ಜಿಲ್ಲಾ ಕೇಂದ್ರ ಗ್ರಂಥಾಲಯ ಆಡಳಿತ ಕಚೇರಿ ಉದ್ಘಾಟನೆ

KannadaprabhaNewsNetwork |  
Published : Feb 18, 2025, 12:30 AM IST
ಉದ್ಘಾಟನೆ ಬಳಿಕ ಜತೆಯಾಗಿ ಕುಶಲೋಪರಿ ನಡೆಸುತ್ತಿರುವ ಜನಪ್ರತಿನಿಧಿಗಳು. | Kannada Prabha

ಸಾರಾಂಶ

ಯೆಯ್ಯಾಡಿಯ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣವಾದ ಜಿಲ್ಲಾ ಕೇಂದ್ರ ಗ್ರಂಥಾಲಯದ ಆಡಳಿತ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸೋಮವಾರ ಉದ್ಘಾಟಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಪ್ರಸ್ತುತ ಸಮಾಜದಲ್ಲಿ ಓದುವ ಹವ್ಯಾಸ ನಶಿಸುತ್ತಿದೆ. ಗ್ರಂಥಾಲಯಗಳ ಸದ್ಭಳಕೆ ಆಗಬೇಕಾದರೆ ಓದುವ ಹವ್ಯಾಸ ಹೆಚ್ಚಬೇಕು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಯೆಯ್ಯಾಡಿಯ ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ನಿರ್ಮಾಣವಾದ ಜಿಲ್ಲಾ ಕೇಂದ್ರ ಗ್ರಂಥಾಲಯದ ಆಡಳಿತ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಸೋಮವಾರ ಉದ್ಘಾಟಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಪ್ರಸ್ತುತ ಸಮಾಜದಲ್ಲಿ ಓದುವ ಹವ್ಯಾಸ ನಶಿಸುತ್ತಿದೆ. ಗ್ರಂಥಾಲಯಗಳ ಸದ್ಭಳಕೆ ಆಗಬೇಕಾದರೆ ಓದುವ ಹವ್ಯಾಸ ಹೆಚ್ಚಬೇಕು ಎಂದು ಹೇಳಿದರು.

ಓದುವ ಹವ್ಯಾಸ ಬೆಳೆದಂತೆ ವಿಮರ್ಶೆಯ ಮನೋಭಾವ ವಿಕಸಿತಗೊಂಡು ಸರಿ- ತಪ್ಪುಗಳ ಅರಿವು ಮೂಡುತ್ತದೆ. ಪುಸ್ತಕಗಳು ಜ್ಞಾನ ನೀಡುವ ಮೂಲ. ಓದುವುದರಿಂದ ಜಗತ್ತಿನೊಂದಿಗೆ ನಮ್ಮ ಸಂಬಂಧ ಏನು ಎಂಬುದು ತಿಳಿಯುತ್ತದೆ. ಈ ನಿಟ್ಟಿನಲ್ಲಿ ಈಗ ಉದ್ಘಾಟನೆಯಾಗಿರುವ ಆಡಳಿತ ಕಟ್ಟಡದ ಪೂರ್ಣ ಉಪಯೋಗ ಜನರಿಗೆ ಸಿಗುವಂತಾಗಲಿ ಎಂದು ಆಶಿಸಿದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಜಯ ವಿಭವ ಸ್ವಾಮಿ, ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್‌, ಗೇರು ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾ​ಕಾರಿ ಗಾಯತ್ರಿ, ಎಂಎಲ್‌ಸಿ ಐವನ್‌ ಡಿಸೋಜ, ಪಾಲಿಕೆ ಸದಸ್ಯರಾದ ಶಕಿಲಾ ಕಾವ ಮತ್ತು ಎಸಿ ವಿನಯರಾಜ್‌ ಮತ್ತಿತರರು ಇದ್ದರು..............

ಮಾತಿನ ಚಕಮುಖಿ

ಕಾರ್ಯಕ್ರಮದಲ್ಲಿ ಮಾತನಾಡಿದ ವೇದವ್ಯಾಸ ಕಾಮತ್‌, ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದು ಮುಖ್ಯವಲ್ಲ, ಅಭಿವೃದ್ದಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವುದೂ ಮುಖ್ಯ. ಜಿಲ್ಲಾ ಗ್ರಂಥಾಲಯ ಕೇಂದ್ರ ಕಚೇರಿಯ ನೂತನ ಕಟ್ಟಡದ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿರುವುದು ನನ್ನ ಭಾಗ್ಯ. ನಿಮಗೂ ಕೂಡ ಮುಂದಿನ ದಿನಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗುವ ಅವಕಾಶ ಸಿಗಲಿ ಎಂದು ಹೇಳಿದ್ದಕ್ಕೆ ಎಂಎಲ್‌ಸಿ ಐವನ್‌ ಡಿಸೋಜ, ಸಚಿವ ದಿನೇಶ್‌ ಗುಂಡೂರಾವ್‌ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆಯಿತು. ಈ ವೇಳೆ ಮಾತನಾಡಿದ ಕಾರ್ಪೊರೇಟರ್‌ ಎಸಿ ವಿನಯರಾಜ್‌ ಅವರಿಗೆ ಕಾಮತ್‌ ಏರುದನಿಯಲ್ಲಿ ಗದರಿಸಿದ ಪ್ರಸಂಗವೂ ನಡೆಯಿತು.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ