರೊ. ಕೆ.ಶಿವಚಿತ್ತಪ್ಪ ಆಗಮಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಾದಕ (ಡ್ರಗ್ಸ್) ವ್ಯಸನ ವಿರೋಧಿ ಮತ್ತು ಬಾಲ ಗರ್ಭಿಣಿ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಕ್ಲಿನಿಕಲ್ ಸೈಕಾಲಜಿಸ್ಟ್ ಮೊಹಮದ್ ಸುಹೇಲ್ ಮತ್ತು ಬಾಲ್ಯ ವಿವಾಹ ಮತ್ತು ಪೋಕ್ಸೋ ಕಾಯ್ದೆ ಕುರಿತು ಮಂಡ್ಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಯೋಗೇಶ್ ಎನ್ ಟಿ ಉಪನ್ಯಾಸ ನೀಡಲಿದ್ದಾರೆ. ಮಂಡ್ಯ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಟಿ.ಕೆ ಹರೀಶ್ ಗಣ್ಯರನ್ನು ಸ್ವಾಗತಿಸಲಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಳೆದು ಹೋದ ಮೊಬೈಲ್ ಪತ್ತೆಹಚ್ಚುವಲ್ಲಿ ಜಿಲ್ಲಾ ಪೊಲೀಸರ ಸಾಧನೆ
ರೈತರ ಹೊಲದಲ್ಲಿ ಧರಣಿ ನಡೆಸಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್