ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಕುಶಾಲನಗರ ಸಮಿತಿ ಅಧ್ಯಕ್ಷ ಕೆ.ಎಸ್.ನಾಗೇಶ್‌

KannadaprabhaNewsNetwork |  
Published : Oct 10, 2024, 02:17 AM IST
ಚಿತ್ರ :  8ಎಂಡಿಕೆ3: ಕುಶಾಲನಗರ ಸ್ಥಾನೀಯ ಸಮಿತಿಯ ಅಧ್ಯಕ್ಷರಾಗಿ ಕೆ.ಎಸ್.ನಾಗೇಶ್ ಅವಿರೋಧವಾಗಿ ಆಯ್ಕೆಯಾದರು.  | Kannada Prabha

ಸಾರಾಂಶ

ಕೊಡಗು ಜಿಲ್ಲಾ ಚೇಂಬರ್‌ ಆಫ್‌ ಕಾಮರ್ಸ್‌ನ ಕುಶಾನಗರ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ಕೆ.ಎಸ್‌. ನಾಗೇಶ್‌ ಅವಿರೋಧವಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ಕುಶಾಲನಗರ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ಕೆ. ಎಸ್. ನಾಗೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಸಾಲಿನ ಅಧ್ಯಕ್ಷರಾಗಿದ್ದ ರವೀಂದ್ರ ವಿ. ರೈ ಅವರು ವೈಯಕ್ತಿಕ ಕಾರಣದಿಂದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ಕನ್ನಿಕಾ ಇಂಟರ್ ನ್ಯಾಷನಲ್ ಹೋಟೆಲ್ ಸಭಾಂಗಣದಲ್ಲಿ ಉಪಾಧ್ಯಕ್ಷ ಎಂ.ಡಿ.ರಂಗಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಕಾರ್ಯದರ್ಶಿಯಾಗಿದ್ದ ಕೆ.ಎಸ್.ನಾಗೇಶ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ರವೀಂದ್ರ ರೈ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಚಿಂತನೆ ನಡೆಸಿದ್ದರು. ಆ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ನೂತನ ಅಧ್ಯಕ್ಷ ನಾಗೇಶ್ ಅವರು ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ. ಆರ್. ನಾಗೇಂದ್ರ ಪ್ರಸಾದ್ ಸಲಹೆ ನೀಡಿದರು. ಜಿಲ್ಲಾ ಚೇಂಬರ್ ಮಾತ್ರವಲ್ಲದೆ ರಾಜ್ಯದ ಏಪ್ ಕೆ ಸಿ ಸಿ ಮೂಲಕ ಮಾರ್ಗದರ್ಶನ ಕೊಡಲು ಸಿದ್ದವಿರುತ್ತೆ. ವರ್ತಕರ ಹಿತದೃಷ್ಟಿಯಿಂದ ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಯಾಗುವಂತೆ ನಾಗೇಂದ್ರ ಪ್ರಸಾದ್ ಶುಭ ಹಾರೈಸಿದರು.

ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ಸಂಘಟನಾ ಕಾರ್ಯದರ್ಶಿ ಟಿ.ಆರ್.ಶರವಣ ಕುಮಾರ್ ಮಾತನಾಡಿ, ಸಂಸ್ಥೆಯ ನಿವೇಶನದಲ್ಲಿ ಆದಷ್ಟು ಬೇಗ ಸ್ವಂತ ಕಟ್ಟಡ ನಿರ್ಮಿಸಲು ಅಧ್ಯಕ್ಷರು ಮುನ್ನುಗಬೇಕು. ಅದಕ್ಕೆ ಬೇಕಾದ ಪೂರಕ ವಾತಾವರಣ ಸೃಷ್ಟಿ ಮಾಡಲು ಪದಾಧಿಕಾರಿಗಳು ಮತ್ತು ಸದಸ್ಯರು ಸಹಾಯ ಹಸ್ತ ಚಾಚಬೇಕು ಎಂದು ಕರೆ ನೀಡಿದರು.

ನೂತನ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ಇದು ಅನಿರೀಕ್ಷಿತವಾದ ಜವಾಬ್ದಾರಿ ಲಭಿಸಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿದರು.

ಚೇಂಬರ್ ಖಜಾಂಚಿ ಎನ್.ವಿ.ಬಾಬು, ನಿರ್ದೇಶಕರಾದ ಎಂ.ಕೆ.ದಿನೇಶ್, ಪಿ.ಕೆ.ಜಗದೀಶ್, ಕೆ.ಎನ್.ದೇವರಾಜ್, ಚಂದ್ರು, ಕೆ.ಎಸ್.ರಾಜಶೇಖರ್, ಪಿ.ಎಂ.ಮೋಹನ್, ರೂಪ ವಿನೋದ್, ಅಂಜನ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾರಣ ತಾಣಗಳು ಇಂದು ದುಬಾರಿ ಆಗುತ್ತಿವೆ: ಡಾ.ಶ್ರೀಧರ್‌
5 ವರ್ಷದಲ್ಲಿ ರೈಲ್ವೆ ಕೋಚಿಂಗ್‌ ಟರ್ಮಿನಲ್‌ ದ್ವಿಗುಣಕ್ಕೆ ನಿರ್ಧಾರ