ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೆ.5ರಂದು ನಗರದ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನ ಅಂಗವಾಗಿ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪುರಸ್ಕೃತರು ಮತ್ತು ದಾವಣಗೆರೆ ಉತ್ತರ ಮತ್ತು ದಕ್ಷಿಣ ವಲಯದ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.
ಅಂದು ಬೆಳಗ್ಗೆ 10.30 ಗಂಟೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚಿತ್ರಕಲಾ ಪ್ರದರ್ಶನ ಭಾವಚಿತ್ರಗಳ ಅನಾವರಣ ಮಾಡುವರು.ಮುಖ್ಯ ಅತಿಥಿಗಳಾಗಿ ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಚಿದಾನಂದ ಎಂ. ಗೌಡ, ಕೆ.ಎಸ್ ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್ ಪಾಲ್ಗೊಳ್ಳುವರು.
ಅಲ್ಲದೇ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಅಧ್ಯಕ್ಷ ಆಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಎನ್.ಜಯದೇವ ನಾಯ್ಕ, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜ್, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಪಾಲಿಕೆ ಆಯುಕ್ತೆ ರೇಣುಕಾ, ತಹಸೀಲ್ದಾರ್ ಡಾ.ಅಶ್ವಥ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ವೀರೇಶ್ ಎಸ್.ಒಡೇನ್‌ಪುರ ಭಾಗವಹಿಸುವರು. ನಿವೃತ್ತ ಉಪನ್ಯಾಸಕ ಎ.ಬಿ.ರಾಮಚಂದ್ರಪ್ಪ ಉಪನ್ಯಾಸ ನೀಡುವರು.- - -
(ಸಾಂದರ್ಭಿಕ ಚಿತ್ರ)